< Êxodo 21 >
1 E estas são as ordenanças que lhes proporás.
೧“ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;
2 Se comprares servo hebreu, seis anos servirá; mas ao sétimo sairá livre de graça.
೨“‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.
3 Se entrou sozinho, sozinho sairá: se tinha mulher, sairá ele e sua mulher com ele.
೩ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.
4 Se seu amo lhe houver dado mulher, e ela lhe houver dado à luz filhos ou filhas, a mulher e seus filhos serão de seu amo, e ele sairá sozinho.
೪ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”
5 E se o servo disser: Eu amo a meu senhor, a minha mulher e a meus filhos, não sairei livre:
೫ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,
6 Então seu amo o fará chegar aos juízes, e o fará chegar à porta ou ao umbral; e seu amo lhe furará a orelha com ferramenta pontiaguda, e será seu servo para sempre.
೬ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.
7 E quando alguém vender sua filha por serva, não sairá como costumam sair os servos.
೭ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.
8 Se ela não agradar ao seu senhor, o qual não a tomou por esposa, permitirá a ela que se resgate, e ela não a poderá vender a povo estrangeiro, visto que não cumpriu seu compromisso com ela.
೮ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.
9 Mas se a houver desposado com seu filho, fará com ela segundo o costume das filhas.
೯ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.
10 Se tomar para si outra, não diminuirá seu alimento, nem sua porção de roupa, nem o direito conjugal.
೧೦ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.
11 E se nenhuma destas três coisas fizer, ela sairá de graça, e não terá que lhe pagar dinheiro.
೧೧ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
12 O que ferir á alguém, fazendo-lhe assim morrer, ele morrerá.
೧೨ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
13 Mas o que não armou ciladas, mas sim que Deus o pôs em suas mãos, então eu te assinalarei lugar ao qual há de fugir.
೧೩ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.
14 Além disso, se alguém se ensoberbecer contra seu próximo, e o matar traiçoeiramente, de meu altar o tirarás para que morra.
೧೪ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
15 E o que ferir a seu pai ou a sua mãe, morrerá.
೧೫ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.
16 Também o que roubar uma pessoa, e a vender, ou se achar em suas mãos, morrerá.
೧೬ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17 Igualmente o que amaldiçoar a seu pai ou a sua mãe, morrerá.
೧೭ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
18 Ademais, se alguns brigarem, e algum ferir a seu próximo com pedra ou com o punho, e não morrer, mas cair em cama;
೧೮ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
19 Se se levantar e andar fora sobre seu cajado, então será o que lhe feriu absolvido: somente lhe pagará o tempo que esteve parado, e fará que lhe curem.
೧೯ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
20 E se alguém ferir a seu servo ou a sua serva com pau, e morrer sob sua mão, será castigado:
೨೦ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.
21 Mas se durar por um dia ou dois, não será castigado, porque seu dinheiro é.
೨೧ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.
22 Se alguns brigarem, e ferissem a mulher grávida, e esta abortar, mas sem haver morte, será multado conforme o que lhe impuser o marido da mulher e julgarem os juízes.
೨೨ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
23 Mas se houver morte, então pagarás vida por vida,
೨೩ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
24 Olho por olho, dente por dente, mão por meio, pé por pé,
೨೪ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,
25 Queimadura por queimadura, ferida por ferida, golpe por golpe.
೨೫ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.
26 E quando alguém ferir o olho de seu servo, ou o olho de sua serva, e o destruir, lhe dará liberdade por razão de seu olho.
೨೬ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
27 E se tirar o dente de seu servo, ou o dente de sua serva, por seu dente lhe deixará ir livre.
೨೭ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.
28 Se um boi chifrar homem ou mulher, e de resultado morrer, o boi será apedrejado, e não se comerá sua carne; mas o dono do boi será absolvido.
೨೮ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
29 Porém se o boi era chifrador desde o passado, e a seu dono lhe foi feito advertência, e não o houver guardado, e matar homem ou mulher, o boi será apedrejado, e também morrerá seu dono.
೨೯ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
30 Se lhe for imposto resgate, então dará pelo resgate de sua pessoa quanto lhe for imposto.
೩೦ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.
31 Quer tenha chifrado filho, ou tenha chifrado filha, conforme este juízo se fará com ele.
೩೧ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
32 Se o boi chifrar servo ou serva, pagará trinta siclos de prata seu senhor, e o boi será apedrejado.
೩೨ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
33 E se alguém abrir fosso, ou cavar cisterna, e não a cobrir, e cair ali boi ou asno,
೩೩ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
34 O dono da cisterna pagará o dinheiro, ressarcindo a seu dono, e o que foi morto será seu.
೩೪ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
35 E se o boi de alguém ferir ao boi de seu próximo, e este morrer, então venderão o boi vivo, e partirão o dinheiro dele, e também partirão o morto.
೩೫ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.
36 Mas se era notório que o boi era chifrador desde o passado, e seu dono não o houver guardado, pagará boi por boi, e o morto será seu.
೩೬ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.