< Yohana 15 >

1 Ane endi mzabibu ogu gwe lyoli, odaada wane omwene mkulima we mzabibu.
“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.
2 Isamba lya salipapa endondo, elyefwa ila isamba lya lipapa endondo alyefwa ili aje nkali papaje tee.
ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.
3 Amwe muli bhinza alengane ne nongwa yembabhozezye.
ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.
4 Mukhale muhati yane na muhati yenyu. Nanshi isamba seligapapa lyene nkaselili mumuzabibu, shesho namwe, nkase mukhala muhati yane.
ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
5 Ane endi mzabibu; amwe muli nsamba. Wakhala muhati yane nane muhati yakwe, omuntu ono apapa endondo zinyinji, afuatanaje bila ane amwe simuwezizye abhombe embombo yayonti.
ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
6 Nkashe omuntu wawonti wasaga abhakhale muhati yane, abhatagwe nanshi osamba na hwome; abhantu bhabhonganya amasamba na agataje humwoto, na galongolela.
ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
7 Nkashe mubhakhale muhati yane, na nkashe amazu gane ganzakhale muhati yenyu, labhaji lyalyonti lya mubhahwanze, namwe mubhabhombelwe.
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
8 Hweli odaada amwamihwe, naje mupapa endondo zinyinji naje bhanafunzi bhane.
ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
9 Nkashe odaada wane shangene ane, ane nane embagene amwe, khalaji mulugano lwane.
“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
10 Nkashe mubhakhate endajizyo zyane, mubhakhale mulugano lwane nashi shehete endajizyo yza daada wane na khale mulugano lwakwe.
೧೦ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
11 Enjanjile enongwa ezi hulimwe aje olusongwo lwane lubhe muhati yenyu na aje olusongwo lwenyu lubhombeshe abhe golusu.
೧೧ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
12 Olu lulajizyo lwane aje mganane amwe hu mwemwe nanshi sembagene amwe.
೧೨ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ.
13 Nomo omuntu waali nolugano ogosi ashile ou aje afumwe olwizo lwakwe eshauli ya bhanje.
೧೩ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
14 Amwe muli bha mwetu nkamubhabhombe gala gembalajizya.
೧೪ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.
15 Sembakwizyabhaboyi, afuatanaje oboyi samanya kila habhomba ogosi wakwe. Embakwizya amwe bhamwetu, alenganaje embabhozezye enongwa zyonti zyenonvwezye afume hwa Daada.
೧೫ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.
16 Semwansaluye ane ila ane nabhasaluye amwe na bhabheshe aje mubhalaje apape endondo, na endondo zyenyu zipate akhale. Eli lili eshi aje hahonti hamulabha hwa Daada hwi tawa lyane, anzabhapele.
೧೬ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
17 Enongwa ezi embalajizya aje mganane shila muntu nowamwabho.
೧೭ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.
18 Nkashe ensi enzabhavitwe, mumanye aje ebhanvitwe nene sheli seele abhavitwe amwe.
೧೮“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.
19 Nkashe mugali bha munsi, ensi handa ebhagene nanshi bha mwabho; Afuatanaje amwe semuli bha munsi na afwatanaje senabhachaguye afume munsi, afuatane neshi insi ebhavitwa.
೧೯ನೀವುಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.
20 Komboshi izu lyana bhabhozezye, 'Oboyi se gosi ashile ogosi wakwe.' Nkashe bhanjenvezye ane, bhaibhaye nvya lyane, handabhakhete iklyalimwe lyape.
೨೦ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.
21 Bhaibhabhombela amambo ega gonti alengane ni tawa lyane alengane sebhamenye ola wantumile.
೨೧ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.
22 Nkashe engalisenenzele na bhabhozye handasabhabhombile embibhi, ila esalezi sebhali noudhuru hu mbibhi zyabho.
೨೨ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.
23 Wanvwitwa ane ahuvitwa yo Daada nantele.
೨೩ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.
24 Nkashe sembombile embombo muhati yabho enganomo omo wabho waibhombile, handasebhali ne mbibhi; ila esalezi wabhombile gonti gabhele bhalolile na bhvitilwe ane no Daada wane.
೨೪ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ
25 Ene efumila aje izu likamilishe lyalyandihwe mundajizyo: 'Zyabhowanvitwa ane bila li kosa.'
೨೫‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
26 Wazinda ayenzele, wembahufume hulimwe afume hwa Daada, ono yayono, Ompepo we lyoli, wafuma hwa Daada, aihakikisizya.
೨೬ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
27 Amwe mhakikisizya afuatanaje muuli pandwemo nane afume ahwande.
೨೭ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.

< Yohana 15 >