< Псалтирь 47 >

1 Начальнику хора. Сынов Кореевых. Псалом. Восплещите руками все народы, воскликните Богу гласом радости;
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2 ибо Господь Всевышний страшен, - великий Царь над всею землею;
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3 покорил нам народы и племена под ноги наши;
ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4 избрал нам наследие наше, красу Иакова, которого возлюбил.
ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. (ಸೆಲಾ)
5 Восшел Бог при восклицаниях, Господь при звуке трубном.
ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6 Пойте Богу нашему, пойте; пойте Царю нашему, пойте,
ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7 ибо Бог - Царь всей земли; пойте все разумно.
ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8 Бог воцарился над народами, Бог воссел на святом престоле Своем;
ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
9 князья народов собрались к народу Бога Авраамова, ибо щиты земли - Божии; Он превознесен над ними.
ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

< Псалтирь 47 >