< 2-я Паралипоменон 1 >
1 И утвердился Соломон, сын Давидов, в царстве своем; и Господь Бог его был с ним, и вознес его высоко.
೧ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
2 И приказал Соломон собраться всему Израилю: тысяченачальникам и стоначальникам, и судьям, и всем начальствующим во всем Израиле - главам поколений.
೨ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.
3 И пошли Соломон и все собрание с ним на высоту, что в Гаваоне, ибо там была Божия скиния собрания, которую устроил Моисей, раб Господень, в пустыне.
೩ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.
4 Ковчег Божий принес Давид из Кириаф-Иарима на место, которое приготовил для него Давид, устроив для него скинию в Иерусалиме.
೪ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
5 А медный жертвенник, который сделал Веселеил, сын Урия, сына Орова, оставался там, пред скиниею Господнею, и взыскал его Соломон с собранием.
೫ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
6 И там пред лицем Господа, на медном жертвеннике, который пред скиниею собрания, вознес Соломон тысячу всесожжений.
೬ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
7 В ту ночь явился Бог Соломону и сказал ему: проси, что Мне дать тебе.
೭ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು
8 И сказал Соломон Богу: Ты сотворил Давиду, отцу моему, великую милость и поставил меня царем вместо него.
೮ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
9 Да исполнится же, Господи Боже, слово Твое к Давиду, отцу моему. Так как Ты воцарил меня над народом многочисленным, как прах земной,
೯ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.
10 то ныне дай мне премудрость и знание, чтобы я умел выходить пред народом сим и входить, ибо кто может управлять сим народом Твоим великим?
೧೦ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
11 И сказал Бог Соломону: за то, что это было на сердце твоем, и ты не просил богатства, имения и славы и души неприятелей твоих, и также не просил ты многих дней, а просил себе премудрости и знания, чтобы управлять народом Моим, над которым Я воцарил тебя,
೧೧ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
12 премудрость и знание дается тебе, а богатство и имение и славу Я дам тебе такие, подобных которым не бывало у царей прежде тебя и не будет после тебя.
೧೨ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
13 И пришел Соломон с высоты, что в Гаваоне, от скинии собрания, в Иерусалим и царствовал над Израилем.
೧೩ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.
14 И набрал Соломон колесниц и всадников; и было у него тысяча четыреста колесниц и двенадцать тысяч всадников; и он разместил их в колесничных городах и при царе в Иерусалиме.
೧೪ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
15 И сделал царь серебро и золото в Иерусалиме равноценным простому камню, а кедры, по множеству их, сделал равноценными сикоморам, которые на низких местах.
೧೫ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
16 Коней Соломону приводили из Египта и из Кувы; купцы царские из Кувы получали их за деньги.
೧೬ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
17 Колесница получаема и доставляема была из Египта за шестьсот сиклей серебра, а конь за сто пятьдесят. Таким же образом они руками своими доставляли это всем царям Хеттейским и царям Арамейским.
೧೭ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.