< Иоан 12 >

1 Ку шасе зиле ынаинте де Паште, Исус а венит ын Бетания, унде ера Лазэр, каре фусесе морт ши пе каре ыл ынвиясе дин морць.
ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
2 Аколо, Й-ау прегэтит о чинэ. Марта служя, яр Лазэр ера унул дин чей че шедяу ла масэ ку Ел.
ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
3 Мария а луат ун литру ку мир де нард курат, де маре прец, а унс пичоареле луй Исус ши Й-а штерс пичоареле ку пэрул ей ши с-а умплут каса де миросул мирулуй.
ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
4 Унул дин ученичий Сэй, Иуда Искариотянул, фиул луй Симон, каре авя сэ-Л вындэ, а зис:
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
5 „Де че ну с-а вындут ачест мир ку трей суте де лей ши сэ се фи дат сэрачилор?”
“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
6 Зичя лукрул ачеста ну пентру кэ пурта грижэ де сэрачь, чи пентру кэ ера ун хоц ши, ка унул каре циня пунга, луа ел че се пуня ын еа.
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
7 Дар Исус а зис: „Лас-о ын паче, кэч еа л-а пэстрат пентру зиуа ынгропэрий Меле.
ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
8 Песэрачь ый авець тотдяуна ку вой, дар пе Мине ну Мэ авець тотдяуна.”
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
9 О маре мулциме де иудей ау афлат кэ Исус ера ын Бетания ши ау венит аколо ну нумай пентру Исус, чи ка сэ вадэ ши пе Лазэр, пе каре-л ынвиясе дин морць.
ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
10 Преоций чей май де сямэ ау хотэрыт сэ омоаре ши пе Лазэр,
೧೦ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 кэч дин причина луй мулць иудей плекау де ла ей ши кредяу ын Исус.
೧೧ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12 А доуа зи, о глоатэ маре, каре венисе ла празник, кум а аузит кэ вине Исус ын Иерусалим,
೧೨ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
13 а луат рамурь де финик ши Й-а ешит ын ынтымпинаре, стригынд: „Осана! Бинекувынтат есте Чел че вине ын Нумеле Домнулуй, Ымпэратул луй Исраел!”
೧೩ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
14 Исус а гэсит ун мэгэруш ши а ынкэлекат пе ел, дупэ кум есте скрис:
೧೪ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
15 „Ну те теме, фийка Сионулуй; ятэ кэ Ымпэратул тэу вине кэларе пе мынзул уней мэгэрице.”
೧೫ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16 Ученичий Луй н-ау ынцелес ачесте лукрурь де ла ынчепут, дар, дупэ че а фост прослэвит Исус, шь-ау адус аминте кэ ачесте лукрурь ерау скрисе деспре Ел ши кэ ей ле ымплинисерэ ку привире ла Ел.
೧೬ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17 Тоць чей че фусесерэ ымпреунэ ку Исус, кынд кемасе пе Лазэр дин мормынт ши-л ынвиясе дин морць, мэртурисяу деспре Ел.
೧೭ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18 Ши нородул Й-а ешит ын ынтымпинаре, пентру кэ афласе кэ фэкусе семнул ачеста.
೧೮ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19 Фарисеий ау зис деч ынтре ей: „Ведець кэ ну кыштигаць нимик. Ятэ кэ лумя се дуче дупэ Ел!”
೧೯ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20 Ниште гречь динтре чей че се суисерэ сэ се ынкине ла празник
೨೦ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21 с-ау апропият де Филип, каре ера дин Бетсаида Галилеий, л-ау ругат ши ау зис: „Домнуле, ам вря сэ ведем пе Исус.”
೨೧ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22 Филип с-а дус ши а спус луй Андрей, апой Андрей ши Филип ау спус луй Исус.
೨೨ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23 Дрепт рэспунс, Исус ле-а зис: „Асосит часул сэ фие прослэвит Фиул омулуй.
೨೩ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24 Адевэрат, адевэрат вэ спун кэ, дакэ грэунтеледе грыу каре а кэзут пе пэмынт ну моаре, рэмыне сингур, дар дакэ моаре, адуче мулт род.
೨೪ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25 Чинеышь юбеште вяца о ва перде ши чине ышь урэште вяца ын лумя ачаста о ва пэстра пентру вяца вешникэ. (aiōnios g166)
೨೫ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aiōnios g166)
26 Дакэ Ымь служеште чинева, сэ Мэ урмезе; ши ундесунт Еу, аколо ва фи ши служиторул Меу. Дакэ Ымь служеште чинева, Татэл ыл ва чинсти.
