< 1 Corinteni 7 >
1 Și despre cele ce mi-ați scris: este bine pentru om să nu se atingă de femeie.
೧ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;
2 Totuși, ca să evite curvia, fiecare bărbat să aibă soția lui, și fiecare femeie să aibă propriul ei soț.
೨ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
3 Soțul să dea soției bunăvoința datorată; și tot așa și soția, soțului.
೩ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ
4 Soția nu are putere asupra propriului ei trup, ci soțul; și la fel, nici soțul nu are putere asupra propriului său trup, ci soția.
೪ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
5 Să nu vă privați unul de celălalt, decât doar prin înțelegere pentru un timp, ca să vă dăruiți postului și rugăciunii; și să vă împreunați din nou ca nu cumva să vă ispitească Satan din cauza lipsei voastre de autocontrol.
೫ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
6 Dar spun aceasta prin permisiune, nu prin poruncă.
೬ನಾನು ಹೀಗೆ ಮಾಡಬಹುದೆಂದು ಹೇಳುತ್ತಿರುವುದು ಆಜ್ಞೆಯಲ್ಲ, ನನ್ನ ಅಭಿಪ್ರಾಯವಷ್ಟೇ.
7 Fiindcă aș dori ca toți oamenii să fie întocmai ca mine. Dar fiecare are propriul lui dar din Dumnezeu, unul într-un fel, și altul altfel.
೭ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.
8 De aceea le spun celor necăsătoriți și văduvelor: Este bine pentru ei dacă rămân întocmai ca mine.
೮ಅವಿವಾಹಿತರನ್ನೂ ಮತ್ತು ವಿಧವೆಯರನ್ನೂ ಕುರಿತು ನಾನು ಹೇಳುವುದೇನಂದರೆ, ನಾನಿರುವಂತೆಯೆ ಇರುವುದು ಅವರಿಗೆ ಒಳ್ಳೆಯದು.
9 Dar dacă nu se pot înfrâna, să se căsătorească; fiindcă este mai bine să se căsătorească decât să ardă.
೯ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
10 Iar celor căsătoriți le poruncesc nu eu, ci Domnul: Soția să nu se despartă de soț.
೧೦ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.
11 Dar chiar dacă se desparte, să rămână necăsătorită sau să se împace cu soțul ei; și soțul să nu divorțeze de soția lui.
೧೧ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
12 Dar celorlalți le spun eu, nu Domnul: Dacă vreun frate are o soție ce nu crede, și ea se mulțumește să locuiască cu el, să nu divorțeze de ea;
೧೨ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತಲ್ಲ ಆದರೆ ನಾನು ಹೇಳುವುದೇನಂದರೆ, ಒಬ್ಬ ಸಹೋದರನಿಗೆ ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆ ಅವನೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಅವನು ಆಕೆಯನ್ನು ಬಿಡಬಾರದು.
13 Și femeia care are un soț ce nu crede, și el se mulțumește să locuiască cu ea, să nu îl părăsească.
೧೩ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.
14 Fiindcă soțul care nu crede este sfințit prin soție, și soția care nu crede este sfințită prin soț; altfel, copiii voștri sunt necurați; dar acum sunt sfinți.
೧೪ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.
15 Dar dacă cel ce nu crede se desparte, să se despartă. Un frate sau o soră nu este în robie în astfel de cazuri, dar Dumnezeu ne-a chemat la pace.
೧೫ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
16 Fiindcă ce știi tu, soție, dacă îți vei salva soțul? Sau ce știi tu, soțule, dacă îți vei salva soția?
೧೬ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?
17 Totuși, așa cum Dumnezeu a împărțit fiecăruia, așa cum Domnul a chemat pe fiecare, așa să umble. Și așa rânduiesc în toate bisericile.
೧೭ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.
18 Este cineva chemat fiind circumcis? Să nu se facă necircumcis. Este cineva chemat în necircumcizie? Să nu se circumcidă.
೧೮ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.
19 Circumcizia nu este nimic, și necircumcizia nu este nimic, ci ținerea poruncilor lui Dumnezeu.
೧೯ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.
