< Matei 10 >
1 Și după ce i-a chemat la el pe cei doisprezece discipoli ai săi, le-a dat autoritate împotriva duhurilor necurate, să le scoată și să vindece fiecare boală și fiecare neputință.
೧ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
2 Și numele celor doisprezece apostoli sunt acestea: Primul, Simon, care este numit Petru și Andrei, fratele lui; Iacov al lui Zebedei și Ioan, fratele lui;
೨ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
3 Filip și Bartolomeu; Toma și Matei, vameșul; Iacov al lui Alfeu și Levi numit și Tadeu;
೩ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,
4 Simon Canaanitul și Iuda Iscariot, care l-a și trădat.
೪ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.
5 Pe aceștia doisprezece Isus i-a trimis înainte și le-a poruncit, spunând: Nu mergeți pe calea neamurilor și nu intrați în nicio cetate a samaritenilor.
೫ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
6 Ci mai degrabă mergeți la oile pierdute ale casei lui Israel.
೬ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
7 Și mergând, predicați, spunând: Împărăția cerului este aproape.
೭‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
8 Vindecați bolnavii, curățiți leproșii, înviați morții, scoateți draci; în dar ați primit, în dar să dați.
೮ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
9 Nu luați nici aur, nici argint, nici aramă în brâiele voastre,
೯ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,
10 Nici traistă pentru călătorie, nici două haine, nici încălțăminte, nici toiege; fiindcă lucrătorul este demn de hrana lui.
೧೦ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
11 Și în orice cetate sau sat intrați, cercetați cine este demn acolo; și rămâneți acolo până când plecați.
೧೧ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
12 Și când intrați într-o casă, salutați-o.
೧೨ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.
13 Și dacă este demnă casa, pacea voastră să vină peste ea; dar dacă nu este demnă, pacea voastră să se întoarcă la voi.
೧೩ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
14 Și oricine nu vă va primi, nici nu va asculta cuvintele voastre, când plecați din casa sau din cetatea aceea, scuturați praful de pe picioarele voastre.
೧೪ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
15 Adevărat vă spun: Va fi mai ușor de suportat pentru ținutul Sodomei și Gomorei în ziua judecății, decât pentru acea cetate.
೧೫ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
16 Iată, eu vă trimit înainte ca oi în mijlocul lupilor; de aceea fiți înțelepți ca șerpii și inocenți ca porumbeii.
೧೬“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
17 Dar păziți-vă de oameni, fiindcă vă vor preda consiliilor și vă vor biciui în sinagogile lor;
೧೭ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
18 Și veți fi aduși înaintea guvernatorilor și a împăraților din cauza mea, pentru mărturie împotriva lor și a neamurilor.
೧೮ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
19 Dar când vă vor preda, nu vă îngrijorați cum sau ce veți spune, fiindcă vi se va da în acea oră ce veți spune.
೧೯ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
20 Fiindcă nu voi sunteți cei care vorbiți, ci Duhul Tatălui vostru care vorbește în voi.
೨೦ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.
21 Și frate va preda la moarte pe frate și tatăl pe copil și copiii se vor ridica împotriva părinților și vor face să fie uciși.
೨೧ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
22 Și veți fi urâți de toți din cauza numelui meu, dar cel ce îndură până la sfârșit, acela va fi salvat.
೨೨ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
23 Dar când vă vor persecuta în această cetate, fugiți în alta; fiindcă adevărat vă spun: Nicidecum nu veți sfârși cetățile lui Israel până va fi venit Fiul omului.
೨೩ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
24 Discipolul nu este mai presus de învățătorul său, nici robul mai presus de domnul său.
೨೪“ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.
25 Ajunge discipolului să fie ca învățătorul său și robului ca domnul său. Dacă pe stăpânul casei l-au numit Beelzebub, cu cât mai mult pe cei din casa lui?
೨೫ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
26 De aceea nu vă temeți de ei, fiindcă nu este nimic acoperit care nu va fi revelat; și ascuns, care nu va fi cunoscut.
೨೬ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
27 Ce vă spun eu la întuneric, spuneți la lumină; și ce auziți la ureche, predicați pe acoperișul caselor.
೨೭ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
28 Și nu vă temeți de cei care ucid trupul, dar nu sunt în stare să ucidă sufletul; ci mai degrabă temeți-vă de cel care este în stare să nimicească deopotrivă și sufletul și trupul în iad. (Geenna )
೨೮ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. (Geenna )
29 Nu se vând două vrăbii cu un ban? Și totuși niciuna din ele nu cade pe pământ fără cunoștința Tatălui vostru.
೨೯ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
30 Dar până și perii capului vostru, toți [vă] sunt numărați.
೩೦ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
31 De aceea nu vă temeți, voi sunteți mai de preț decât multe vrăbii.
೩೧ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
32 De aceea oricine mă va mărturisi înaintea oamenilor, îl voi mărturisi și eu înaintea Tatălui meu care este în cer.
೩೨“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
33 Dar pe oricine mă va nega înaintea oamenilor, pe acela îl voi nega și eu înaintea Tatălui meu care este în cer.
೩೩ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
34 Să nu gândiți că am venit să trimit pace pe pământ; nu am venit să trimit pace, ci sabie.
೩೪“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
35 Fiindcă am venit să întorc pe om împotriva tatălui său și pe fiică împotriva mamei sale și pe noră împotriva soacrei sale.
೩೫ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
36 Și dușmanii omului vor fi cei din casa lui.
೩೬ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.
37 Cel ce iubește tată sau mamă mai mult decât pe mine, nu este demn de mine; și cel ce iubește fiu sau fiică mai mult decât pe mine, nu este demn de mine.
೩೭ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
38 Și cel ce nu își ia crucea și nu mă urmează, nu este demn de mine.
೩೮ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
39 Cel ce își găsește viața, și-o va pierde; și cel ce își pierde viața pentru mine, o va găsi.
೩೯ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
40 Cel ce vă primește pe voi, mă primește pe mine; și cel ce mă primește pe mine, îl primește pe cel ce m-a trimis.
೪೦“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
41 Cel ce primește un profet în numele unui profet, va primi răsplata unui profet; și cel ce primește pe un om drept în numele unui om drept, va primi răsplata unui om drept.
೪೧ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
42 Și oricine va da să bea unuia din acești micuți doar un pahar cu apă rece în numele unui discipol, adevărat vă spun, nicidecum nu își va pierde răsplata.
೪೨ಮತ್ತುಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.