< Ӂенеза 30 >
1 Кынд а вэзут Рахела кэ ну фаче копий луй Иаков, а пизмуит пе сорэ-са ши а зис луй Иаков: „Дэ-мь копий орь мор!”
೧ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.
2 Иаков с-а мыният пе Рахела ши а зис: „Сунт еу оаре ын локул луй Думнезеу, каре те-а оприт сэ ай копий?”
೨ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.
3 Еа а зис: „Ятэ роаба мя Билха; кулкэ-те ку еа, ка сэ наскэ пе ӂенункий мей ши сэ ам ши еу копий прин еа.”
೩ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,
4 Ши й-а дат де невастэ пе роаба ей Билха, ши Иаков с-а кулкат ку еа.
೪ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
5 Билха а рэмас ынсэрчинатэ ши а нэскут луй Иаков ун фиу.
೫ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,
6 Рахела а зис: „Мь-а фэкут Думнезеу дрептате, мь-а аузит гласул ши мь-а дэруит ун фиу.” Де ачея й-а пус нумеле Дан.
೬ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.
7 Билха, роаба Рахелей, а рэмас яр ынсэрчинатэ ши а нэскут луй Иаков ун ал дойля фиу.
೭ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,
8 Рахела а зис: „Ам луптат ку Думнезеу ымпотрива сурорий меле ши ам бируит.” Де ачея й-а пус нумеле Нефтали.
೮ರಾಹೇಲಳು, “ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ” ಎಂದು ಹೇಳಿ ಅದಕ್ಕೆ “ನಫ್ತಾಲಿ” ಎಂದು ಹೆಸರಿಟ್ಟಳು.
9 Кынд а вэзут Лея кэ ну май наште, а луат пе роаба са Зилпа ши а дат-о луй Иаков де невастэ.
೯ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.
10 Зилпа, роаба Леей, а нэскут луй Иаков ун фиу.
೧೦ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,
11 „Ку норок!” а зис Лея. Де ачея й-а пус нумеле Гад.
೧೧ಲೇಯಳು, “ನನಗೆ ಶುಭವಾಯಿತೆಂದು” ಹೇಳಿ ಅದಕ್ಕೆ “ಗಾದ್” ಎಂದು ಹೆಸರಿಟ್ಟಳು.
12 Зилпа, роаба Леей, а нэскут ун ал дойля фиу луй Иаков.
೧೨ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,
13 „Че феричитэ сунт!” а зис Лея; „кэч фемеиле мэ вор нуми феричитэ.” Де ачея й-а пус нумеле Ашер.
೧೩ಲೇಯಳು, “ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು” ಎಂದು ಹೇಳಿ ಅದಕ್ಕೆ “ಆಶೇರ್” ಎಂದು ಹೆಸರಿಟ್ಟಳು.
14 Рубен а ешит одатэ афарэ, пе время сечератулуй грыулуй, ши а гэсит мандрагоре пе кымп. Ле-а адус мамей сале Лея. Атунч, Рахела а зис Леей: „Дэ-мь, те рог, дин мандрагореле фиулуй тэу.”
೧೪ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.
15 Еа й-а рэспунс: „Ну-ць ажунӂе кэ мь-ай луат бэрбатул, де врей сэ ей ши мандрагореле фиулуй меу?” Ши Рахела а зис: „Ей бине! Поате сэ се кулче ку тине ын ноаптя ачаста пентру мандрагореле фиулуй тэу.”
೧೫ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.
16 Сяра, пе кынд се ынторчя Иаков де ла кымп, Лея й-а ешит ынаинте ши а зис: „Ла мине ай сэ вий, кэч те-ам кумпэрат ку мандрагореле фиулуй меу.” Ши ын ноаптя ачея с-а кулкат ку еа.
೧೬ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.
17 Думнезеу а аскултат пе Лея, каре а рэмас ынсэрчинатэ ши а нэскут луй Иаков ал чинчиля фиу.
೧೭ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.
18 Лея а зис: „М-а рэсплэтит Думнезеу, пентру кэ ам дат бэрбатулуй меу пе роаба мя.” Де ачея й-а пус нумеле Исахар.
೧೮ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.
19 Лея а рэмас ярэшь ынсэрчинатэ ши а нэскут ун ал шаселя фиу луй Иаков.
೧೯ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.
20 Лея а зис: „Фрумос дар мь-а дат Думнезеу! Де дата ачаста, бэрбатул меу ва локуи ку мине, кэч й-ам нэскут шасе фий.” Де ачея й-а пус нумеле Забулон.
೨೦ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು.
21 Ын урмэ, а нэскут о фатэ, кэрея й-а пус нумеле Дина.
