< Ioan 9 >
1 Și pe când trecea, Isus a văzut pe un om orb din naștere.
ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.
2 Și discipolii lui l-au întrebat, spunând: Rabi, cine a păcătuit, acest om sau părinții lui, de s-a născut orb?
ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.
3 Isus a răspuns: Nu a păcătuit nici acest om, nici părinții lui; ci ca faptele lui Dumnezeu să fie arătate în el.
ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.
4 Eu trebuie să lucrez faptele celui ce m-a trimis cât este ziuă; vine noaptea, când nimeni nu poate lucra.
ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.
5 Cât sunt în lume, eu sunt lumina lumii.
ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.
6 După ce a vorbit astfel a scuipat pe pământ și a făcut tină din scuipat; și a uns ochii orbului cu lutul acela,
ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.
7 Și i-a spus: Du-te, spală-te în scăldătoarea Siloamului (care se traduce: Trimis). De aceea s-a dus și s-a spălat și a venit văzând.
ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.
8 De aceea vecinii și cei ce îl văzuseră înainte că era orb, au spus: Nu este acesta cel ce ședea și cerșea?
ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು.
9 Unii spuneau: El este; alții spuneau: Seamănă cu el; el spunea: Eu sunt.
ಕೆಲವರು, “ಹೌದು, ಇವನೇ,” ಎಂದರು. ಇನ್ನೂ ಬೇರೆಯವರು, “ಇಲ್ಲಾ, ಇವನು ಅವನ ಹಾಗೆ ಇದ್ದಾನೆ,” ಎಂದರು. ಅವನಾದರೋ, “ನಾನೇ ಅವನು,” ಎಂದು ಹೇಳಿದನು.
10 Așadar i-au spus: Cum ți-au fost deschiși ochii?
ಕೆಲವರು ಅವನಿಗೆ, “ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?” ಎಂದು ಕೇಳಲು,
11 El a răspuns și a zis: Un om numit Isus, a făcut tină și mi-a uns ochii și mi-a spus: Du-te la scăldătoarea Siloamului și spală-te; și m-am dus și m-am spălat și am primit vedere.
ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.
12 Atunci i-au spus: Unde este el? [Iar] el a spus: Nu știu.
ಅವರು ಅವನಿಗೆ, “ಆತನು ಎಲ್ಲಿದ್ದಾನೆ?” ಎಂದು ಕೇಳಲು, ಅವನು, “ನನಗೆ ಗೊತ್ತಿಲ್ಲ,” ಎಂದನು.
13 L-au adus la farisei pe cel ce înainte fusese orb.
ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
14 Și era de sabat când făcuse Isus tină și i-a deschis ochii.
ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.
15 Atunci din nou fariseii l-au întrebat și ei cum și-a primit vedere. El le-a spus: Mi-a pus lut pe ochi și m-am spălat și văd.
ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು.
16 De aceea unii dintre farisei au spus: Omul acesta nu este de la Dumnezeu, pentru că nu ține sabatul. Alții au spus: Cum poate un om păcătos să facă astfel de miracole? Și era dezbinare între ei.
ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.
17 Din nou au spus orbului: Tu ce spui despre el, pentru că ți-a deschis ochii? El a spus: Este un profet.
ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.
18 Dar iudeii nu au crezut despre el că fusese orb și a primit vedere, până nu au chemat pe părinții celui care a primit vedere.
ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.
19 Și i-au întrebat, spunând: Este acesta fiul vostru, despre care voi spuneți că s-a născut orb? Așadar, cum vede acum?
ಅವರು, “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಕಣ್ಣು ಕಾಣುವುದು ಹೇಗೆ?” ಎಂದು ಅವರನ್ನು ಕೇಳಿದರು.
20 Părinții lui le-au răspuns și au zis: Știm că acesta este fiul nostru și că s-a născut orb;
ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು.
