< Иона 2 >

1 И помолился Иона Господу Богу своему из чрева кита
ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
2 и сказал: к Господу воззвал я в скорби моей, и Он услышал меня; из чрева преисподней я возопил, и Ты услышал голос мой. (Sheol h7585)
“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol h7585)
3 Ты вверг меня в глубину, в сердце моря, и потоки окружили меня, все воды Твои и волны Твои проходили надо мною.
ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
4 И я сказал: отринут я от очей Твоих, однако я опять увижу святый храм Твой.
‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
5 Объяли меня воды до души моей, бездна заключила меня; морскою травою обвита была голова моя.
ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
6 До основания гор я нисшел, земля своими запорами навек заградила меня; но Ты, Господи Боже мой, изведешь душу мою из ада. (questioned)
ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
7 Когда изнемогла во мне душа моя, я вспомнил о Господе, и молитва моя дошла до Тебя, до храма святого Твоего.
“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
8 Чтущие суетных и ложных богов оставили Милосердого своего,
“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
9 а я гласом хвалы принесу Тебе жертву; что обещал, исполню: у Господа спасение!
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
10 И сказал Господь киту, и он изверг Иону на сушу.
೧೦ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

< Иона 2 >