೨೬ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27 Акум, суфлетул Меу есте тулбурат. Ши че вой зиче: ‘Татэ, избэвеште-Мэ дин часул ачеста’? Дартокмай пентру ачаста ам венит пынэ ла часул ачеста!
೨೭ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28 Татэ, прослэвеште Нумеле Тэу!” Ши дин чер, с-а аузит ун глас, каре зичя: „Л-ам прослэвит ши-Л вой май прослэви!”
೨೮ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29 Нородул каре стэтя аколо ши каре аузисе гласул а зис кэ а фост ун тунет. Алций зичяу: „Ун ынӂер а ворбит ку Ел!”
೨೯ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30 Исус а рэспунс: „Ну пентру Мине с-а аузит гласул ачеста, чи пентру вой.
೩೦ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31 Акум аре лок жудеката лумий ачестея, акум стэпыниторуллумий ачестея ва фи арункат афарэ.
೩೧ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32 Ши дупэ чевой фи ынэлцат де пе пэмынт, вой атраӂе ла Мине петоць оамений.”
೩೨ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33 Ворбинд астфел, арэта ку че моарте авя сэ моарэ.
೩೩ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34 Нородул Й-а рэспунс: „Ной ам аузит дин Леӂе кэ Христосул рэмыне ын вяк. Кум дар зичь Ту кэ Фиул омулуй требуе сэ фие ынэлцат? Чине есте ачест Фиу ал омулуй?” (aiōn g165)
೩೪ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. (aiōn g165)
35 Исус ле-а зис: „Лумина май естепуцинэ време ын мижлокул востру. Умблацька уний каре авець лумина, ка сэ ну вэ куприндэ ынтунерикул: чинеумблэ ын ынтунерик ну штие унде мерӂе.
೩೫ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36 Кытэ време авець лумина принтре вой, кредець ын луминэ, ка сэ фиць фийай луминий.” Исус ле-а спус ачесте лукрурь, апой а плекат ши С-а аскунс де ей.
೩೬ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37 Мэкар кэ фэкусе атытя семне ынаинтя лор, тот ну кредяу ын Ел,
೩೭ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38 ка сэ се ымплиняскэ ворба пе каре о спусесе пророкул Исая: „Доамне, чине а дат крезаре проповэдуирий ноастре ши куй а фост дескоперитэ путеря брацулуй Домнулуй?”
೩೮ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39 Де ачея ну путяу креде, пентру кэ Исая а май зис:
೩೯ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40 „Ле-а орбит окий ши ле-а ымпетрит инима, ка сэ ну вадэ ку окий, сэ ну ынцелягэ ку инима, сэ ну се ынтоаркэ ла Думнезеу ши сэ-й виндек.”
೪೦“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
41 Исая а спус ачесте лукрурь кынд а вэзут слава Луй ши а ворбит деспре Ел.
೪೧ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
42 Тотушь, кяр динтре фрунташь, мулць ау крезут ын Ел; дар де фрика фарисеилор, ну-Л мэртурисяу пе фацэ, ка сэ ну фие даць афарэ дин синагогэ.
೪೨ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
43 Кэч ау юбит май мулт слава оаменилор декыт слава луй Думнезеу.
೪೩ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44 Яр Исус а стригат: „Чинекреде ын Мине ну креде ын Мине, чи ын Чел че М-а тримис пе Мине.
೪೪ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
45 Ши чинеМэ веде пе Мине веде пе Чел че М-а тримис пе Мине.
೪೫ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
46 Еуам венит ка сэ фиу о луминэ ын луме, пентру ка орьчине креде ын Мине сэ ну рэмынэ ын ынтунерик.
೪೬ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 Дакэ ауде чинева кувинтеле Меле ши ну ле пэзеште, ну Еуыл жудек, кэч Еу н-амвенит сэ жудек лумя, чи сэ мынтуеск лумя.
೪೭ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
48 Пе чинеМэ несокотеште ши ну примеште кувинтеле Меле, аре чине-л осынди: Кувынтулпе каре л-ам вестит Еу, ачела ыл ва осынди ын зиуа де апой.
೪೮ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
49 Кэч Еун-ам ворбит де ла Мине Ынсумь, чи Татэл, каре М-а тримис, Ел Ынсушь Мь-а порунчит четребуе сэ спун ши кум требуе сэ ворбеск.
೪೯ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
50 Ши штиу кэ порунка Луй есте вяца вешникэ. Де ачея лукруриле пе каре ле спун, ле спун аша кум Ми ле-а спус Татэл.” (aiōnios g166)
೫೦ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aiōnios g166)

< Иоан 12 >