21 Dar cum vede acum, nu știm, sau cine i-a deschis ochii, nu știm; el este în vârstă, întrebați-l; el va vorbi pentru el însuși.
ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು.
22 Părinții lui au spus acestea pentru că se temeau de iudei; fiindcă iudeii se înțeleseseră deja că, dacă ar mărturisi cineva că el este Cristosul, să fie exclus din sinagogă.
ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.
23 Din această cauză au spus părinții lui: Este în vârstă, întrebați-l.
ಆದ್ದರಿಂದ ಅವನ ತಂದೆತಾಯಿಗಳು, “ಇವನು ಪ್ರಾಯದವನಾಗಿದ್ದಾನೆ, ಇವನನ್ನೇ ಕೇಳಿ,” ಎಂದು ಹೇಳಿದರು.
24 Atunci au chemat din nou pe omul care fusese orb și i-au spus: Dă-i lauda lui Dumnezeu; noi știm că omul acesta este un păcătos.
ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.
25 El a răspuns și a zis: Dacă este păcătos, nu știu; eu una știu, că eram orb [și] acum văd.
ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.
26 Din nou i-au spus: Ce ți-a făcut? Cum ți-a deschis ochii?
ಆದ್ದರಿಂದ ಅವರು ಅವನಿಗೆ, “ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
27 Iar el le-a răspuns: V-am spus deja și nu ați ascultat. Pentru ce doriți să auziți din nou? Doriți și voi să vă faceți discipolii lui?
ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು.
28 Atunci l-au ocărât și au spus: Tu ești discipolul aceluia; dar noi suntem discipolii lui Moise.
ಆಗ ಅವರು ಅವನನ್ನು ದೂಷಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
29 Știm că Dumnezeu i-a vorbit lui Moise; cât despre acesta nu știm de unde este.
ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು.
30 Omul a răspuns și le-a zis: Chiar în aceasta este o minune, că voi nu știți de unde este și [totuși] el mi-a deschis ochii.
ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.
31 Și știm că Dumnezeu nu ascultă pe păcătoși; dar, dacă cineva este închinător lui Dumnezeu și face voia lui, pe el îl ascultă.
ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.
32 De când este lumea, nu s-a auzit că cineva a deschis ochii unuia născut orb. (aiōn )
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾರಾದರೂ ತೆರೆದಿದ್ದನ್ನು ಎಂದಿಗೂ ಒಬ್ಬರೂ ಕೇಳಿಲ್ಲ. (aiōn )
33 Dacă acest om nu ar fi de la Dumnezeu, nu ar putea face nimic.
ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು.
34 Ei au răspuns și i-au zis: Tu ești născut cu totul în păcate și ne înveți pe noi? Și l-au aruncat afară.
ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35 Isus a auzit că l-au aruncat afară; și când l-a găsit i-a spus: Crezi tu pe Fiul lui Dumnezeu?
ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.
36 Iar el a răspuns și a zis: Cine este Doamne, ca să cred în el?
ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು.
37 Și Isus i-a spus: Deopotrivă l-ai văzut și el este cel ce vorbește cu tine.
ಯೇಸು ಅವನಿಗೆ, “ನೀನು ಆತನನ್ನು ಕಂಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು,” ಎಂದು ಹೇಳಿದರು.
38 Iar el a spus: Doamne, cred, și i s-a închinat.
ಆಗ ಅವನು, “ಸ್ವಾಮೀ, ನಾನು ನಂಬುತ್ತೇನೆ,” ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.
39 Și Isus a spus: Pentru judecată am venit eu în această lume, ca toți ce nu văd, să vadă; și cei ce văd, să devină orbi.
ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.
40 Și unii dintre fariseii care erau cu el au auzit aceste cuvinte și i-au spus: Suntem și noi orbi?
ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು.
41 Isus le-a spus: Dacă ați fi orbi nu ați avea păcat, dar acum spuneți: Vedem; de aceea păcatul vostru rămâne.
ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.