< Geneză 44 >
1 Şi a poruncit administratorului casei sale, spunând: Umple sacii bărbaţilor cu hrană, atât cât pot căra; şi pune banii fiecărui bărbat la gura sacului său.
೧ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.
2 Şi pune paharul meu, paharul de argint, la gura sacului celui mai tânăr şi banii lui pentru grâne. Iar el a făcut conform cuvântului pe care Iosif l-a spus.
೨ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.
3 Imediat ce s-a luminat de dimineaţă, bărbaţii au fost trimişi, ei şi măgarii lor.
೩ಅವರೆಲ್ಲರೂ ಬೆಳಿಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.
4 Şi după ce au ieşit din cetate şi nu erau încă departe, Iosif a spus administratorului său: Ridică-te, urmăreşte bărbaţii aceia; şi după ce îi ajungi, spune-le: Pentru ce aţi răsplătit rău pentru bine?
೪ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
5 Nu este acesta, paharul din care domnul meu bea, şi prin care într-adevăr el ghiceşte? Aţi făcut rău făcând astfel.
೫ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.
6 Şi i-a ajuns şi le-a vorbit aceste cuvinte.
೬ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು.
7 Iar ei i-au spus: Pentru ce spune domnul meu aceste cuvinte? Nicidecum nu vor face servitorii tăi conform acestui lucru.
೭ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.
8 Iată, banii pe care noi i-am găsit la gura sacilor noştri, i-am adus din nou la tine din ţara lui Canaan; cum atunci am fura noi argint sau aur din casa domnului tău?
೮ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
9 La oricare din servitorii tăi ar fi găsită, deopotrivă el să moară, iar noi de asemenea vom fi robii domnului meu.
೯ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.
10 Iar el a spus: Acum de asemenea aceasta să fie conform cuvintelor voastre, cel la care paharul este găsit va fi robul meu, iar voi veţi fi fără vină.
೧೦ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,
11 Atunci ei îndată şi-au coborât la pământ fiecare sacul său şi fiecare şi-a deschis sacul.
೧೧ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.
12 Şi a căutat începând de la cel mai în vârstă şi a terminat la cel mai tânăr, şi paharul s-a găsit în sacul lui Beniamin.
೧೨ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.
13 Atunci ei şi-au rupt hainele şi fiecare bărbat şi-a încărcat măgarul şi s-au întors în cetate.
೧೩ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.
14 Şi Iuda şi fraţii săi au venit la casa lui Iosif, căci el era încă acolo; şi au căzut înaintea lui la pământ.
೧೪ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
15 Şi Iosif le-a spus: Ce faptă este aceasta pe care aţi făcut-o? Sau nu ştiţi că un astfel de om ca mine poate cu adevărat ghici?
೧೫ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,
16 Şi Iuda a spus: Ce să spunem domnului meu? Ce să vorbim? Sau cum să ne dezvinovăţim? Dumnezeu a descoperit nelegiuirea servitorilor tăi; iată, noi suntem servitorii domnului meu, deopotrivă noi şi de asemenea cel cu care paharul a fost găsit.
೧೬ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.
17 Iar el a spus: Nicidecum nu voi face astfel; ci bărbatul în a cărui mână a fost găsit paharul, acela va fi servitorul meu; şi cât despre voi, urcaţi-vă în pace la tatăl vostru.
೧೭ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
18 Atunci Iuda s-a apropiat de el şi a spus: Vai domnul meu, lasă pe servitorul tău, te rog, să vorbească un cuvânt în urechile domnului meu şi nu lăsa mânia ta să se aprindă împotriva servitorului tău, căci tu eşti întocmai ca Faraon.
೧೮ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
19 Domnul meu a întrebat pe servitorii săi, spunând: Aveţi voi un tată, sau un frate?
೧೯ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು,
20 Şi noi am spus domnului meu: Avem un tată, un om bătrân, şi un copil al bătrâneţii lui, unul mic; şi fratele lui este mort şi numai el a rămas de la mama sa; şi tatăl său îl iubeşte.
೨೦ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.
21 Şi tu ai spus servitorilor tăi: Aduceţi-l jos la mine, ca să îmi pun ochii mei peste el.
೨೧“ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,
22 Şi noi am spus domnului meu: Tânărul nu poate părăsi pe tatăl său, căci dacă el va părăsi pe tatăl său, tatăl său va muri.
೨೨ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.
23 Şi tu ai spus servitorilor tăi: Dacă fratele vostru cel mai tânăr nu coboară cu voi, nu îmi veţi mai vedea faţa.
೨೩ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.
24 Şi s-a întâmplat când noi am urcat la servitorul tău, tatăl meu, că i-am spus cuvintele domnului meu.
೨೪ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು.
25 Şi tatăl nostru a spus: Mergeţi din nou şi cumpăraţi-ne puţină hrană.
೨೫“ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,
26 Iar noi am spus: Nu putem coborî decât dacă fratele nostru cel mai tânăr este cu noi, atunci vom coborî; căci nu putem vedea faţa bărbatului, decât dacă fratele nostru cel mai tânăr este cu noi.
೨೬ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.
27 Şi servitorul tău, tatăl meu, ne-a spus: Ştiţi că soţia mea mi-a născut doi fii;
೨೭ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.
28 Şi unul a plecat de la mine şi am spus: Cu adevărat este sfâşiat în bucăţi; şi nu l-am văzut de atunci.
೨೮ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.
29 Şi dacă îl luaţi şi pe acesta de la mine şi i se întâmplă nenorocire veţi coborî perii mei cărunţi cu întristare în mormânt. (Sheol )
೨೯ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. (Sheol )
30 Acum de aceea când eu ajung la servitorul tău, tatăl meu, şi tânărul nu este cu noi, văzând că viaţa lui este legată de viaţa tânărului,
೩೦“ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,
31 Se va întâmpla, când el vede că tânărul nu este cu noi, că va muri; şi servitorii tăi vor coborî perii cărunţi ai servitorului tău, tatăl nostru, cu întristare în mormânt. (Sheol )
೩೧ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು. (Sheol )
32 Căci servitorul tău a devenit garanţie pentru tânăr pentru tatăl meu, spunând: Dacă nu îl aduc la tine, atunci voi suporta vina faţă de tatăl meu pentru totdeauna.
೩೨ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ.
33 Acum de aceea, te rog, lasă pe servitorul tău să rămână în locul tânărului ca rob domnului meu; şi lasă tânărul să urce cu fraţii săi.
೩೩“ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
34 Căci cum voi urca la tatăl meu şi băiatul să nu fie cu mine? Ca nu cumva să văd răul ce va veni peste tatăl meu!
೩೪ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.