< Ioan 14 >

1 Să nu vi se tulbure inima; credeți în Dumnezeu, credeți de asemenea în mine.
“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
2 În casa Tatălui meu sunt multe locașuri mari; dacă nu ar fi așa, v-aș fi spus. Mă duc să vă pregătesc un loc.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
3 Și dacă mă duc și vă pregătesc un loc, voi veni din nou și vă voi primi la mine însumi; ca unde sunt eu, să fiți și voi.
ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
4 Și știți unde mă duc eu și știți calea.
ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
5 Toma i-a spus: Doamne, nu știm unde te duci; și cum putem ști calea?
ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
6 Isus i-a spus: Eu sunt calea și adevărul și viața: nimeni nu vine la Tatăl decât prin mine.
ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
7 Dacă m-ați fi cunoscut, l-ați fi cunoscut și pe Tatăl meu; și de acum îl cunoașteți și l-ați văzut.
ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
8 Filip i-a spus: Doamne, arată-ne pe Tatăl și ne este de ajuns.
ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.
9 Isus i-a spus: De atâta timp sunt cu voi și totuși nu m-ai cunoscut, Filipe? Cel ce m-a văzut pe mine l-a văzut pe Tatăl; și cum spui tu: Arată-ne pe Tatăl?
ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
10 Nu crezi că eu sunt în Tatăl și Tatăl este în mine însumi? Cuvintele pe care vi le vorbesc eu nu le vorbesc de la mine; ci Tatăl, care locuiește în mine, el face faptele.
೧೦ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.
11 Credeți-mă că eu sunt în Tatăl și Tatăl în mine; iar dacă nu, măcar credeți-mă datorită acestor fapte.
೧೧ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
12 Adevărat, adevărat vă spun: Cel ce crede în mine, va face și el faptele pe care le fac eu; și mai mari decât acestea va face, pentru că eu mă duc la Tatăl meu.
೧೨“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
13 Și orice veți cere în numele meu, aceea voi face, ca Tatăl să fie glorificat în Fiul.
೧೩ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
14 Dacă veți cere ceva în numele meu, eu voi face.
೧೪ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
15 Dacă mă iubiți, țineți poruncile mele.
೧೫“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
16 Și eu îl voi ruga pe Tatăl și el vă va da un alt Mângâietor, ca să rămână cu voi pentru totdeauna, (aiōn g165)
೧೬ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. (aiōn g165)
17 Pe Duhul adevărului, pe care lumea nu îl poate primi, pentru că nu îl vede, nici nu îl cunoaște; dar voi îl cunoașteți, fiindcă locuiește cu voi și va fi în voi.
೧೭ಆ ಸಹಾಯಕನು ಯಾರೆಂದರೆಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
18 Nu vă voi lăsa fără mângâiere; voi veni la voi.
೧೮“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
19 Încă puțin timp și lumea nu mă va mai vedea; dar voi mă vedeți, pentru că eu trăiesc și voi veți trăi.
೧೯ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.
20 În ziua aceea, veți ști că eu sunt în Tatăl meu și voi în mine și eu în voi.
೨೦ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
21 Cel ce are poruncile mele și le ține, acela este cel ce mă iubește; și cel ce mă iubește va fi iubit de Tatăl meu și eu îl voi iubi și mă voi arăta lui.
೨೧ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
22 Iuda, nu Iscariot, i-a spus: Doamne, cum se face că te vei arăta nouă și nu lumii?
೨೨ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
23 Isus a răspuns și i-a zis: Dacă cineva mă iubește, va ține cuvintele mele; și Tatăl meu îl va iubi și noi vom veni la el și ne vom face locuință la el.
೨೩ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
24 Cel ce nu mă iubește nu ține cuvintele mele; și cuvântul pe care îl auziți nu este al meu, ci al Tatălui care m-a trimis.
೨೪ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
25 V-am vorbit acestea, fiind încă prezent cu voi.
೨೫“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.
26 Dar Mângâietorul, Duhul Sfânt, pe care îl va trimite Tatăl în numele meu, el vă va învăța toate și vă va aduce aminte toate câte v-am spus.
೨೬ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
27 Pacea o las cu voi, vă dau pacea mea; eu v-o dau nu cum o dă lumea. Să nu vă fie tulburată inima, nici să nu fie înfricoșată.
೨೭“ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
28 Ați auzit cum v-am spus eu: Plec, dar vin din nou la voi. Dacă m-ați fi iubit, v-ați fi bucurat pentru că am spus: Mă duc la Tatăl; fiindcă Tatăl meu este mai mare decât mine.
೨೮ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
29 Și acum v-am spus mai înainte de a se întâmpla, ca atunci când se va întâmpla, să credeți.
೨೯ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.
30 De acum înainte nu voi mai vorbi mult cu voi, fiindcă vine prințul acestei lumi și nu are nimic în mine,
೩೦ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
31 Dar ca să știe lumea că îl iubesc pe Tatăl; și așa cum Tatăl mi-a poruncit, așa fac. Ridicați-vă, să plecăm de aici.
೩೧ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.

< Ioan 14 >