< 2-я Царств 17 >
1 И сказал Ахитофел Авессалому: выберу я двенадцать тысяч человек и встану и пойду в погоню за Давидом в эту ночь;
೧ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.
2 и нападу на него, когда он будет утомлен и с опущенными руками, и приведу его в страх; и все люди, которые с ним, разбегутся; и я убью одного царя
೨ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
3 и всех людей обращу к тебе; и когда не будет одного, душу которого ты ищешь, тогда весь народ будет в мире.
೩ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.
4 И понравилось это слово Авессалому и всем старейшинам Израилевым.
೪ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.
5 И сказал Авессалом: позовите Хусия Архитянина; послушаем, что он скажет.
೫ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.
6 И пришел Хусий к Авессалому, и сказал ему Авессалом, говоря: вот что говорит Ахитофел; сделать ли по его словам? а если нет, то говори ты.
೬ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
7 И сказал Хусий Авессалому: нехорош на этот раз совет, который дал Ахитофел.
೭ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
8 И продолжал Хусий: ты знаешь твоего отца и людей его; они храбры и сильно раздражены, как медведица в поле, у которой отняли детей, и как вепрь свирепый на поле, и отец твой - человек воинственный; он не остановится ночевать с народом.
೮ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
9 Вот, теперь он скрывается в какой-нибудь пещере, или в другом месте, и если кто падет при первом нападении на них, и услышат и скажут: “было поражение людей, последовавших за Авессаломом”,
೯ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.
10 тогда и самый храбрый, у которого сердце, как сердце львиное, упадет духом; ибо всему Израилю известно, как храбр отец твой и мужественны те, которые с ним.
೧೦ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
11 Посему я советую: пусть соберется к тебе весь Израиль, от Дана до Вирсавии, во множестве, как песок при море, и ты сам пойдешь посреди его;
೧೧ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
12 и тогда мы пойдем против него, в каком бы месте он ни находился, и нападем на него, как падает роса на землю; и не останется у него ни одного человека из всех, которые с ним;
೧೨ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
13 а если он войдет в какой-либо город, то весь Израиль принесет к тому городу веревки, и мы стащим его в реку, так что не останется ни одного камешка.
೧೩ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
14 И сказал Авессалом и весь Израиль: совет Хусия Архитянина лучше совета Ахитофелова. Так Господь судил разрушить лучший совет Ахитофела, чтобы навести Господу бедствие на Авессалома.
೧೪ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
15 И сказал Хусий Садоку и Авиафару священникам: так и так советовал Ахитофел Авессалому и старейшинам Израилевым, а так и так посоветовал я.
೧೫ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
16 И теперь пошлите поскорее и скажите Давиду так: не оставайся в эту ночь на равнине в пустыне, но поскорее перейди, чтобы не погибнуть царю и всем людям, которые с ним.
೧೬ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು
17 Ионафан и Ахимаас стояли у источника Рогель. И пошла служанка и рассказала им, а они пошли и известили царя Давида; ибо они не могли показаться в городе.
೧೭ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
18 И увидел их отрок и донес Авессалому; но они оба скоро ушли и пришли в Бахурим, в дом одного человека, у которого на дворе был колодезь, и спустились туда.
೧೮ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
19 А женщина взяла и растянула над устьем колодезя покрывало и насыпала на него крупы, так что не было ничего заметно.
೧೯ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
20 И пришли рабы Авессалома к женщине в дом, и сказали: где Ахимаас и Ионафан? И сказала им женщина: они перешли вброд реку. И искали они, и не нашли, и возвратились в Иерусалим.
೨೦ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.
21 Когда они ушли, те вышли из колодезя, пошли и известили царя Давида и сказали Давиду: встаньте и поскорее перейдите воду; ибо так и так советовал о вас Ахитофел.
೨೧ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
22 И встал Давид и все люди, бывшие с ним, и перешли Иордан; к рассвету не осталось ни одного, который не перешел бы Иордана.
೨೨ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.
23 И увидел Ахитофел, что не исполнен совет его, и оседлал осла, и собрался, и пошел в дом свой, в город свой, и сделал завещание дому своему, и удавился, и умер, и был погребен в гробе отца своего.
೨೩ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
24 И пришел Давид в Маханаим, а Авессалом перешел Иордан, сам и весь Израиль с ним.
೨೪ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.
25 Авессалом поставил Амессая, вместо Иоава, над войском. Амессай был сын одного человека, по имени Иефера из Изрееля, который вошел к Авигее, дочери Нааса, сестре Саруи, матери Иоава.
೨೫ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
26 И Израиль с Авессаломом расположился станом в земле Галаадской.
೨೬ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.
27 Когда Давид пришел в Маханаим, то Сови, сын Нааса, из Раввы Аммонитской, и Махир, сын Аммиила, из Лодавара, и Верзеллий Галаадитянин из Роглима,
೨೭ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು
28 принесли десять приготовленных постелей, десять блюд и глиняных сосудов, и пшеницы, и ячменя, и муки, и пшена, и бобов, и чечевицы, и жареных зерен,
೨೮ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
29 и меду, и масла, и овец, и сыра коровьего, принесли Давиду и людям, бывшим с ним, в пищу; ибо говорили они: народ голоден и утомлен и терпел жажду в пустыне
೨೯ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.