< Cântarea lui Solomon 5 >
1 Am venit în grădina mea, sora mea, mireasa mea; mi-am adunat mirul cu mirodenia mea; mi-am mâncat fagurele cu mierea mea; mi-am băut vinul cu laptele meu; mâncaţi, prieteni; beţi, da, beţi din abundenţă, preaiubiţilor.
೧ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
2 Dorm, dar inima mi se trezeşte: este vocea preaiubitului meu care bate, spunând: Deschide-mi, sora mea, iubirea mea, porumbiţa mea, neîntinata mea, căci capul îmi este plin cu rouă şi şuviţele mele cu picăturile nopţii.
೨ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
3 Mi-am scos haina; cum să o îmbrac? Mi-am spălat picioarele; cum să le întinez?
೩“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
4 Preaiubitul meu şi-a băgat mâna prin gaura uşii şi lăuntrul mi-a fost cuprins de dor după el.
೪ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.
5 M-am ridicat să deschid preaiubitului meu; şi mâinile mele au picurat mir şi degetele mele mir dulce mirositor, pe mânerele încuietorii.
೫ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.
6 Am deschis iubitului meu, dar preaiubitul meu se retrăsese, plecase; sufletul meu se sfârşea când el vorbea, l-am căutat, dar nu l-am găsit; l-am chemat, dar nu mi-a dat niciun răspuns.
೬ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.
7 Păzitorii care cutreierau cetatea m-au găsit, m-au lovit, m-au rănit; paznicii zidurilor mi-au luat vălul.
೭ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.
8 Vă conjur, fiice ale Ierusalimului, dacă îl găsiţi pe preaiubitul meu, să îi spuneţi că sunt bolnavă de dragoste.
೮ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
9 Cu ce este preaiubitul tău mai mult decât alt preaiubit, tu, cea mai frumoasă dintre femei? Cu ce este preaiubitul tău mai mult decât alt preaiubit, ca să ne conjuri astfel?
೯ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
10 Preaiubitul meu este alb şi rumen, cel dintâi dintre zece mii.
೧೦ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
11 Capul lui este ca aurul cel mai pur, şuviţele lui sunt dese şi negre cum este corbul.
೧೧ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.
12 Ochii lui sunt ca ochii porumbiţelor lângă râurile de ape, spălaţi cu lapte şi potrivit aşezaţi.
೧೨ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.
13 Obrajii lui sunt ca un pat de miresme, ca flori dulci; buzele lui precum crini, picurând mir dulce mirositor.
೧೩ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
14 Mâinile lui sunt ca inele din aur montate cu beril; pântecele lui este ca fildeş strălucitor placat cu safire.
೧೪ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.
15 Picioarele lui sunt ca nişte coloane de marmură, montate pe postamente din aur pur, înfăţişarea lui este ca Libanul, măreaţă ca cedrii.
೧೫ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.
16 Gura lui este dulceaţă; da, el este cu totul de iubit. Acesta este preaiubitul meu şi acesta este prietenul meu, fiice ale Ierusalimului.
೧೬ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.