< Ioan 21 >
1 După acestea Isus s-a arătat din nou discipolilor la marea Tiberiadei și s-a arătat astfel.
೧ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2 Erau împreună Simon Petru și Toma, numit Didumos, și Natanael din Cana Galileii, și fiii lui Zebedei, și alți doi dintre discipolii lui.
೨ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
3 Simon Petru le-a spus: Mă duc să pescuiesc. Iar ei i-au spus: Venim și noi cu tine. Au plecat și au intrat imediat într-o corabie; dar, în acea noapte, nu au prins nimic.
೩ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4 Dar pe când s-a făcut dimineață, Isus stătea în picioare pe țărm; dar discipolii nu știau că era Isus.
೪ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
5 Atunci Isus le-a spus: Copilașilor, aveți ceva de mâncare? Iar ei i-au răspuns: Nu.
೫ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
6 Iar el le-a spus: Aruncați plasa în partea dreaptă a corăbiei și veți găsi. De aceea au aruncat-o și nu o mai puteau trage de mulțimea peștilor.
೬ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
7 De aceea discipolul acela, pe care îl iubea Isus, i-a spus lui Petru: Este Domnul. Simon Petru, auzind așadar că este Domnul, s-a încins cu haina de pescar (fiindcă era gol) și s-a aruncat în mare.
೭ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8 Și ceilalți discipoli au venit cu o corăbioară, trăgând plasa cu pești, (pentru că nu erau departe de uscat, ci cam la două sute de coți).
೮ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
9 Imediat ce au ajuns pe uscat, au văzut acolo foc de cărbuni și pește pus deasupra și pâine.
೯ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10 Isus le-a spus: Aduceți din peștii pe care i-ați prins acum.
೧೦ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11 Simon Petru s-a urcat și a tras plasa pe uscat, plină de pești mari, o sută cincizeci și trei; și, deși erau atâția, nu s-a rupt plasa.
೧೧ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12 Isus le-a spus: Veniți, mâncați. Și niciunul dintre discipoli nu cuteza să îl întrebe: Cine ești? știind că este Domnul.
೧೨ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13 Atunci Isus a venit și a luat pâinea și le-a dat-o, și peștele la fel.
೧೩ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
14 Aceasta a fost a treia oară când s-a arătat Isus discipolilor săi, după ce a înviat dintre morți.
೧೪ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15 Și după ce au mâncat, Isus i-a spus lui Simon Petru: Simone, fiul lui Iona, mă iubești tu mai mult decât aceștia? El i-a spus: Da, Doamne; tu știi că te iubesc. Isus i-a spus: Paște mielușeii mei.
೧೫ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
16 I-a spus din nou a doua oară: Simone, fiul lui Iona, mă iubești? El i-a spus: Da, Doamne; știi că te iubesc. El i-a spus: Paște oile mele.
೧೬ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
17 El i-a spus a treia oară: Simone, fiul lui Iona, mă iubești tu? Petru s-a mâhnit că îi spusese a treia oară: Mă iubești? Și i-a spus: Doamne, tu toate le știi; tu știi că te iubesc. Isus i-a spus: Paște oile mele.
೧೭ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
18 Adevărat, adevărat îți spun: Când erai tânăr, te încingeai singur și umblai unde voiai; dar când vei fi bătrân, îți vei întinde mâinile și altul te va încinge și te va duce unde nu voiești.
೧೮“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19 A spus aceasta, arătând cu ce moarte îl va glorifica pe Dumnezeu. Și după ce a spus aceasta, i-a zis: Urmează-mă.
೧೯ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
20 Atunci Petru, întorcându-se, l-a văzut venind în urmă pe discipolul pe care îl iubea Isus și care se rezemase la cină pe pieptul lui și care spusese: Doamne, cine este cel ce te trădează?
೨೦ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
21 Petru, văzându-l, i-a spus lui Isus: Doamne, dar cu acesta ce va fi?
೨೧ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
22 Isus i-a spus: Dacă voiesc ca el să rămână în viață până vin eu, ce îți pasă? Tu, urmează-mă.
೨೨ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 Atunci, a ieșit cuvântul acesta printre frați, că discipolul acela nu va muri; dar Isus nu a spus că nu va muri, ci: Dacă voiesc ca el să rămână în viață până vin eu, ce îți pasă?
೨೩ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
24 Acesta este discipolul care aduce mărturie despre acestea și a scris acestea; și știm că mărturia lui este adevărată.
೨೪ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25 Și sunt de asemenea multe alte lucruri pe care le-a făcut Isus, care, dacă s-ar fi scris unul câte unul, presupun că nici chiar lumea însăși nu ar putea cuprinde cărțile ce ar fi scrise. Amin!
೨೫ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.