< 2 Crônicas 3 >
1 E começou Salomão a edificar a casa em Jerusalém, no monte Moriá que havia sido mostrado a Davi seu pai, no lugar que Davi havia preparado na eira de Ornã jebuseu.
೧ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
2 E começou a edificar no mês segundo, a dois do mês, no quarto ano de seu reinado.
೨ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.
3 Estas são as medidas de que Salomão fundou o edifício da casa de Deus. A primeira medida foi do comprimento de sessenta côvados; e a largura de vinte côvados.
೩ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.
4 O pórtico que estava na dianteira do comprimento, era de vinte côvados à frente da largura da casa, e sua altura de cento e vinte: e cobriu-o por dentro de ouro puro.
೪ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
5 E forrou a casa maior com madeira de faia, a qual cobriu de bom ouro, e fez ressaltar sobre ela palmas e correntes.
೫ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.
6 Cobriu também a casa de pedras preciosas por excelência: e o ouro era ouro de Parvaim.
೬ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.
7 Assim cobriu a casa, suas vigas, seus umbrais, suas paredes, e suas portas, com ouro; e esculpiu querubins pelas paredes.
೭ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.
8 Fez assim a casa do lugar santíssimo, cujo comprimento era de vinte côvados segundo a largura da frente da casa, e sua largura de vinte côvados: e cobriu-a de bom ouro que pesava seiscentos talentos.
೮ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.
9 E o peso dos pregos teve cinquenta siclos de ouro. Cobriu também de ouro as salas.
೯ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
10 E dentro do lugar santíssimo fez dois querubins esculpidos, os quais cobriram de ouro.
೧೦ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
11 O comprimento das asas dos querubins era de vinte côvados: porque a uma asa era de cinco côvados: a qual chegava até a parede da casa; e a outra asa de cinco côvados, a qual chegava à asa do outro querubim.
೧೧ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
12 Da mesma maneira a uma asa do outro querubim era de cinco côvados: a qual chegava até a parede da casa; e a outra asa era de cinco côvados, que tocava a asa do outro querubim.
೧೨ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
13 Assim as asas destes querubins estavam estendidas por vinte côvados: e eles estavam em pé com os rostos até a casa.
೧೩ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.
14 Fez também o véu de azul, púrpura, carmesim e linho, e fez ressaltar em ele querubins.
೧೪ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.
15 Diante da casa fez duas colunas de trinta e cinco côvados de comprimento, com seus capitéis encima, de cinco côvados.
೧೫ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.
16 Fez também correntes, [como no] compartimento interno, e as pôs sobre os capitéis das colunas: e fez cem romãs, as quais pôs nas correntes.
೧೬ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.
17 E assentou as colunas diante do templo, a uma à mão direita, e a outra à esquerda; e à da mão direita chamou Jaquim, e à da esquerda, Boaz.
೧೭ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.