< Abhaefeso 2 >
1 Shila shamshili shilasha mwafwile hutula nongwa nzyenyu ni bhivyi zyenyu.
೧ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
2 Ishashahali huje iga awande mwajendaga afhatane nabhalilo kinsiine. Mwali mjenda adaje uwatabhile wimaha gimwanya ine ya pepo yakwe yibhomba imbombo wala atulano nongwa. (aiōn )
೨ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. (aiōn )
3 Natiwayo pahosi ipo twaliibho asawa mwintiha. Twabhombanga enamunayinyonyo zibhivhi izyemabile getuu, twali tubhombazyai ganile manbiligitu shata nmenye twinte. Lelo Ungulubhi mwinjii wipwa na phipo yilunganoolakwe ulugosi lwahatugana athii.
೩ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
4 Lelo Ungulubhi mwinjii wipwa na phipo yilunganoolakwe ulugosi lwahatugana athii.
೪ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,
5 Ahabhalilo atalibhaafwe mumbivhizyetu.
೫ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
6 Unguluvhi atuzyuswa palisimo natubhombe akhalepalishimo mahali pamwanya muhati yakwe iya Kristi U Yesu.
೬ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
7 Abhomba ishi habhalilo habhalilozyanzi awezye ni bhoneswe ukabhi ugosi uwihazi wakwe atulanje anti idala atulanje ili idala liwemavu awakwe muhanti mwa Kristi U Yesu. (aiōn )
೭ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. (aiōn )
8 Humwoyi abhagombulewi dalayilyinteho naishisashamile hulinti yu Ngulubhi atusuntile.
೮ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
9 Hagaifumila nimbo ahahafumila agandabhe umo uwasumbe.
೯ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
10 Huje anti tulimbombo ya Ngulubhi tuumbelwe nu Kristi uYesu abhombe amizha imbombizya Ngulubhi aliapanga awande ulwinje lwehali huno gwayetu ilitujendaje muhapango.
೧೦ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
11 Mkumbushe epo ulwenje mwalibhantu bhapanzii ishifwa tanebhabili. Muwitwa “salmlivhizha shila shashihwita shizha ishibhelye shashibho bhwa nakhono gamuntu.
೧೧ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
12 Muhanti mhwo mhwo amwe mwabangulwee nu Kristi mwalibhajenyi wa bhathu Israeli. Mwali bhajenyi hulu fingoo lwakhoshelene munziumuuu.
೧೨ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
13 Leloo eshi alanganaje uKristi uYesu namwe rula nhihali mwalihutali nu Ngulubhi widanda lwaKristi.
೧೩ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
14 Nphipo umwene abhahabhawilye abhiha omoo. Eshibhelengwa hwe amanganya ulumba lwa pahenyee. Uoolugu.
೧೪ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.
15 Phepo akomesya mambo gamulile nupango iliaumbe mutu uomoo upya muhati yakwe. Afanye uwaushe.
೧೫ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
16 Aomba ishi apatanisya eviphugavhili vyabhadyu abhi ligalu vhadhu bhigamo wa Ngulubhi alangane shivikonhehayo widalalyishikhoehanyo aguzolo thezya uluvisanyo.
೧೬ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
17 Usu ahadha nawaule mubhe ahaushe amwiumwa lihutali nuwaushe wahwa ahali nuwalishe wavhene vhala vhali phephe.
೧೭ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.
18 Ishi widala lwa Yesu atii tuvhawile tunifwasi wagula umwoyo gumo awinjile wadada.
೧೮ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
19 Ishilelo amwii muwantu mwaliwapazi samulibhajezhi nabhajenyi antele ishi mrikhaya pamopene nabhala bhabagulwa hunongwa Ngulubhi nabhombi munyumba mwa Ngulubhi.
೧೯ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
20 Muzenjilwe mulwata lwatumwa na kuwa UKristi UYesu yuyo alilingaga igosi lwapanshinje.
೨೦ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
21 Umwene inyumba yundhi iyunganiziwe palishimo nabhve nyumba mwaputile muhati mwapapa.
೨೧ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
22 Muhati yakwe amwe na mwezengwa palishimo ni maha pakhale Ngulubhi mwahala uzuli.
೨೨ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.