< Luca 19 >
1 Și Isus a intrat și a traversat Ierihonul.
ಯೇಸು ಯೆರಿಕೋ ಪಟ್ಟಣವನ್ನು ಪ್ರವೇಶಿಸಿ ಅಲ್ಲಿಂದ ಪ್ರಯಾಣ ಮಾಡುತ್ತಿದ್ದರು.
2 Și iată, era un bărbat numit Zacheu, care era mai marele vameșilor, și el era bogat.
ಅಲ್ಲಿ ಜಕ್ಕಾಯ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದವರಲ್ಲಿ ಮುಖಂಡನೂ ಐಶ್ವರ್ಯವಂತನೂ ಆಗಿದ್ದನು.
3 Și căuta să vadă pe Isus, cine era; și nu putea din cauza mulțimii, pentru că era mic de statură.
ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.
4 Dar a alergat înainte și s-a cățărat într-un sicomor să îl vadă, pentru că pe acolo urma să treacă.
ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.
5 Și Isus, când a ajuns la locul acela, a privit în sus și l-a văzut și i-a spus: Zachee, grăbește-te și coboară; fiindcă astăzi eu trebuie să rămân în casa ta.
ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.
6 Și el, grăbindu-se, a coborât și l-a primit bucuros.
ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.
7 Și când au văzut, toți cârteau, spunând: A intrat să fie oaspete la un bărbat păcătos.
ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.
8 Dar Zacheu a stat în picioare și i-a spus Domnului: Iată, Doamne, jumătate din averile mele le dau săracilor; și dacă am luat ceva de la cineva printr-o acuzație falsă, dau înapoi împătrit.
ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.
9 Iar Isus i-a spus: Astăzi a venit salvare la casa aceasta, întrucât și el este fiul lui Avraam.
ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?
10 Căci Fiul omului a venit să caute și să salveze ce era pierdut.
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
11 Și pe când auzeau ei acestea, a adăugat și a spus o parabolă, pentru că el era aproape de Ierusalim și ei credeau că împărăția lui Dumnezeu se va arăta imediat.
ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ
12 De aceea el a spus: Un anumit nobil a mers într-o țară îndepărtată ca să își primească o împărăție și să se întoarcă.
ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.
13 Și a chemat pe cei zece robi ai săi și le-a dat zece mine și le-a spus: Ocupați-vă de acestea până vin.
ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.
14 Dar cetățenii lui îl urau și au trimis o solie după el, spunând: Nu voim ca acest om să domnească peste noi.
“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.
15 Și s-a întâmplat la întoarcerea lui, după ce a primit împărăția, că atunci a poruncit să fie chemați la el acești robi, cărora le dăduse banii, ca să știe cât câștigase fiecare prin comerț.
“ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.
16 Atunci a venit primul, spunând: Doamne, mina ta a câștigat zece mine.
“ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
17 Iar el i-a spus: Bine, rob bun, pentru că ai fost credincios în foarte puțin, ai autoritate peste zece cetăți.
“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.
18 Și a venit al doilea, spunând: Doamne, mina ta a făcut cinci mine.
“ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
19 Iar el i-a spus și acestuia: Fii și tu peste cinci cetăți.
“ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.
20 Și altul a venit, spunând: Doamne, iată, mina ta, pe care am păstrat-o într-un ștergar;
“ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.
21 Fiindcă m-am temut de tine, pentru că ești un om sever; ridici ce nu ai pus jos și seceri ce nu ai semănat.
ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.
22 Iar el i-a spus: Din gura ta te voi judeca, rob stricat. Știai că eu sunt om sever, ridicând ce nu am pus jos și secerând ce nu am semănat;
“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
23 Și atunci, de ce nu mi-ai dat banii la bancă: și la venirea mea eu să iau ce este al meu cu dobândă?
ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.
24 Și a spus celor care stăteau în picioare alături: Luați de la el mina și dați-o celui ce are zece mine.
“ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.
25 (Iar ei i-au spus: Doamne, el are zece mine.)
“ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು.
26 Căci vă spun, că fiecăruia ce are, i se va da; iar de la cel ce nu are, și ce are i se va lua.
“ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.
27 Dar pe acei dușmani ai mei, care nu au voit ca eu să domnesc peste ei, aduceți-i încoace și ucideți-i înaintea mea.
ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”
28 Și după ce a vorbit astfel, Isus a mers în fruntea [lor], urcându-se la Ierusalim.
ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.
29 Și s-a întâmplat că, pe când s-a apropiat de Betfaghe și de Betania, la muntele numit al Măslinilor, a trimis înainte pe doi dintre discipolii săi,
ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,
30 Spunând: Duceți-vă în satul dinaintea voastră, în care, intrând, veți găsi un măgăruș legat, pe care încă nu a șezut niciun om; dezlegați-l și aduceți-l.
“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ, ನೀವು ಅದರೊಳಗೆ ಪ್ರವೇಶಿಸುತ್ತಿರುವಾಗ, ಅಲ್ಲಿ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.
31 Și dacă cineva vă întreabă: Pentru ce îl dezlegați? Astfel să îi spuneți: Pentru că Domnul are nevoie de el.
ಯಾರಾದರೂ ನಿಮಗೆ, ‘ಏಕೆ ಅದನ್ನು ಬಿಚ್ಚುತ್ತೀರಿ?’ ಎಂದು ಕೇಳಿದರೆ, ನೀವು ಅವರಿಗೆ, ‘ಇದು ಕರ್ತದೇವರಿಗೆ ಬೇಕಾಗಿದೆ,’ ಎಂದು ಹೇಳಿರಿ,” ಎಂದರು.
32 Iar cei trimiși au plecat și au găsit chiar așa cum le spusese.
ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು.
33 Dar pe când dezlegau măgărușul, proprietarii lui le-au spus: De ce dezlegați măgărușul?
ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ,
34 Iar ei au spus: Domnul are nevoie de el.
ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು.
35 Și l-au adus la Isus; și și-au aruncat hainele pe măgăruș și l-au așezat pe Isus călare pe el.
ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು.
36 Și pe când mergea el, ei își așterneau hainele pe cale.
ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37 Și pe când se apropia, chiar la coborâșul muntelui Măslinilor, toată mulțimea discipolilor a început să se bucure și să laude pe Dumnezeu cu voce tare din cauza tuturor faptelor puternice pe care le văzuseră,
ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು:
38 Spunând: Binecuvântat fie Împăratul care vine în numele Domnului; pace în cer și glorie în cele prea înalte.
“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”
39 Și unii dintre fariseii din mulțime, i-au spus: Învățătorule, mustră-ți discipolii.
ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.
40 Iar el a răspuns și le-a zis: Vă spun că dacă aceștia vor tăcea, pietrele imediat vor striga.
ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
41 Și când s-a apropiat, a privit cetatea și a plâns din cauza ei,
ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,
42 Spunând: Dacă ai fi știut, chiar tu, cel puțin în această zi a ta, lucrurile pentru pacea ta! Dar acum, sunt ascunse de ochii tăi.
“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
43 Pentru că zilele vor veni peste tine și dușmanii tăi vor arunca un val de pământ în jurul tău și te vor împresura și te vor strânge din toate părțile,
ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.
44 Și te vor face una cu pământul și pe copiii tăi în tine; și nu vor lăsa în tine piatră peste piatră, pentru că nu ai cunoscut timpul vizitării tale.
ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.
45 Și a intrat în templu și a început să scoată pe cei ce vindeau în el și pe cei ce cumpărau,
ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,
46 Spunându-le: Este scris: Casa mea este casa rugăciunii; dar voi ați făcut din ea o peșteră de tâlhari.
ಅವರಿಗೆ, “‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ನೀವೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದರು.
47 Și îi învăța în fiecare zi în templu. Dar preoții de seamă și scribii și mai marii poporului căutau să îl nimicească,
ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.
48 Și nu găseau ce ar putea face; fiindcă toți oamenii erau foarte atenți să îl audă.
ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.