< Tiago 3 >
1 Meus irmãos, não sejais muitos de vós mestres, porque sabeis que receberemos um julgamento mais rigoroso.
೧ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
2 Pois todos tropeçamos em muitas coisas. Se alguém não tropeça no que diz, tal homem é completo, e também capaz de refrear todo o corpo.
೨ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
3 Ora, pomos freios nas bocas dos cavalos para nos obedecerem, e [assim] manobramos todo o corpo deles.
೩ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
4 Vede também os navios, sendo tão grandes, e levados por impetuosos ventos, são manobrados com um pequeníssimo leme para onde quer que queira o impulso daquele que dirige.
೪ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
5 Assim também a língua é um pequeno membro, mas se orgulha de grandes coisas. Vede como um pequeno fogo incendeia um grande bosque!
೫ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
6 A língua também [é] um fogo, o mundo da injustiça; a língua está posta entre os nossos membros, contaminando o corpo todo, inflamando o curso da natureza humana, e sendo inflamada pelo inferno. (Geenna )
೬ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna )
7 Pois toda espécie, tanto de animais selvagens como de aves, tanto de répteis como de animais marinhos, é dominível e tem sido dominada pela espécie humana;
೭ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
8 Mas nenhum ser humano consegue dominar a língua; ela é um mal que não se cansa, cheia de veneno mortal.
೮ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
9 Com ela bendizemos o Deus e Pai, e com ela amaldiçoamos os seres humanos, que são feitos à semelhança de Deus.
೯ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10 Da mesma boca procedem benção e maldição. Meus irmãos, isso não deve ser assim.
೧೦ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
11 Acaso uma fonte jorra do mesmo manancial [água] doce e [água] amarga?
೧೧ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
12 Meus irmãos, pode a figueira dar azeitonas, ou a videira figos? E nenhuma fonte dá tanto água salgada como doce.
೧೨ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
13 Quem dentre vós for sábio e inteligente, que mostre pela boa conduta as suas obras em humildade de sabedoria.
೧೩ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
14 Porém, se tendes amarga inveja e rivalidade no vosso coração, não vos orgulheis, nem mintais contra a verdade.
೧೪ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
15 Esta sabedoria não é a que vem do alto, mas sim, terrena, animal, [e] demoníaca.
೧೫ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.
16 Pois onde [há] inveja e rivalidade, ali [há] perturbação e toda obra perversa.
೧೬ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
17 Mas a sabedoria do alto é primeiramente pura, depois pacífica, moderada, tratável, cheia de misericórdia e de bons frutos, imparcial e sem hipocrisia.
೧೭ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
18 E o fruto da justiça é semeado na paz para os que praticam a paz.
೧೮ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.