< Псалтирь 132 >
1 Песнь восхождения. Вспомни, Господи, Давида и все сокрушение его:
೧ಯಾತ್ರಾಗೀತೆ. ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
2 как он клялся Господу, давал обет Сильному Иакова:
೨ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
3 “не войду в шатер дома моего, не взойду на ложе мое;
೩“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
4 не дам сна очам моим и веждам моим - дремания,
೪ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
5 доколе не найду места Господу, жилища - Сильному Иакова”.
೫ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
6 Вот, мы слышали о нем в Ефрафе, нашли его на полях Иарима.
೬ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
7 Пойдем к жилищу Его, поклонимся подножию ног Его.
೭“ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
8 Стань, Господи, на место покоя Твоего, - Ты и ковчег могущества Твоего.
೮ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
9 Священники Твои облекутся правдою, и святые Твои возрадуются.
೯ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
10 Ради Давида, раба Твоего, не отврати лица помазанника Твоего.
೧೦ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
11 Клялся Господь Давиду в истине, и не отречется ее: “от плода чрева твоего посажу на престоле твоем.
೧೧ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
12 Если сыновья твои будут сохранять завет Мой и откровения Мои, которым Я научу их, то и их сыновья во веки будут сидеть на престоле твоем”.
೧೨ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
13 Ибо избрал Господь Сион, возжелал его в жилище Себе.
೧೩ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
14 “Это покой Мой на веки: здесь вселюсь, ибо Я возжелал его.
೧೪ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
15 Пищу его благословляя благословлю, нищих его насыщу хлебом;
೧೫ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
16 священников его облеку во спасение, и святые его радостью возрадуются.
೧೬ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.
17 Там возращу рог Давиду, поставлю светильник помазаннику Моему.
೧೭ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
18 Врагов его облеку стыдом, а на нем будет сиять венец его”.
೧೮ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”