< Rute 2 >
1 E tinha Noemi um parente de seu marido, homem valente e poderoso, da geração de Elimelech: e era o seu nome Boaz.
೧ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
2 E Ruth a moabita disse a Noemi: Deixa-me ir ao campo, e apanharei espigas após daquele em cujos olhos eu achar graça. E ela lhe disse: vai, minha filha.
೨ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.
3 Foi pois, e chegou, e apanhava espigas no campo após dos segadores: e caiu-lhe em sorte uma parte do campo de Boaz, que era da geração de Elimelech.
೩ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
4 E eis que Boaz veio de Beth-lehem, e disse aos segadores: O Senhor seja convosco. E disseram-lhe eles: O Senhor te abençoe.
೪ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.
5 Depois disse Boaz a seu moço, que estava posto sobre os segadores: De quem é esta moça?
೫ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ
6 E respondeu o moço, que estava posto sobre os segadores, e disse: Esta é a moça moabita que voltou com Noemi dos campos de Moab.
೬ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
7 Disse-me ela: Deixa-me colher espigas, e ajunta-las entre as gavelas após dos segadores. Assim ela veio, e desde pela manhã está aqui até agora, a não ser um pouco que esteve sentada em casa
೭ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.
8 Então disse Boaz a Ruth: Não ouves, filha minha? não vás colher a outro campo, nem tão pouco passes daqui: porém aqui te ajuntarás com as minhas moças.
೮ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.
9 Os teus olhos estarão atentos no campo que segarem, e irás após delas; não dei ordem aos moços, que te não toquem? tendo tu sede, vai aos vasos, e bebe do que os moços tirarem.
೯ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.
10 Então ela caiu sobre o seu rosto, e se inclinou à terra: e disse-lhe: Porque achei graça em teus olhos, para que faças caso de mim, sendo eu uma estrangeira?
೧೦ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
11 E respondeu Boaz, e disse-lhe: Bem se me contou quanto fizeste a tua sogra, depois da morte de teu marido: e deixaste a teu pai e a tua mãe, e a terra onde nasceste, e vieste para um povo que de antes não conheceste.
೧೧ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.
12 O Senhor galardoe o teu feito: e seja cumprido o teu galardão do Senhor Deus de Israel, sob cujas asas te vieste abrigar.
೧೨ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
13 E disse ela: Ache eu graça em teus olhos, senhor meu, pois me consolaste, e pois falaste ao coração da tua serva, não sendo eu ainda como uma das tuas criadas.
೧೩ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
14 E, sendo já horas de comer, disse-lhe Boaz: Achega-te aqui, e come do pão, e molha o teu bocado no vinagre. E ela se assentou ao lado dos segadores, e ele lhe deu do trigo tostado, e comeu, e se fartou, e ainda lhe sobejou.
೧೪ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
15 E, levantando-se ela a colher, Boaz deu ordem aos seus moços, dizendo: Até entre as gavelas deixai-a colher, e não lho embaraceis.
೧೫ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;
16 E deixai cair alguns punhados, e deixai-os ficar, para que os colha, e não a repreendais.
೧೬ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.
17 E esteve ela apanhando naquele campo até à tarde: e debulhou o que apanhou, e foi quase um epha de cevada.
೧೭ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
18 E tomou-o, e veio à cidade; e viu sua sogra o que tinha apanhado: também tirou, e deu-lhe o que lhe sobejara depois de fartar-se.
೧೮ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.
19 Então disse-lhe sua sogra: Onde colheste hoje, e onde trabalhaste? bendito seja aquele que te reconheceu. E relatou a sua sogra com quem tinha trabalhado, e disse: O nome do homem com quem hoje trabalhei é Boaz.
೧೯ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.
20 Então Noemi disse a sua nora: bendito seja do Senhor, que ainda não tem deixado a sua beneficência nem para com os vivos nem para com os mortos. Disse-lhe mais Noemi: Este homem é nosso parente chegado, e um dentre os nossos remidores.
೨೦ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
21 E disse Ruth, a moabita: também ainda me disse: Com os moços que tenho te ajuntarás, até que acabem toda a sega que tenho.
೨೧ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’” ಎಂದಳು.
22 E disse Noemi a sua nora, Ruth: Melhor é, filha minha, que saias com as suas moças, para que noutro campo não te encontrem.
೨೨ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
23 Assim, ajuntou-se com as moças de Boaz, para colher até que a sega das cevadas e dos trigos se acabou; e ficou com a sua sogra.
೨೩ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.