20 Fiecare să rămână în aceeași chemare în care a fost chemat.
೨೦ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
21 Ești chemat, să fii rob? Nu te neliniști de aceasta; dar dacă poți fi făcut liber, mai degrabă folosește-te de aceasta.
೨೧ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.
22 Fiindcă cel ce este chemat în Domnul, să fie rob, este un eliberat al Domnului; tot așa și cel ce este chemat, să fie liber, este rob al lui Cristos.
೨೨ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
23 Voi sunteți cumpărați cu un preț; nu vă faceți robi ai oamenilor.
೨೩ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.
24 Fiecare, fraților, în starea în care a fost chemat, în aceea să rămână cu Dumnezeu.
೨೪ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ.
25 Cât despre fecioare și feciori, nu am poruncă de la Domnul; totuși îmi dau sfatul, ca unul ce am obținut milă de la Domnul să fiu credincios.
೨೫ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.
26 De aceea presupun că aceasta este bine, din cauza strâmtorării prezente, spun că este bine pentru om să fie așa.
೨೬ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ.
27 Ești legat de soție? Nu căuta să fii dezlegat. Ești dezlegat de soție? Nu căuta soție.
೨೭ನೀನು ವಿವಾಹಿತನಾಗಿರುವುದಾದರೆ ಬಿಡುಗಡೆಯಾಗುವುದಕ್ಕೆ ಪ್ರಯತ್ನಿಸಬೇಡ. ನೀನು ಅವಿವಾಹಿತನಾಗಿರುವುದಾದರೆ ಹೆಂಡತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬೇಡ.
28 Dar și dacă te căsătorești, nu ai păcătuit; și dacă fecioara se căsătorește, nu a păcătuit. Totuși astfel de oameni vor avea necaz în carne; dar eu vă cruț.
೨೮ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಅದು ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಅನೇಕ ಕಷ್ಟಗಳು ಸಂಭವಿಸುವವು. ಇದು ನಿಮಗೆ ಉಂಟಾಗಬಾರದೆಂಬುದೇ ನನ್ನ ಅಪೇಕ್ಷೆಯಾಗಿದೆ.
29 Dar spun aceasta, fraților, timpul este scurt; rămâne ca și cei ce au soții să fie ca și cum nu ar avea;
೨೯ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,
30 Și cei ce plâng, ca și cum nu ar plânge; și cei ce se bucură, ca și cum nu s-ar bucura; și cei ce cumpără, ca și cum nu ar stăpâni;
೩೦ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ,
31 Și cei ce folosesc această lume, ca și cum nu ar abuza de ea; fiindcă înfățișarea acestei lumi trece.
೩೧ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
32 Dar aș dori ca voi să fiți fără grijă. Cel necăsătorit se îngrijește de lucrurile care aparțin Domnului, cum să placă Domnului;
೩೨ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
33 Dar cel căsătorit se îngrijește de lucrurile lumii, cum să placă soției.
೩೩ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.
34 Tot așa între soție și fecioară este diferență. Cea necăsătorită se îngrijește de lucrurile Domnului, ca să fie sfântă deopotrivă în trup și în duh; dar cea căsătorită se îngrijește de lucrurile lumii, cum să placă soțului.
೩೪ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ.
35 Iar aceasta o spun spre folosul vostru; nu ca să arunc un laț asupra voastră, ci pentru ceea ce este frumos și ca să serviți Domnului fără distragere.
೩೫ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.
36 Dar dacă cineva gândește că se poartă necuvenit față de fecioara lui, dacă trece de floarea vârstei ei și nevoia o cere, să facă ce voiește, nu păcătuiește, să se căsătorească.
೩೬ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
37 Totuși, cel ce stă neclintit în inima lui, neavând constrângere, și are putere peste propria lui voință și a hotărât astfel în inima lui că își va păstra fecioara, bine face.
೩೭ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು.
38 Astfel, cel ce dă în căsătorie bine face, iar cel ce nu dă în căsătorie mai bine face.
೩೮ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ.
39 Soția este legată prin lege cât timp trăiește soțul ei; dar dacă soțul ei moare, este liberă să se căsătorească cu cine voiește, numai în Domnul.
೩೯ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
40 Dar după sfatul meu, este mai fericită dacă rămâne așa; și gândesc că și eu am Duhul lui Dumnezeu.
೪೦ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.