< Иезекииль 30 >
1 И было ко мне слово Господне:
೧ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
2 сын человеческий! изреки пророчество и скажи: так говорит Господь Бог: рыдайте! о, злосчастный день!
೨“ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!
3 Ибо близок день, так! близок день Господа, день мрачный; година народов наступает.
೩ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.
4 И пойдет меч на Египет, и ужас распространится в Ефиопии, когда в Египте будут падать пораженные, когда возьмут богатство его, и основания его будут разрушены;
೪ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.
5 Ефиопия, и Ливия, и Лидия, и весь смешанный народ, и Хуб, и сыны земли завета вместе с ними падут от меча.
೫“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”
6 Так говорит Господь: падут подпоры Египта, и упадет гордыня могущества его; от Мигдола до Сиены будут падать в нем от меча, сказал Господь Бог.
೬ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.
7 И опустеет он среди опустошенных земель, и города его будут среди опустошенных городов.
೭ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.
8 И узнают, что Я Господь, когда пошлю огонь на Египет, и все подпоры его будут сокрушены.
೮“‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
9 В тот день пойдут от Меня вестники на кораблях, чтобы устрашить беспечных Ефиоплян, и распространится у них ужас, как в день Египта; ибо вот, он идет.
೯‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”
10 Так говорит Господь Бог: положу конец многолюдству Египта рукою Навуходоносора, царя Вавилонского.
೧೦ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.
11 Он и с ним народ его, лютейший из народов, приведены будут на погибель сей земли, и обнажат мечи свои на Египет, и наполнят землю пораженными.
೧೧ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.
12 И реки сделаю сушею и предам землю в руки злым, и рукою иноземцев опустошу землю и все, наполняющее ее. Я, Господь, сказал это.
೧೨ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
13 Так говорит Господь Бог: истреблю идолов и уничтожу лжебогов в Мемфисе, и из земли Египетской не будет уже властителя, и наведу страх на землю Египетскую.
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.
14 И опустошу Пафрос и пошлю огонь на Цоан, и произведу суд над Но.
೧೪ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,
15 И изолью ярость Мою на Син, крепость Египта, и истреблю многолюдие в Но.
೧೫“ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.
16 И пошлю огонь на Египет; вострепещет Син, и Но рушится, и на Мемфис нападут враги среди дня.
೧೬ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.
17 Молодые люди Она и Бубаста падут от меча, а прочие пойдут в плен.
೧೭“ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
18 И в Тафнисе померкнет день, когда Я сокрушу там ярмо Египта, и прекратится в нем гордое могущество его. Облако закроет его, и дочери его пойдут в плен.
೧೮ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
19 Так произведу Я суд над Египтом, и узнают, что Я Господь.
೧೯ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
20 В одиннадцатом году, в первом месяце, в седьмой день месяца, было ко мне слово Господне:
೨೦ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
21 сын человеческий! Я уже сокрушил мышцу фараону, царю Египетскому; и вот, она еще не обвязана для излечения ее и не обвита врачебными перевязками, от которых она получила бы силу держать меч.
೨೧“ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”
22 Посему так говорит Господь Бог: вот, Я - на фараона, царя Египетского, и сокрушу мышцы его, здоровую и переломленную, так что меч выпадет из руки его.
೨೨ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.
23 И рассею Египтян по народам, и развею их по землям.
೨೩“ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು.
24 А мышцы царя Вавилонского сделаю крепкими и дам ему меч Мой в руку, мышцы же фараона сокрушу, и он изъязвленный будет сильно стонать перед ним.
೨೪ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.
25 Укреплю мышцы царя Вавилонского, а мышцы у фараона опустятся; и узнают, что Я Господь, когда меч Мой дам в руку царю Вавилонскому, и он прострет его на землю Египетскую.
೨೫ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.
26 И рассею Египтян по народам, и развею их по землям, и узнают, что Я Господь.
೨೬“ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.”