೨೧ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ “ದೀನಾ” ಎಂದು ಹೆಸರಿಟ್ಟಳು.
22 Думнезеу Шь-а адус аминте де Рахела, а аскултат-о ши а фэкут-о сэ айбэ копий.
೨೨ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.
23 Еа а рэмас ынсэрчинатэ ши а нэскут ун фиу, ши а зис: „Мь-а луат Думнезеу окара!”
೨೩ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.
24 Ши й-а пус нумеле Иосиф, зикынд: „Домнул сэ-мь май адауӂе ун фиу!”
೨೪ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.
25 Дупэ че а нэскут Рахела пе Иосиф, Иаков а зис луй Лабан: „Ласэ-мэ сэ плек, ка сэ мэ дук акасэ, ын цара мя.
೨೫ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.
26 Дэ-мь невестеле ши копиий, пентру каре ць-ам служит, ши вой плека, фииндкэ штий че службэ ць-ам фэкут.”
೨೬ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.
27 Лабан й-а зис: „Дакэ ам кэпэтат тречере ынаинтя та, май зэбовеште; вэд бине кэ Домнул м-а бинекувынтат дин причина та;
೨೭ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
28 хотэрэште-мь симбрия та ши ць-о вой да.”
೨೮ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ” ಎಂದು ಹೇಳಿದನು.
29 Иаков й-а рэспунс: „Штий кум ць-ам служит ши кум ць-ау пропэшит вителе ку мине,
೨೯ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.
30 кэч пуцинул пе каре-л авяй ынаинте де вениря мя а крескут мулт ши Домнул те-а бинекувынтат орьынкотро ам мерс еу. Акум, кынд ам сэ мунческ ши пентру каса мя?”
೩೦ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.
31 Лабан а зис: „Че сэ-ць дау?” Ши Иаков а рэспунс: „Сэ ну-мь дай нимик. Дакэ те ынвоешть ку че-ць вой спуне, ыць вой паште турма ши май департе ши о вой пэзи.
೩೧ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು”
32 Азь ам сэ трек прин тоатэ турма та; ам сэ пун деопарте дин ой орьче мел сеин ши пестриц ши орьче мел негру, ши дин капре, тот че есте пестриц ши сеин. Ачаста сэ фие симбрия мя.
೩೨ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
33 Ятэ кум се ва доведи чинстя мя: де акум ынколо, кынд ай сэ вий сэ-мь везь симбрия, тот че ну ва фи сеин ши пестриц ынтре капре ши негру ынтре мей ши се ва гэси ла мине сэ фие сокотит ка фурат.”
೩೩ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.
34 Лабан а зис: „Бине! Фие аша кум ай зис.”
೩೪ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು.
35 Ын ачеяшь зи, а пус деопарте цапий бэлцаць ши пестриць, тоате капреле сеине ши пестрице, тоате челе че авяу алб пе еле ши тоць меий каре ерау негри. Ле-а дат ын мыниле фиилор сэй.
೩೫ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
36 Апой а пус о депэртаре де трей зиле де друм ынтре ел ши Иаков, ши Иаков пэштя челелалте ой але луй Лабан.
೩೬ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.
37 Иаков а луат нуеле верзь де плоп, де мигдал ши де платан; а деспуят де пе еле фыший де коажэ ши а фэкут сэ се вадэ албяца каре ера пе нуеле.
೩೭ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,
38 Апой а пус нуелеле пе каре ле деспуясе де коажэ ын жгябурь, ын адэпэторь, суб окий оилор каре веняу сэ бя, ка, атунч кынд вор вени сэ бя, сэ зэмисляскэ.
೩೮ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.
39 Оиле зэмисляу уйтынду-се ла нуеле ши фэчяу мей бэлцаць, сеинь ши пестриць.
೩೯ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
40 Иаков деспэрця меий ачештя ши абэтя фецеле оилор дин турма луй Лабан кэтре челе сеине ши бэлцате. Шь-а фэкут астфел турме деосебите, пе каре ну ле-а ымпреунат ку турма луй Лабан.
೪೦ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.
41 Орь де кыте орь се ынфербынтау оиле челе май тарь, Иаков пуня нуелеле ын жгябурь, суб окий оилор, ка еле сэ зэмисляскэ уйтынду-се ла нуеле.
೪೧ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.
42 Кынд оиле ерау слабе, ну пуня нуелеле; аша кэ челе слабе ерау пентру Лабан, яр челе тарь, пентру Иаков.
೪೨ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.
43 Омул ачеста с-а ымбогэцит астфел дин че ын че май мулт; а авут мулте турме, робь ши роабе, кэмиле ши мэгарь.
೪೩ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.