< 2 Crônicas 36 >

1 Então o povo da terra tomou Jehoahaz, filho de Josias, e o fez rei no lugar de seu pai em Jerusalém.
ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
2 Joaquim tinha vinte e três anos de idade quando começou a reinar; e reinou três meses em Jerusalém.
ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3 O rei do Egito o retirou do cargo em Jerusalém, e multou a terra em cem talentos de prata e um talento de ouro.
ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
4 O rei do Egito fez de Eliakim seu irmão rei sobre Judá e Jerusalém, e mudou seu nome para Jehoiakim. Neco levou Joaaz, seu irmão, e o levou para o Egito.
ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
5 Jehoiakim tinha vinte e cinco anos de idade quando começou a reinar, e reinou onze anos em Jerusalém. Ele fez o que era mau aos olhos de Iavé, seu Deus.
ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
6 Nabucodonosor, rei da Babilônia, enfrentou-o e o amarrou em grilhões para levá-lo à Babilônia.
ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
7 Nabucodonosor também levou alguns dos vasos da casa de Iavé para Babilônia, e os colocou em seu templo na Babilônia.
ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
8 Agora o resto dos atos de Jeoiaquim, e suas abominações que ele fez, e o que foi encontrado nele, eis que estão escritos no livro dos reis de Israel e Judá; e Jeoiaquim, seu filho, reinou em seu lugar.
ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
9 Jehoiachin tinha oito anos quando começou a reinar, e reinou três meses e dez dias em Jerusalém. Ele fez o que era mau aos olhos de Iavé.
ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
10 No retorno do ano, o rei Nabucodonosor o enviou e o trouxe à Babilônia, com os valiosos vasos da casa de Iavé, e fez de Zedequias seu irmão rei sobre Judá e Jerusalém.
೧೦ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
11 Zedequias tinha vinte e um anos de idade quando começou a reinar, e reinou onze anos em Jerusalém.
೧೧ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
12 Ele fez o que era mau aos olhos de Iavé seu Deus. Ele não se humilhou diante de Jeremias, o profeta, falando da boca de Iavé.
೧೨ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
13 Ele também se rebelou contra o rei Nabucodonosor, que o tinha feito jurar por Deus; mas endureceu seu pescoço, e endureceu seu coração contra voltar-se para Iavé, o Deus de Israel.
೧೩ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
14 Além disso, todos os chefes dos sacerdotes e do povo transgrediram muito depois de todas as abominações das nações; e poluíram a casa de Iavé, que ele havia santificado em Jerusalém.
೧೪ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
15 Yahweh, o Deus de seus pais, enviado a eles por seus mensageiros, levantando-se cedo e enviando, porque tinha compaixão de seu povo e de sua morada;
೧೫ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
16 mas eles zombavam dos mensageiros de Deus, desprezavam suas palavras e zombavam de seus profetas, até que a ira de Yahweh surgiu contra seu povo, até que não houve remédio.
೧೬ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
17 Therefore ele trouxe sobre eles o rei dos caldeus, que matou seus jovens com a espada na casa de seu santuário, e não teve compaixão do jovem ou virgem, velho ou enfermo. Ele os entregou a todos em suas mãos.
೧೭ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
18 Todos os vasos da casa de Deus, grandes e pequenos, e os tesouros da casa de Javé, e os tesouros do rei e de seus príncipes, tudo isso ele trouxe para a Babilônia.
೧೮ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
19 Eles queimaram a casa de Deus, derrubaram o muro de Jerusalém, queimaram todos os seus palácios com fogo, e destruíram todos os seus valiosos vasos.
೧೯ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
20 Ele levou aqueles que haviam escapado da espada para Babilônia, e eles foram servos para ele e seus filhos até o reinado do reino da Pérsia,
೨೦ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21 para cumprir a palavra de Javé pela boca de Jeremias, até que a terra tivesse desfrutado de seus sábados. Desde que se desolou, ela guardou o sábado, para cumprir setenta anos.
೨೧ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
22 Agora no primeiro ano de Ciro, rei da Pérsia, para que a palavra de Javé pela boca de Jeremias pudesse ser cumprida, Javé despertou o espírito de Ciro, rei da Pérsia, para que ele fizesse uma proclamação por todo o seu reino, e a colocasse também por escrito, dizendo:
೨೨ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
23 “Ciro, rei da Pérsia, diz: “Javé, o Deus do céu, deu-me todos os reinos da terra; e me ordenou que lhe construísse uma casa em Jerusalém, que é em Judá”. Quem quer que haja entre vós de todo seu povo, Javé, seu Deus, esteja com ele, e o deixe subir”.
೨೩ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.

< 2 Crônicas 36 >