< Sofonias 3 >
1 Ai da suja e da contaminada, da cidade opressora.
೧ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!
2 Não ouve a voz, não aceita o castigo: não confia no Senhor; nem se aproximou do seu Deus.
೨ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
3 Os seus príncipes são leões bramantes no meio dela; os seus juízes lobos da tarde, que não deixam os ossos até à manhã.
೩ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.
4 Os seus profetas são levianos, homens aleivosos: os seus sacerdotes profanaram o santuário, e fizeram violência à lei.
೪ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
5 O Senhor, o Justo, está no meio dela; ele não faz iniquidade: cada manhã tira o seu juízo à luz; nunca falta; porém o perverso não conhece a vergonha.
೫ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.
6 Exterminei as nações, as suas torres estão assoladas: fiz desertar as suas praças, até não ficar quem passe: as suas cidades estão destruídas, até não ficar ninguém, até não haver quem as habite.
೬ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.
7 Eu dizia: Certamente me temerás, e aceitarás a correção, para que a sua morada não seja destruída, por tudo pelo que a visitei, mas eles se levantaram de madrugada, corromperam todas as suas obras.
೭ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.
8 Portanto esperai-me a mim, diz o Senhor, no dia em que eu me levantar para o despojo; porque o meu juízo é ajuntar as nações e congregar os reinos, para sobre eles derramar a minha indignação, e todo o ardor da minha ira; porque toda esta terra será consumida pelo fogo do meu zelo.
೮ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.
9 Porque então darei beiço puro aos povos, para que todos invoquem o nome do Senhor, para que o sirvam com um mesmo ombro.
೯“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
10 De além dos rios dos ethiopes, meus zelosos adoradores, e a filha de minha espargida, me trarão sacrifício.
೧೦ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.
11 Naquele dia não te envergonharás de nenhuma das tuas obras, com as quais te rebelaste contra mim; porque então tirarei do meio de ti os que exultam na tua soberba, e tu nunca mais te ensoberbecerás no meu monte santo.
೧೧“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
12 Mas deixarei no meio de ti um povo humilde e pobre; mas eles confiarão no nome do Senhor.
೧೨ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,
13 O resto de Israel não fará iniquidade, nem falará mentira, e na sua boca não se achará língua enganosa; mas serão apascentados, e deitar-se-ão, e não haverá quem os espante.
೧೩ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”
14 Canta alegremente, ó filha de Sião: jubila, ó Israel: goza-te, e exulta de todo o coração, ó filha de Jerusalém.
೧೪ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
15 O Senhor afastou os teus juízos, exterminou o teu inimigo: o Senhor, o rei de Israel, está no meio de ti; tu não verás mais mal algum.
೧೫ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
16 Naquele dia se dirá a Jerusalém: Não temas, ó Sião, não se enfraqueçam as tuas mãos.
೧೬ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
17 O Senhor teu Deus está no meio de ti, poderoso te salvará; ele se deleitará em ti com alegria; calar-se-á por seu amor, regozijar-se-á em ti com júbilo.
೧೭ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
18 Os entristecidos por causa do ajuntamento solemne congregarei, para quem a afronta foi um peso.
೧೮ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
19 Eis que, naquele tempo desfarei a todos os teus opressores, e salvarei a que coxeia, e recolherei a que foi expulsa; e farei deles um louvor e um nome em toda a terra em que foram envergonhados.
೧೯ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.
20 Naquele tempo vos trarei para cá, a saber, no tempo em que vos recolher: certamente farei de vós um nome e um louvor entre todos os povos da terra, quando reconduzir os vossos cativos diante dos vossos olhos.
೨೦ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.