< Ефесень 6 >
1 Копий, аскултаць ын Домнул де пэринций воштри, кэч есте дрепт.
೧ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
2 „Сэ чинстешть пе татэл тэу ши пе мама та” – есте чя динтый порункэ ынсоцитэ де о фэгэдуинцэ –
೨ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
3 „ка сэ фий феричит ши сэ трэешть мултэ време пе пэмынт.”
೩ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
4 Ши вой, пэринцилор, ну ынтэрытаць ла мыние пе копиий воштри, чи крештеци-й ын мустраря ши ынвэцэтура Домнулуй.
೪ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
5 Робилор, аскултаць де стэпыний воштри пэмынтешть ку фрикэ ши кутремур, ын курэцие де инимэ, ка де Христос.
೫ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
6 Служици-ле ну нумай кынд сунтець суб окий лор, ка ши кум аць вря сэ плэчець оаменилор, чи ка ниште робь ай луй Христос, каре фак дин инимэ воя луй Думнезеу.
೬ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
7 Служици-ле ку букурие, ка Домнулуй, яр ну оаменилор,
೭ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
8 кэч штиць кэ фиекаре, фие роб, фие слобод, ва прими рэсплатэ де ла Домнул, дупэ бинеле пе каре-л ва фи фэкут.
೮ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
9 Ши вой, стэпынилор, пуртаци-вэ ла фел ку ей; ферици-вэ де аменинцэрь, ка уний каре штиць кэ Стэпынул лор ши ал востру есте ын чер ши кэ ынаинтя Луй ну се аре ын ведере фаца омулуй.
೯ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
10 Ынколо, фрацилор, ынтэрици-вэ ын Домнул ши ын путеря тэрией Луй.
೧೦ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11 Ымбрэкаци-вэ ку тоатэ армэтура луй Думнезеу, ка сэ путець цине пепт ымпотрива унелтирилор дяволулуй.
೧೧ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
12 Кэч ной н-авем де луптат ымпотрива кэрний ши сынӂелуй, чи ымпотрива кэпетениилор, ымпотрива домниилор, ымпотрива стэпыниторилор ынтунерикулуй ачестуй вяк, ымпотрива духурилор рэутэций каре сунт ын локуриле черешть. (aiōn )
೧೨ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. (aiōn )
13 Де ачея, луаць тоатэ армэтура луй Думнезеу, ка сэ вэ путець ымпотриви ын зиуа чя ря ши сэ рэмынець ын пичоаре дупэ че вець фи бируит тотул.
೧೩ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
14 Стаць гата дар, авынд мижлокул ынчинс ку адевэрул, ымбрэкаць ку платоша неприхэнирий,
೧೪ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
15 авынд пичоареле ынкэлцате ку рывна Евангелией пэчий.
೧೫ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16 Пе дясупра тутурор ачестора, луаць скутул крединцей ку каре вець путя стинӂе тоате сэӂециле арзэтоаре але челуй рэу.
೧೬ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
17 Луаць ши койфул мынтуирий ши сабия Духулуй, каре есте Кувынтул луй Думнезеу.
೧೭ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
18 Фачець ын тоатэ время, прин Духул, тот фелул де ругэчунь ши черерь. Вегяць ла ачаста ку тоатэ стэруинца ши ругэчуне пентру тоць сфинций
೧೮ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
19 ши пентру мине, ка, орь де кыте орь ымь дескид гура, сэ ми се дя кувынт, ка сэ фак куноскутэ ку ындрэзнялэ тайна Евангелией,
೧೯ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
20 ал кэрей сол ын ланцурь сунт; пентру ка, зик, сэ ворбеск ку ындрэзнялэ, кум требуе сэ ворбеск.
೨೦ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
21 Акум, ка сэ штиць ши вой деспре мине, Тихик, пряюбитул фрате ши служитор крединчос ын Домнул, вэ ва фаче куноскут тотул.
೨೧ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
22 Ви л-ам тримис ынадинс, ка сэ луаць куноштинцэ деспре старя ноастрэ ши сэ вэ ымбэрбэтезе инимиле.
೨೨ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
23 Паче фрацилор ши драгосте ымпреунэ ку крединца, дин партя луй Думнезеу Татэл ши дин партя Домнулуй Исус Христос!
೨೩ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
24 Харул сэ фие ку тоць чей че юбеск пе Домнул ностру Исус Христос ын курэцие. Амин.
೨೪ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.