< Êxodo 38 >

1 Igualmente fez o altar do holocausto de madeira de acácia: seu comprimento de cinco côvados, e sua largura de outros cinco côvados, quadrado, e de três côvados de altura.
ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.
2 E fez-lhe suas pontas a seus quatro cantos, os quais eram da mesma peça, e cobriu-o de bronze.
ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.
3 Fez também todos os utensílios do altar: caldeirões, e tenazes, e bacias, e garfos, e pás: todos os seus utensílios fez de bronze.
ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.
4 E fez para o altar a grelha de bronze, de feitura de rede, que pôs em sua borda por debaixo até o meio do altar.
ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.
5 Fez também quatro anéis de fundição aos quatro extremos da grelha de bronze, para meter as varas.
ವೇದಿಯನ್ನು ಹೊರುವಾಗ ಕೋಲು ಸಿಕ್ಕಿಸುವುದಕ್ಕೋಸ್ಕರ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಕಂಚಿನಿಂದ ಎರಕ ಹೊಯ್ದರು.
6 E fez as varas de madeira de acácia, e cobriu-as de bronze.
ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು.
7 E meteu as varas pelos anéis aos lados do altar, para levá-lo com elas: oco o fez, de tábuas.
ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು.
8 Também fez a pia de bronze, com sua base de bronze, dos espelhos das que vigiavam à porta do tabernáculo do testemunho.
ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.
9 Fez também o átrio; à parte sul as cortinas do átrio eram de cem côvados, de linho torcido:
ಅವರು ಗುಡಾರದ ಅಂಗಳವನ್ನು ಮಾಡಿದರು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಲಾಗಿತ್ತು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು.
10 Suas colunas vinte, com suas vinte bases de bronze: os capitéis das colunas e suas molduras, de prata.
ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳಿದ್ದವು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು.
11 E à parte do norte cortinas de cem côvados: suas colunas vinte, com suas vinte bases de bronze; os capitéis das colunas e suas molduras, de prata.
ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು.
12 À parte do ocidente cortinas de cinquenta côvados: suas colunas dez, e suas dez bases; os capitéis das colunas e suas molduras, de prata.
ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳಿದ್ದವು. ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಮೇಲಿನ ಕಟ್ಟುಗಳು ಬೆಳ್ಳಿಯದ್ದಾಗಿದ್ದವು.
13 E à parte oriental, ao levante, cortinas de cinquenta côvados:
ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರವಾಗಿತ್ತು.
14 Ao um lado cortinas de quinze côvados, suas três colunas, e suas três bases;
ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿದ್ದವು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಗದ್ದಿಗೇ ಕಲ್ಲುಗಳು ಇದ್ದವು.
15 Ao outro lado, de uma parte e da outra da porta do átrio, cortinas de a quinze côvados, suas três colunas, e suas três bases.
ಅಂಗಳದ ದ್ವಾರದ ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳಿದ್ದವು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿದ್ದವು.
16 Todas as cortinas do átrio ao redor eram de linho torcido.
ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು.
17 E as bases das colunas eram de bronze; os capitéis das colunas e suas molduras, de prata; também as cobertas das cabeças delas, de prata: e todas as colunas do átrio tinham molduras de prata.
ಸ್ತಂಭಗಳ ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿದ್ದವು. ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯದ್ದಾಗಿದ್ದವು. ಸ್ತಂಭದ ಬೋದಿಗೆಗಳು ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದ ಎಲ್ಲಾ ಸ್ತಂಭಗಳಿಗೆ ಬೆಳ್ಳಿಯ ಕಟ್ಟುಗಳಿದ್ದವು.
18 E a cortina da porta do átrio foi de obra de bordado, de azul, e púrpura, e carmesim, e linho torcido: o comprimento de vinte côvados, e a altura na largura de cinco côvados, conforme as cortinas do átrio.
ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ ಮಾಡಲಾಗಿತ್ತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು. ಅಗಲ, ಎತ್ತರಗಳಲ್ಲಿ ಅಂಗಳದ ಉಳಿದ ಪರದೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.
19 E suas colunas foram quatro com suas quatro bases de bronze: e seus capitéis de prata; e as cobertas dos capitéis delas e suas molduras, de prata.
ಅವುಗಳಿಗೆ ನಾಲ್ಕು ಸ್ತಂಭಗಳು, ಆ ಕಂಬಗಳಿಗೆ ನಾಲ್ಕು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಅವುಗಳ ಕೊಂಡಿಗಳು ಬೆಳ್ಳಿಯದ್ದಾಗಿದ್ದವು. ಅವುಗಳ ಬೋದಿಗಳ ಹೊದಿಕೆ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದ್ದಾಗಿದ್ದವು.
20 E todas as estacas do tabernáculo e do átrio ao redor foram de bronze.
ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು.
21 Estas são as contas do tabernáculo, do tabernáculo do testemunho, o que foi contado de ordem de Moisés por meio de Itamar, filho de Arão sacerdote, para o ministério dos levitas.
ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.
22 E Bezalel, filho de Uri, filho de Hur, da tribo de Judá, fez todas as coisas que o SENHOR mandou a Moisés.
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.
23 E com ele estava Aoliabe, filho de Aisamaque, da tribo de Dã, artífice, e desenhador, e bordador em material azul, e púrpura, e carmesim, e linho fino.
ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.
24 Todo o ouro gasto na obra, em toda a obra do santuário, o qual foi ouro de oferta, foi vinte e nove talentos, e setecentos e trinta siclos, segundo o siclo do santuário.
ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.
25 E a prata dos contados da congregação foi cem talentos, e mil setecentos setenta e cinco siclos, segundo o siclo do santuário:
ಪರಿಶುದ್ಧಾಲಯದ ನಿಯಮದ ಮೇರೆಗೆ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ಸಂಗ್ರಹಿದ ಬೆಳ್ಳಿಯ ತೂಕವು ಸುಮಾರು 3,400 ಕಿಲೋಗ್ರಾಂ ಇತ್ತು.
26 Meio por cabeça, meio siclo, segundo o siclo do santuário, a todos os que passaram por contagem de idade de vinte anos e acima, que foram seiscentos três mil quinhentos cinquenta.
ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.
27 Houve também cem talentos de prata para fazer de fundição as bases do santuário e as bases do véu: em cem bases cem talentos, a talento por base.
ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು.
28 E dos mil setecentos setenta e cinco siclos fez os capitéis das colunas, e cobriu os capitéis delas, e as cingiu.
ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.
29 E o bronze da oferta foi setenta talentos, e dois mil quatrocentos siclos;
ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು.
30 Do qual fez as bases da porta do tabernáculo do testemunho, e o altar de bronze, e sua grelha de bronze, e todos os utensílios do altar.
ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.
31 E as bases do átrio ao redor, e as bases da porta do átrio, e todas as estacas do tabernáculo, e todas as estacas do átrio ao redor.
ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.

< Êxodo 38 >