< Tiago 2 >

1 Meus irmãos, não guardem a fé de nosso glorioso Senhor Jesus Cristo com parcialidade.
ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.
2 Pois se entrar em sua sinagoga um homem com um anel de ouro, em roupa fina, e entrar também um pobre homem em roupa suja,
ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,
3 e você prestar atenção especial àquele que veste a roupa fina e diz: “Sente-se aqui em um bom lugar”; e você diz ao pobre homem: “Fique aí” ou “Sente-se ao pé do meu escabelo”
ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,
4 haven você não mostra parcialidade entre vocês, e se torna juiz com pensamentos malignos?
ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
5 Escutem, meus queridos irmãos. Deus não escolheu aqueles que são pobres neste mundo para serem ricos na fé e herdeiros do Reino que ele prometeu àqueles que o amam?
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
6 Mas vocês desonraram o pobre homem. Os ricos não o oprimem e o arrastam pessoalmente diante dos tribunais?
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
7 Eles não blasfemam o honorável nome pelo qual você é chamado?
ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?
8 Entretanto, se você cumprir a lei real de acordo com a Escritura: “Amarás o teu próximo como a ti mesmo”, você se sai bem.
ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
9 Mas se você demonstrar parcialidade, você comete pecado, sendo condenado pela lei como transgressor.
ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.
10 Para quem cumpre toda a lei, e ainda tropeça em um ponto, ele se tornou culpado de todos.
೧೦ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
11 Para aquele que disse: “Não cometa adultério”, também disse: “Não cometa assassinato”. Agora, se não comete adultério, mas mata, tornou-se um transgressor da lei.
೧೧ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.
12 Assim fala e assim faz como homens que devem ser julgados pela lei da liberdade.
೧೨ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.
13 Pois o julgamento é sem misericórdia para aquele que não demonstrou misericórdia. A misericórdia triunfa sobre o julgamento.
೧೩ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
14 De que serve, meus irmãos, se um homem diz ter fé, mas não tem obras? A fé pode salvá-lo?
೧೪ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
15 E se um irmão ou irmã estiver nu e sem comida diária,
೧೫ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
16 e um de vocês lhes disser: “Vão em paz”. Sejam aquecidos e cheios”; no entanto, vocês não lhes deram as coisas que o corpo precisa, de que lhes serve?
೧೬ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?
17 Mesmo assim, a fé, se não tem obras, está morta em si mesma.
೧೭ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
18 Sim, um homem dirá: “Você tem fé, e eu tenho obras”. Mostre-me sua fé sem obras, e eu lhe mostrarei minha fé por minhas obras.
೧೮ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
19 Você acredita que Deus é um só. Você se sai bem. Os demônios também acreditam - e estremecem.
೧೯ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
20 Mas você quer saber, homem vaidoso, que a fé, além das obras, está morta?
೨೦ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
21 Não foi Abraão nosso pai justificado pelas obras, na medida em que ofereceu Isaac seu filho no altar?
೨೧ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
22 Você vê que a fé trabalhou com suas obras, e por obras a fé foi aperfeiçoada.
೨೨ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
23 Assim se cumpriu a Escritura que diz: “Abraão acreditou em Deus, e isso foi considerado a ele como justiça”, e ele foi chamado de amigo de Deus.
೨೩“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
24 Vê-se então que pelas obras um homem é justificado, e não apenas pela fé.
೨೪ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.
25 Da mesma forma, não era Rahab a prostituta também justificada pelas obras quando recebeu os mensageiros e os enviou de outro modo?
೨೫ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
26 Pois como o corpo à parte do espírito está morto, mesmo assim, a fé à parte das obras está morta.
೨೬ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

< Tiago 2 >