< Ездра 7 >
1 После сих происшествий, в царствование Артаксеркса, царя Персидского, Ездра, сын Сераии, сын Азарии, сын Хелкии,
೧ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
2 сын Шаллума, сын Садока, сын Ахитува,
೨ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.
3 сын Амарии, сын Азарии, сын Марайофа,
೩ಅಮರ್ಯನು ಅಜರ್ಯನ ಮಗ; ಇವನು ಮೆರಾಯೋತನ ಮಗ.
4 сын Захарии, сын Уззия, сын Буккия,
೪ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ.
5 сын Авишуя, сын Финееса, сын Елеазара, сын Аарона первосвященника, -
೫ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.
6 сей Ездра вышел из Вавилона. Он был книжник, сведущий в законе Моисеевом, который дал Господь Бог Израилев. И дал ему царь все по желанию его, так как рука Господа Бога его была над ним.
೬ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
7 С ним пошли в Иерусалим и некоторые из сынов Израилевых, и из священников и левитов, и певцов и привратников и нефинеев в седьмой год царя Артаксеркса.
೭ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.
8 И пришел он в Иерусалим в пятый месяц, - в седьмой же год царя.
೮ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು.
9 Ибо в первый день первого месяца было начало выхода из Вавилона, и в первый день пятого месяца он пришел в Иерусалим, так как благодеющая рука Бога его была над ним,
೯ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
10 потому что Ездра расположил сердце свое к тому, чтобы изучать закон Господень и исполнять его, и учить в Израиле закону и правде.
೧೦ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
11 И вот содержание письма, которое дал царь Артаксеркс Ездре священнику, книжнику, учившему словам заповедей Господа и законов Его в Израиле:
೧೧ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
12 Артаксеркс, царь царей, Ездре священнику, учителю закона Бога небесного совершенному, и прочее.
೧೨“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,
13 От меня дано повеление, чтобы в царстве моем всякий из народа Израилева и из священников его и левитов, желающий идти в Иерусалим, шел с тобою.
೧೩ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
14 Так как ты посылаешься от царя и семи советников его, чтобы обозреть Иудею и Иерусалим по закону Бога твоего, находящемуся в руке твоей,
೧೪ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.
15 и чтобы доставить серебро и золото, которое царь и советники его пожертвовали Богу Израилеву, Которого жилище в Иерусалиме,
೧೫ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,
16 и все серебро и золото, которое ты соберешь во всей области Вавилонской, вместе с доброхотными даяниями от народа и священников, которые пожертвуют они для дома Бога своего, что в Иерусалиме;
೧೬ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
17 поэтому немедленно купи на эти деньги волов, овнов, агнцев и хлебных приношений к ним и возлияний для них, и принеси их на жертвенник дома Бога вашего в Иерусалиме.
೧೭ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
18 И что тебе и братьям твоим заблагорассудится сделать из остального серебра и золота, то по воле Бога вашего делайте.
೧೮ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.
19 И сосуды, которые даны тебе для служб в доме Бога твоего, поставь пред Богом Иерусалимским.
೧೯ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
20 И прочее потребное для дома Бога твоего, что ты признаешь нужным, давай из дома царских сокровищ.
೨೦ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
21 И от меня царя Артаксеркса дается повеление всем сокровищехранителям, которые за рекою: все, чего потребует у вас Ездра священник, учитель закона Бога небесного, немедленно давайте:
೨೧“ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
22 серебра до ста талантов, и пшеницы до ста коров, и вина до ста батов, и до ста же батов масла, а соли без обозначения количества.
೨೨ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
23 Все, что повелено Богом небесным, должно делаться со тщанием для дома Бога небесного; смотрите, чтобы кто не простер руки на дом Бога небесного, дабы не было гнева Его на царство, царя и сыновей его.
೨೩ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
24 И даем вам знать, чтобы ни на кого из священников или левитов, певцов, привратников, нефинеев и служащих при этом доме Божием, не налагать ни подати, ни налога, ни пошлины.
೨೪ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
25 Ты же, Ездра, по премудрости Бога твоего, которая в руке твоей, поставь правителей и судей, чтоб они судили весь народ за рекою, всех знающих законы Бога твоего, а кто не знает, тех учите.
೨೫“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
26 Кто же не будет исполнять закон Бога твоего и закон царя, над тем немедленно пусть производят суд, на смерть ли, или на изгнание, или на денежную пеню, или на заключение в темницу.
೨೬ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
27 Благословен Господь, Бог отцов наших, вложивший в сердце царя - украсить дом Господень, который в Иерусалиме,
೨೭ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
28 и склонивший на меня милость царя и советников его, и всех могущественных князей царя! И я ободрился, ибо рука Господа Бога моего была надо мною, и собрал я глав Израиля, чтоб они пошли со мною.
೨೮ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.