< philipinaḥ 4 >
1 he madīyānandamukuṭasvarūpāḥ priyatamā abhīṣṭatamā bhrātaraḥ, he mama snehapātrāḥ, yūyam itthaṁ pabhau sthirāstiṣṭhata|
೧ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
2 he ivadiye he suntukhi yuvāṁ prabhau ekabhāve bhavatam etad ahaṁ prārthaye|
೨ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
3 he mama satya sahakārin tvāmapi vinīya vadāmi etayorupakārastvayā kriyatāṁ yataste klīminādibhiḥ sahakāribhiḥ sārddhaṁ susaṁvādapracāraṇāya mama sāhāyyārthaṁ pariśramam akurvvatāṁ teṣāṁ sarvveṣāṁ nāmāni ca jīvanapustake likhitāni vidyante|
೩ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
4 yūyaṁ prabhau sarvvadānandata| puna rvadāmi yūyam ānandata|
೪ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
5 yuṣmākaṁ vinītatvaṁ sarvvamānavai rjñāyatāṁ, prabhuḥ sannidhau vidyate|
೫ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.
6 yūyaṁ kimapi na cintayata kintu dhanyavādayuktābhyāṁ prārthanāyāñcābhyāṁ sarvvaviṣaye svaprārthanīyam īśvarāya nivedayata|
೬ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
7 tathā kṛta īśvarīyā yā śāntiḥ sarvvāṁ buddhim atiśete sā yuṣmākaṁ cittāni manāṁsi ca khrīṣṭe yīśau rakṣiṣyati|
೭ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
8 he bhrātaraḥ, śeṣe vadāmi yadyat satyam ādaraṇīyaṁ nyāyyaṁ sādhu priyaṁ sukhyātam anyeṇa yena kenacit prakāreṇa vā guṇayuktaṁ praśaṁsanīyaṁ vā bhavati tatraiva manāṁsi nidhadhvaṁ|
೮ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
9 yūyaṁ māṁ dṛṣṭvā śrutvā ca yadyat śikṣitavanto gṛhītavantaśca tadevācarata tasmāt śāntidāyaka īśvaro yuṣmābhiḥ sārddhaṁ sthāsyati|
೯ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
10 mamopakārāya yuṣmākaṁ yā cintā pūrvvam āsīt kintu karmmadvāraṁ na prāpnot idānīṁ sā punaraphalat ityasmin prabhau mama paramāhlādo'jāyata|
೧೦ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
11 ahaṁ yad dainyakāraṇād idaṁ vadāmi tannahi yato mama yā kācid avasthā bhavet tasyāṁ santoṣṭum aśikṣayaṁ|
೧೧ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
12 daridratāṁ bhoktuṁ śaknomi dhanāḍhyatām api bhoktuṁ śaknomi sarvvathā sarvvaviṣayeṣu vinīto'haṁ pracuratāṁ kṣudhāñca dhanaṁ dainyañcāvagato'smi|
೧೨ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
13 mama śaktidāyakena khrīṣṭena sarvvameva mayā śakyaṁ bhavati|
೧೩ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
14 kintu yuṣmābhi rdainyanivāraṇāya mām upakṛtya satkarmmākāri|
೧೪ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
15 he philipīyalokāḥ, susaṁvādasyodayakāle yadāhaṁ mākidaniyādeśāt pratiṣṭhe tadā kevalān yuṣmān vināparayā kayāpi samityā saha dānādānayo rmama ko'pi sambandho nāsīd iti yūyamapi jānītha|
೧೫ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
16 yato yuṣmābhi rmama prayojanāya thiṣalanīkīnagaramapi māṁ prati punaḥ punardānaṁ preṣitaṁ|
೧೬ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
17 ahaṁ yad dānaṁ mṛgaye tannahi kintu yuṣmākaṁ lābhavarddhakaṁ phalaṁ mṛgaye|
೧೭ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
18 kintu mama kasyāpyabhāvo nāsti sarvvaṁ pracuram āste yata īśvarasya grāhyaṁ tuṣṭijanakaṁ sugandhinaivedyasvarūpaṁ yuṣmākaṁ dānaṁ ipāphraditād gṛhītvāhaṁ paritṛpto'smi|
೧೮ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
19 mameśvaro'pi khrīṣṭena yīśunā svakīyavibhavanidhitaḥ prayojanīyaṁ sarvvaviṣayaṁ pūrṇarūpaṁ yuṣmabhyaṁ deyāt|
೧೯ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
20 asmākaṁ piturīśvarasya dhanyavādo'nantakālaṁ yāvad bhavatu| āmen| (aiōn )
೨೦ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್. (aiōn )
21 yūyaṁ yīśukhrīṣṭasyaikaikaṁ pavitrajanaṁ namaskuruta| mama saṅgibhrātaro yūṣmān namaskurvvate|
೨೧ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
22 sarvve pavitralokā viśeṣataḥ kaisarasya parijanā yuṣmān namaskurvvate|
೨೨ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.
23 asmākaṁ prabho ryīśukhrīṣṭasya prasādaḥ sarvvān yuṣmān prati bhūyāt| āmen|
೨೩ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.