< 4-я Царств 13 >
1 В двадцать третий год Иоаса, сына Охозиина, царя Иудейского, воцарился Иоахаз, сын Ииуя, над Израилем в Самарии, и царствовал семнадцать лет,
೧ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.
2 и делал неугодное в очах Господних, и ходил в грехах Иеровоама, сына Наватова, который ввел Израиля в грех, и не отставал от них.
೨ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
3 И возгорелся гнев Господа на Израиля, и Он предавал их в руку Азаила, царя Сирийского, и в руку Венадада, сына Азаилова, во все дни.
೩ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
4 И помолился Иоахаз лицу Господню, и услышал его Господь, потому что видел стеснение Израильтян, как теснил их царь Сирийский.
೪ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು. ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,
5 И дал Господь Израильтянам избавителя, и вышли они из-под руки Сириян, и жили сыны Израилевы в шатрах своих, как вчера и третьего дня.
೫ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
6 Однакож не отступали от грехов дома Иеровоама, который ввел Израиля в грех; ходили в них, и дубрава стояла в Самарии.
೬ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
7 У Иоахаза оставалось войска только пятьдесят всадников, десять колесниц и десять тысяч пеших, оттого, что истребил их царь Сирийский и обратил их в прах на попрание.
೭ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
8 Прочее об Иоахазе и обо всем, что он сделал, и о мужественных подвигах его, написано в летописи царей Израильских.
೮ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
9 И почил Иоахаз с отцами своими, и похоронили его в Самарии. И воцарился Иоас, сын его, вместо него.
೯ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.
10 В тридцать седьмой год Иоаса, царя Иудейского, воцарился Иоас, сын Иоахазов, над Израилем в Самарии, и царствовал шестнадцать лет,
೧೦ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.
11 и делал неугодное в очах Господних; не отставал от всех грехов Иеровоама, сына Наватова, который ввел Израиля в грех, но ходил в них.
೧೧ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
12 Прочее об Иоасе и обо всем, что он сделал, и о мужественных подвигах его, как он воевал с Амасиею, царем Иудейским, написано в летописи царей Израильских.
೧೨ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
13 И почил Иоас с отцами своими, а Иеровоам сел на престоле его. И погребен Иоас в Самарии с царями Израильскими.
೧೩ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.
14 Елисей заболел болезнью, от которой потом и умер. И пришел к нему Иоас, царь Израильский, и плакал над ним, и говорил: отец мой! отец мой! колесница Израиля и конница его!
೧೪ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
15 И сказал ему Елисей: возьми лук и стрелы. И взял он лук и стрелы.
೧೫ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನೂ, ಬಾಣಗಳನ್ನೂ ತರಿಸು” ಎಂದು ಹೇಳಿದನು. ಅವನು ತೆಗೆದುಕೊಂಡನು.
16 И сказал царю Израильскому: положи руку твою на лук. И положил он руку свою. И наложил Елисей руки свои на руки царя,
೧೬ಆಗ ಎಲೀಷನು ಇಸ್ರಾಯೇಲರ ಅರಸನಿಗೆ, “ಬಿಲ್ಲನ್ನು ಹಿಡಿದುಕೋ” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು.
17 и сказал: отвори окно на восток. И он отворил. И сказал Елисей: выстрели. И он выстрелил. И сказал: эта стрела избавления от Господа и стрела избавления против Сирии, и ты поразишь Сириян в Афеке вконец.
೧೭ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.
18 И сказал Елисей: возьми стрелы. И он взял. И сказал царю Израильскому: бей по земле. И ударил он три раза, и остановился.
೧೮ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
19 И разгневался на него человек Божий, и сказал: надобно было бы бить пять или шесть раз, тогда ты побил бы Сириян совершенно, а теперь только три раза поразишь Сириян.
೧೯ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.
20 И умер Елисей, и похоронили его. И полчища Моавитян пришли в землю в следующем году.
೨೦ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
21 И было, что, когда погребали одного человека, то, увидев это полчище, погребавшие бросили того человека в гроб Елисеев; и он при падении своем коснулся костей Елисея, и ожил, и встал на ноги свои.
೨೧ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.
22 Азаил, царь Сирийский, теснил Израильтян во все дни Иоахаза.
೨೨ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.
23 Но Господь умилосердился над ними, и помиловал их, и обратился к ним ради завета Своего с Авраамом, Исааком и Иаковом, и не хотел истребить их, и не отверг их от лица Своего доныне.
೨೩ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
24 И умер Азаил, царь Сирийский, и воцарился Венадад, сын его, вместо него.
೨೪ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.
25 И взял назад Иоас, сын Иоахаза, из руки Венадада, сына Азаила, города, которые он взял войною из руки отца его Иоахаза. Три раза разбил его Иоас и возвратил города Израилевы.
೨೫ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.