< Neemias 4 >
1 Mas quando Sanballat ouviu que estávamos construindo o muro, ficou furioso, e ficou muito indignado, e zombou dos judeus.
೧ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.
2 Ele falou diante de seus irmãos e do exército de Samaria, e disse: “O que esses judeus fracos estão fazendo? Será que eles se fortificarão? Será que eles vão se sacrificar? Será que vão terminar em um dia? Reanimarão as pedras dos montes de lixo, já que estão queimadas?”
೨ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.
3 Now Tobias, o amonita, estava por ele, e disse: “O que eles estão construindo, se uma raposa subisse, ele derrubaria sua parede de pedra”.
೩ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.
4 “Ouça, nosso Deus, pois somos desprezados. Voltem a repreender a sua própria cabeça. Desista deles por um saque em uma terra de cativeiro.
೪ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.
5 “Não cubra sua iniqüidade. Não deixe que o pecado deles seja apagado de diante de você; pois eles insultaram os construtores”.
೫ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.
6 Assim, construímos o muro; e todo o muro foi unido à metade de sua altura, pois o povo tinha uma mente para trabalhar.
೬ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.
7 Mas quando Sambalate, Tobias, os árabes, os amonitas e os ashdoditas ouviram que o conserto dos muros de Jerusalém foi adiante e que as brechas começaram a ser preenchidas, ficaram muito irritados;
೭ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.
8 e todos eles conspiraram juntos para vir e lutar contra Jerusalém, e para causar confusão entre nós.
೮ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.
9 Mas fizemos nossa oração ao nosso Deus, e colocamos uma vigília contra eles dia e noite por causa deles.
೯ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.
10 Judah disse: “A força dos carregadores de fardos está desaparecendo e há muitos escombros, de modo que não somos capazes de construir o muro”.
೧೦ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.
11 Nossos adversários disseram: “Eles não saberão ou verão, até que nós entremos no meio deles e os matemos, e façamos cessar o trabalho”.
೧೧ಮತ್ತು ನಮ್ಮ ವಿರೋಧಿಗಳು, “ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ” ಎಂದುಕೊಳ್ಳುತ್ತಿದ್ದರು.
12 Quando os judeus que viviam por eles vieram, eles nos disseram dez vezes de todos os lugares: “Para onde quer que você se vire, eles nos atacarão”.
೧೨ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.
13 Therefore Coloco guardas nas partes mais baixas do espaço atrás da parede, nos lugares abertos. Eu coloco as pessoas por grupos familiares com suas espadas, suas lanças e seus arcos.
೧೩ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.
14 Olhei, e me levantei, e disse aos nobres, aos governantes, e ao resto do povo: “Não tenham medo deles! Lembrem-se do Senhor, que é grande e impressionante, e lutem por seus irmãos, seus filhos, suas filhas, suas esposas e suas casas”.
೧೪ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.
15 Quando nossos inimigos souberam que era do nosso conhecimento, e que Deus tinha levado seus conselhos a nada, todos nós voltamos à parede, todos ao seu trabalho.
೧೫ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.
16 Daquele tempo em diante, metade dos meus servos fez o trabalho, e metade deles segurava as lanças, os escudos, os arcos e as capas de correio; e os governantes estavam atrás de toda a casa de Judá.
೧೬ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.
17 Aqueles que construíram o muro, e aqueles que carregaram fardos se carregaram; todos com uma de suas mãos faziam o trabalho, e com a outra segurava sua arma.
೧೭ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.
18 Among os construtores, todos usavam sua espada ao seu lado, e assim construíram. Aquele que tocou a trombeta foi por mim.
೧೮ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.
19 I disse aos nobres, e aos governantes e ao resto do povo: “A obra é grande e amplamente difundida, e estamos separados na parede, longe um do outro.
೧೯ನಾನು ಶ್ರೀಮಂತರಿಗೂ, ಅಧಿಕಾರಿಗಳಿಗೂ ಉಳಿದ ಜನರಿಗೂ, “ನಾವು ಮಾಡುವ ಕೆಲಸವು ಬಹಳ ದೊಡ್ಡದೂ, ಅನೇಕ ಸ್ಥಳಗಳಲ್ಲಿ ನಡೆಯುವಂಥದ್ದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.
20 Wherever você ouve o som da trombeta, junte-se a nós”. Nosso Deus lutará por nós”.
೨೦ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು.
21 So nós fizemos o trabalho. Metade das pessoas seguraram as lanças desde a subida da manhã até o aparecimento das estrelas.
೨೧ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು.
22 Likewise ao mesmo tempo eu disse ao povo: “Que todos com seu servo se hospedem em Jerusalém, para que à noite possam ser nossos guardas, e possam trabalhar durante o dia”.
೨೨ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು” ಎಂದು ಅಪ್ಪಣೆ ಮಾಡಿದೆನು.
23 So nem eu, nem meus irmãos, nem meus servos, nem os homens da guarda que me seguiram tiraram nossas roupas. Todos levaram sua arma para a água.
೨೩ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು.