< Luca 7 >
1 Iar după ce a terminat toate cuvintele sale în auzul poporului, a intrat în Capernaum.
ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು.
2 Și robul unui anumit centurion, care îi era drag acestuia, era bolnav și gata să moară.
ಆಗ ಒಬ್ಬ ಶತಾಧಿಪತಿಗೆ, ಪ್ರಿಯನಾಗಿದ್ದ ಸೇವಕ, ಅಸ್ವಸ್ಥನಾಗಿ ಸಾಯುವುದರಲ್ಲಿದ್ದನು.
3 Dar când a auzit despre Isus, a trimis la el pe bătrânii iudeilor, implorându-l să vină și să vindece pe robul lui.
ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು.
4 Și când au venit la Isus, l-au implorat insistent, spunând: Cel căruia i se va face aceasta este demn;
ಅವರು ಯೇಸುವಿನ ಬಳಿಗೆ ಬಂದು ಅವರಿಗೆ, “ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು,
5 Fiindcă iubește națiunea noastră și el ne-a zidit o sinagogă.
ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು.
6 Atunci Isus a plecat cu ei. Dar deja, pe când el nu era departe de casă, centurionul a trimis la el prieteni, spunându-i: Doamne, nu te mai tulbura; fiindcă nu sunt demn ca să intri sub acoperișul meu;
ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ.
7 De aceea nici pe mine nu m-am considerat demn să vin la tine; dar spune un cuvânt și servitorul meu va fi vindecat.
ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.
8 Fiindcă și eu sunt om pus sub autoritate, având sub mine soldați și spun unuia: Du-te, și se duce; și altuia: Vino, și vine; și robului meu: Fă aceasta, și face.
ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.
9 Când a auzit Isus acestea, s-a minunat de el și s-a întors și a spus oamenilor care îl urmau: Vă spun, nu am găsit așa credință mare nici chiar în Israel.
ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.
10 Și cei trimiși, întorcându-se acasă, au găsit deplin sănătos pe robul care fusese bolnav.
ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.
11 Și s-a întâmplat în ziua următoare, că a plecat într-o cetate numită Nain; și mulți dintre discipolii lui l-au însoțit și mulți oameni.
ಇದಾದ ಮೇಲೆ, ಯೇಸು ನಾಯಿನ್ ಎಂಬ ಪಟ್ಟಣಕ್ಕೆ ಹೋದರು. ಆಗ ಅವರ ಶಿಷ್ಯರೂ ಜನರ ದೊಡ್ಡ ಗುಂಪೂ ಅವರ ಸಂಗಡ ಹೋದರು.
12 Și când s-a apropiat de poarta cetății, iată, un mort era dus afară, singurul fiu al mamei lui, iar ea era văduvă; și o mare mulțime din cetate era cu ea.
ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
13 Și când Domnul a văzut-o, i s-a făcut milă de ea și i-a spus: Nu plânge.
ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.
14 Și a venit și s-a atins de targă; iar cei ce o cărau, s-au oprit. Iar el a spus: Tinere, îți spun, ridică-te.
ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.
15 Și mortul s-a ridicat în șezut și a început să vorbească. Iar el i l-a dat mamei lui.
ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.
16 Și a venit o frică peste toți; și glorificau pe Dumnezeu, spunând: Un mare profet este ridicat între noi; și: Dumnezeu a vizitat pe poporul său.
ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.
17 Și acest cuvânt despre el s-a răspândit prin toată Iudeea și prin toată regiunea.
ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.
18 Și discipolii lui Ioan l-au anunțat despre toate acestea.
ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು,
19 Și Ioan chemând pe doi dintre discipolii săi, i-a trimis la Isus, spunând: Ești tu cel ce trebuie să vină, sau să așteptăm pe altul?
ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.
20 Când bărbații au venit la el, au spus: Ioan Baptist ne-a trimis la tine, spunând: Ești tu cel ce trebuie să vină, sau să așteptăm pe altul?
ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.
21 Iar în acea oră, el a vindecat pe mulți de boli și de răni și de duhuri rele; și multor orbi le-a dăruit vedere.
ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.
22 Atunci Isus, răspunzând, le-a zis: Mergeți și spuneți lui Ioan ce ați văzut și ați auzit; cum orbii văd din nou, șchiopii umblă, leproșii sunt curățiți, surzii aud, morții sunt înviați și săracilor li se predică evanghelia.
ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.
23 Și binecuvântat este oricine nu se va poticni în mine.
ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.
24 Și după ce mesagerii lui Ioan au plecat, a început să vorbească oamenilor despre Ioan: Ce ați ieșit să vedeți în pustie? O trestie scuturată de vânt?
ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?
25 Dar ce ați ieșit să vedeți? Un om îmbrăcat în haine moi? Iată, cei îmbrăcați splendid și [cei] care trăiesc în lux sunt la curțile împărătești.
ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ.
26 Dar ce ați ieșit să vedeți? Un profet? Da, vă spun, chiar mai mult decât un profet.
ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.
27 Acesta este cel despre care este scris: Iată, eu trimit pe mesagerul meu înaintea feței tale, care îți va pregăti calea înaintea ta.
ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು: “‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ,’
28 Fiindcă vă spun: Între cei născuți din femei, nu este profet mai mare decât Ioan Baptist; dar cel mai mic în împărăția lui Dumnezeu, este mai mare decât el.
ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.
29 Și toți oamenii care l-au auzit și vameșii au dat dreptate lui Dumnezeu, fiind botezați cu botezul lui Ioan.
ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.
30 Dar fariseii și învățătorii legii au respins sfatul lui Dumnezeu împotriva lor, nefiind botezați de el.
ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
31 Iar Domnul a spus: Atunci cu ce voi asemăna oamenii din această generație? Și cu ce sunt ei asemenea?
ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ?
32 Sunt asemenea unor copii, șezând în piață și strigând unii la alții și spunând: V-am cântat din fluier și nu ați dansat; v-am cântat de jale și nu ați plâns.
ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ: “‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ, ನಾವು ನಿಮಗಾಗಿ ಶೋಕಗೀತೆ ಹಾಡಿದೆವು, ನೀವು ಅಳಲಿಲ್ಲ,’ ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.
33 Fiindcă Ioan Baptist a venit, nici mâncând pâine, nici bând vin; și spuneți: Are drac.
“ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ.
34 Fiul omului a venit mâncând și bând; și spuneți: Iată, un om mâncăcios și băutor de vin, un prieten al vameșilor și al păcătoșilor.
ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ.
35 Totuși înțelepciunea este justificată de toți copiii ei.
ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.
36 Iar unul dintre farisei l-a rugat să mănânce cu el. Și a intrat în casa fariseului și a șezut să mănânce.
ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.
37 Și iată, o femeie din cetate, care era o păcătoasă, când a aflat că Isus a șezut la masă în casa fariseului, a adus un vas de alabastru cu mir,
ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,
38 Și a stat la picioarele lui, în spate, plângând și a început să îi spele picioarele cu lacrimi și să le șteargă cu perii capului ei și îi săruta picioarele și le ungea cu mir.
ಅವರ ಪಾದಗಳ ಬಳಿಯಲ್ಲಿ ನಿಂತು, ಅಳುತ್ತಾ ಅವರ ಪಾದಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ, ತನ್ನ ತಲೆಕೂದಲಿನಿಂದ ಒರೆಸಿ, ಅವರ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
39 Și când fariseul care îl invitase a văzut, își spunea în el însuși, zicând: Acesta, dacă era profet, ar fi știut cine și ce fel de femeie este cea care îl atinge; fiindcă este o păcătoasă.
ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.
40 Și Isus, răspunzând, i-a zis: Simon, am să îți spun ceva. Și el a zis: Învățătorule, spune.
ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು.
41 Era un anumit creditor care avea doi datornici; unul îi era dator cu cinci sute de dinari, iar celălalt cincizeci.
ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.
42 Și când nu au avut nimic cu ce plăti, i-a iertat pe amândoi. Spune-mi dar, care dintre ei îl va iubi cel mai mult?
ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.
43 Simon a răspuns și a zis: Presupun că acela căruia i-a iertat mai mult. Iar el i-a spus: Drept ai judecat.
ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು.
44 Și s-a întors spre femeie și i-a spus lui Simon: Vezi tu această femeie? Am intrat în casa ta și nu mi-ai dat apă pentru picioare; dar ea mi-a spălat picioarele cu lacrimi și le-a șters cu perii capului ei.
ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ.
45 Tu nu mi-ai dat sărutare; dar această femeie, de când am intrat, nu a încetat să îmi sărute picioarele.
ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ.
46 Capul nu mi l-ai uns cu untdelemn; dar această femeie mi-a uns picioarele cu mir.
ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.
47 De aceea îți spun: Păcatele ei, care sunt multe, sunt iertate; fiindcă a iubit mult; dar cui i se iartă puțin, iubește puțin.
ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
48 Iar ei i-a spus: Păcatele tale sunt iertate.
ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
49 Și cei ce ședeau cu el la masă au început să spună în ei înșiși: Cine este acesta care iartă chiar păcatele?
ಯೇಸುವಿನ ಸಂಗಡ ಊಟಕ್ಕೆ ಕುಳಿತವರು, “ಪಾಪಗಳನ್ನು ಸಹ ಕ್ಷಮಿಸುವುದಕ್ಕೆ ಈತನು ಯಾರು?” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳಲಾರಂಭಿಸಿದರು.
50 Iar el i-a spus femeii: Credința ta te-a salvat; mergi în pace.
ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.