< 2 Cronici 10 >
1 Și Roboam a mers la Sihem, căci la Sihem venise tot Israelul să îl facă împărat.
೧ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
2 Și s-a întâmplat, când a auzit aceasta Ieroboam, fiul lui Nebat, care era în Egipt, unde fugise din prezența împăratului Solomon, că Ieroboam s-a întors din Egipt.
೨ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.
3 Și au trimis și l-au chemat. Astfel Ieroboam și tot Israelul au venit și au vorbit lui Roboam, spunând:
೩ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
4 Tatăl tău a făcut jugul nostru apăsător; acum, de aceea, ușurează puțin acest serviciu apăsător al tatălui tău și jugul său greu pe care l-a pus peste noi și îți vom servi.
೪ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.
5 Iar el le-a spus: Veniți din nou la mine după trei zile. Și poporul s-a depărtat.
೫ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು.
6 Și împăratul Roboam a ținut sfat cu bătrânii care au stat în picioare înaintea lui Solomon, tatăl său, în timp ce el încă trăia, spunând: Ce sfat îmi dați ca să mă întorc să răspund acestui popor?
೬ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.
7 Iar ei i-au vorbit, spunând: Dacă ești bun cu acest popor și le vei plăcea și le vei vorbi cuvinte bune, ei vor fi servitorii tăi pentru totdeauna.
೭ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.
8 Dar el a părăsit sfatul pe care bătrânii i l-au dat și a ținut sfat cu tinerii care au crescut cu el, care au stat înaintea lui.
೮ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.
9 Și le-a spus: Ce sfat îmi dați ca să mă întorc să răspund acestui popor, care mi-a vorbit, spunând: Ușurează puțin jugul pe care tatăl tău l-a pus peste noi?
೯“ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
10 Și tinerii care au fost crescuți cu el i-au vorbit, spunând: Astfel să răspunzi poporului care ți-a vorbit, zicând: Tatăl tău ne-a făcut jugul greu, dar tu fă-l puțin mai ușor pentru noi; astfel să le spui: Degetul meu mic va fi mai gros decât coapsele tatălui meu.
೧೦ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.
11 Și acum, dacă tatăl meu a pus un jug greu peste voi, eu voi pune mai mult peste jugul vostru; tatăl meu v-a pedepsit cu bice, dar eu vă voi pedepsi cu scorpioni.
೧೧ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.
12 Astfel Ieroboam și tot poporul au venit la Roboam în a treia zi, precum a cerut împăratul, spunând: Veniți din nou la mine în a treia zi.
೧೨ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.
13 Și împăratul le-a răspuns cu asprime; și împăratul Roboam a părăsit sfatul bătrânilor,
೧೩ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
14 Și le-a răspuns după sfatul tinerilor, spunând: Tatăl meu v-a făcut jugul greu, dar eu voi adăuga la acesta; tatăl meu v-a pedepsit cu bice, dar eu vă voi pedepsi cu scorpioni.
೧೪ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
15 Astfel împăratul nu a dat ascultare poporului, căci răzvrătirea era de la Dumnezeu, ca să își împlinească DOMNUL cuvântul pe care l-a vorbit prin mâna lui Ahiia șilonitul, lui Ieroboam, fiul lui Nebat.
೧೫ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
16 Și când tot Israelul a văzut că împăratul a refuzat să le dea ascultare, poporul a răspuns împăratului, spunând: Ce parte avem noi în David? Și nu avem nicio moștenire în fiul lui Isai; fiecare bărbat la corturile voastre, Israele; și acum, David, vezi-ți de propria ta casă. Astfel tot Israelul a mers la corturile lor.
೧೬ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
17 Dar cât despre copiii lui Israel care au locuit în cetățile lui Iuda, Roboam a domnit peste ei.
೧೭ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.
18 Atunci împăratul Roboam a trimis pe Hadoram, care era peste taxă; și copiii lui Israel l-au împroșcat cu pietre, încât a murit. Dar împăratul Roboam s-a grăbit să îl i-a în carul său, să fugă la Ierusalim.
೧೮ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.
19 Și Israel s-a răzvrătit împotriva casei lui David până în această zi.
೧೯ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.