< Бытие 2 >
1 Так совершены небо и земля и все воинство их.
ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.
2 И совершил Бог к седьмому дню дела Свои, которые Он делал, и почил в день седьмый от всех дел Своих, которые делал.
ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
3 И благословил Бог седьмой день, и освятил его, ибо в оный почил от всех дел Своих, которые Бог творил и созидал.
ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
4 Вот происхождение неба и земли, при сотворении их, в то время, когда Господь Бог создал землю и небо,
ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.
5 и всякий полевой кустарник, которого еще не было на земле, и всякую полевую траву, которая еще не росла, ибо Господь Бог не посылал дождя на землю, и не было человека для возделывания земли,
ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
6 но пар поднимался с земли и орошал все лице земли.
ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.
7 И создал Господь Бог человека из праха земного, и вдунул в лице его дыхание жизни, и стал человек душею живою.
ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
8 И насадил Господь Бог рай в Едеме на востоке, и поместил там человека, которого создал.
ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.
9 И произрастил Господь Бог из земли всякое дерево, приятное на вид и хорошее для пищи, и дерево жизни посреди рая, и дерево познания добра и зла.
ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.
10 Из Едема выходила река для орошения рая; и потом разделялась на четыре реки.
ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು.
11 Имя одной Фисон: она обтекает всю землю Хавила, ту, где золото;
ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
12 и золото той земли хорошее; там бдолах и камень оникс.
ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.
13 Имя второй реки Гихон (Геон): она обтекает всю землю Куш.
ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
14 Имя третьей реки Хиддекель (Тигр): она протекает пред Ассириею. Четвертая река Евфрат.
ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.
15 И взял Господь Бог человека, которого создал, и поселил его в саду Едемском, чтобы возделывать его и хранить его.
ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.
16 И заповедал Господь Бог человеку, говоря: от всякого дерева в саду ты будешь есть,
ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.
17 а от дерева познания добра и зла не ешь от него, ибо в день, в который ты вкусишь от него, смертью умрешь.
ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.
18 И сказал Господь Бог: не хорошо быть человеку одному; сотворим ему помощника, соответственного ему.
ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.
19 Господь Бог образовал из земли всех животных полевых и всех птиц небесных, и привел их к человеку, чтобы видеть, как он назовет их, и чтобы, как наречет человек всякую душу живую, так и было имя ей.
ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
20 И нарек человек имена всем скотам и птицам небесным и всем зверям полевым; но для человека не нашлось помощника, подобного ему.
ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ.
21 И навел Господь Бог на человека крепкий сон; и, когда он уснул, взял одно из ребер его, и закрыл то место плотию.
ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.
22 И создал Господь Бог из ребра, взятого у человека, жену, и привел ее к человеку.
ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
23 И сказал человек: вот, это кость от костей моих и плоть от плоти моей; она будет называться женою, ибо взята от мужа своего.
ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”
24 Потому оставит человек отца своего и мать свою и прилепится к жене своей; и будут два одна плоть.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
25 И были оба наги, Адам и жена его, и не стыдились.
ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.