< 2 Samuel 12 >
1 Și DOMNUL l-a trimis pe Natan la David. Și Natan a venit la el și i-a spus: Erau doi oameni într-o cetate; unul bogat și celălalt sărac.
೧ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
2 Bogatul avea foarte multe turme și cirezi;
೨ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.
3 Dar săracul nu avea nimic, în afară de o singură mielușea, pe care o cumpărase și o hrănea; și aceasta creștea împreună cu el și cu copiii săi; mânca din mâncarea lui și bea din paharul lui și se culca la sânul lui și îi era ca o fiică.
೩ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.
4 Și a venit un călător la omul bogat iar el nu s-a îndurat să ia din turma lui și din cireada lui, ca să pregătească pentru călătorul care venise la el; dar a luat oaia omului sărac și a pregătit-o pentru omul care venise la el.
೪ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.
5 Și mânia lui David s-a aprins foarte tare împotriva omului acela; și i-a spus lui Natan: Precum DOMNUL trăiește, omul care a făcut acest lucru va muri negreșit.
೫ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
6 Și să întoarcă pentru miel, împătrit, pentru că a făcut aceasta și pentru că nu a avut milă.
೬ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.
7 Și Natan i-a spus lui David: Tu ești acel om. Astfel spune DOMNUL Dumnezeul lui Israel: Te-am uns împărat peste Israel și te-am eliberat din mâna lui Saul;
೭ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
8 Și ți-am dat casa stăpânului tău și soțiile stăpânului tău la sânul tău și ți-am dat casa lui Israel și a lui Iuda; și dacă aceasta ar fi fost prea puțin, ți-aș fi dat astfel și astfel de lucruri.
೮ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
9 Pentru ce ai disprețuit porunca DOMNULUI, pentru a face rău înaintea ochilor lui? Ai ucis pe Urie hititul cu sabia și ți-ai luat pe soția lui de soție, iar pe el l-ai ucis cu sabia copiilor lui Amon.
೯ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
10 De aceea acum sabia nu se va depărta niciodată de casa ta, pentru că m-ai disprețuit și ai luat pe soția lui Urie hititul să fie soția ta.
೧೦ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
11 Astfel spune DOMNUL: Iată, voi ridica un rău împotriva ta din propria ta casă și îți voi lua soțiile de dinaintea ochilor tăi și le voi da aproapelui tău și el se va culca cu soțiile tale în fața acestui soare.
೧೧ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.
12 Pentru că tu ai făcut aceasta în secret; dar eu voi face acest lucru înaintea întregului Israel și în fața soarelui.
೧೨ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.
13 Și David i-a spus lui Natan: Am păcătuit împotriva DOMNULUI. Și Natan i-a spus lui David: DOMNUL de asemenea a îndepărtat păcatul tău, nu vei muri.
೧೩ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
14 Dar pentru că prin această faptă ai dat mare ocazie dușmanilor DOMNULUI să blesteme, de asemenea pruncul care ți s-a născut va muri negreșit.
೧೪ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
15 Și Natan a plecat acasă. Și DOMNUL a lovit pruncul pe care soția lui Urie i-l născuse lui David și a fost foarte bolnav.
೧೫ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.
16 Și David l-a implorat pe Dumnezeu pentru prunc; și David a postit și a intrat și a stat întins toată noaptea pe pământ.
೧೬ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
17 Și bătrânii casei lui s-au ridicat și au intrat la el, pentru a-l ridica de la pământ; dar el a refuzat și nici nu a mâncat pâine cu ei.
೧೭ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.
18 Și s-a întâmplat, în a șaptea zi, că pruncul a murit. Și servitorii lui David s-au temut să îi spună că pruncul era mort, pentru că au spus: Iată, în timp ce pruncul încă trăia, i-am vorbit și a refuzat să dea ascultare vocii noastre; cât se va chinui, dacă îi spunem că pruncul este mort?
೧೮ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.
19 Dar când David a văzut că servitorii săi șopteau, David a priceput că pruncul era mort; de aceea David a spus servitorilor săi: Este pruncul mort? Și ei au spus: Este mort.
೧೯ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು
20 Atunci David s-a ridicat de la pământ și s-a spălat și s-a uns și și-a schimbat hainele și a intrat în casa DOMNULUI și s-a închinat; apoi a venit acasă; și după ce a cerut, i-au pus pâine înainte și a mâncat.
೨೦ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
21 Atunci servitorii săi i-au spus: Ce este acest lucru pe care l-ai făcut? Tu ai postit și ai plâns pentru prunc în timp ce era în viață; dar acum când pruncul este mort, te-ai ridicat și ai mâncat pâine?
೨೧ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.
22 Și el a spus: În timp ce pruncul era încă în viață, am postit și am plâns, fiindcă am spus: Cine poate spune dacă DUMNEZEU nu va avea har fața de mine, ca să trăiască pruncul?
೨೨ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.
23 Dar acum el este mort, pentru ce să postesc? Pot să îl aduc înapoi? Eu mă voi duce la el, dar el nu se va întoarce la mine.
೨೩ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
24 Și David a mângâiat-o pe Bat-Șeba, soția sa, și a intrat la ea și s-a culcat cu ea; și ea a născut un fiu și el i-a pus numele Solomon; și DOMNUL l-a iubit.
೨೪ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
25 Și a trimis prin mâna profetului Natan; și el i-a pus numele Iedidia, datorită DOMNULUI.
೨೫ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.
26 Și Ioab a luptat împotriva Rabei copiilor lui Amon și a luat cetatea împărătească.
೨೬ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
27 Și Ioab a trimis mesageri la David și a spus: Am luptat împotriva Rabei și am luat cetatea apelor.
೨೭ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
28 De aceea acum, adună restul poporului și așază tabăra împotriva cetății și ia-o, ca nu cumva să iau eu cetatea și să fie numită după numele meu.
೨೮ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.
29 Și David a adunat tot poporul și a mers la Raba și a luptat împotriva ei și a luat-o.
೨೯ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
30 Și a luat coroana împăratului lor de pe capul său, greutatea acesteia era de un talant de aur, cu pietre prețioase; și a fost pusă pe capul lui David. Și a scos foarte multă pradă din cetate.
೩೦ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
31 Și a adus pe poporul care era în ea și i-a pus sub ferăstraie și sub suluri de fier și sub topoare de fier și i-a făcut să treacă prin cuptorul de cărămizi; și astfel a făcut tuturor cetăților copiilor lui Amon. Și David și tot poporul s-au întors la Ierusalim.
೩೧ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.