< 1 Samuelova 6 >
1 I bijaše kovèeg Gospodnji u zemlji Filistejskoj sedam mjeseca.
೧ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.
2 Tada dozvaše Filisteji sveštenike i vraèe, pa im rekoše: šta æemo èiniti s kovèegom Gospodnjim? nauèite nas kako æemo ga poslati natrag na njegovo mjesto.
೨ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು
3 A oni rekoše: ako æete natrag poslati kovèeg Boga Izrailjeva, ne šaljite ga prazna, nego uza nj podajte prinos za grijeh; tada æete ozdraviti i doznaæete zašto se ruka njegova nije odmakla od vas.
೩ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
4 A oni rekoše: kakav æemo mu dati prinos za grijeh? A oni rekoše: prema broju kneževina Filistejskih pet zlatnijeh šuljeva i pet zlatnijeh miševa; jer je zlo jednako na svjema vama i na knezovima vašim.
೪ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
5 Naèinite dakle slike od svojih šuljeva i slike od miševa koji kvare zemlju, i podajte slavu Bogu Izrailjevu. Može biti da æe ulakšati ruku svoju nad vama i nad bogovima vašim i nad zemljom vašom.
೫ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.
6 I zašto biste bili uporna srca kao što bijahu uporna srca Misirci i Faraon? i pošto uèini èudesa na njima, eda li ih tada ne pustiše, te otidoše?
೬ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.
7 Zato naèinite jedna kola nova, i uzmite dvije krave dojilice, na kojima još nije bio jaram, pa upregnite krave u kola, a telad njihovu odvedite od njih kuæi.
೭ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ
8 Pa uzmite kovèeg Gospodnji i metnite ga na kola; a zaklade zlatne što æete mu dati za grijeh metnite u kovèežiæ pokraj njega, i pustite ga neka ide.
೮ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.
9 I gledajte: ako poðe putem k meði svojoj u Vet-Semes, on nam je uèinio ovo veliko zlo; ako li ne poðe tako, onda æemo znati da nas se nije dohvatila ruka njegova, nego nam se dogodilo sluèajno.
೯ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.
10 I uèiniše tako oni ljudi; i uzevši dvije krave dojilice upregoše ih u kola, a telad njihovu zatvoriše kod kuæe.
೧೦ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.
11 I metnuše kovèeg Gospodnji na kola, i mali kovèežiæ s mišima zlatnijem i sa slikama svojih šuljeva.
೧೧ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.
12 I poðoše krave pravo putem u Vet-Semes, i jednako iðahu istijem putem muèuæi i ne svræuæi ni nadesno ni nalijevo; a knezovi Filistejski iðahu za njima do meðe Vet-Semeske.
೧೨ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.
13 A Vet-Semešani žnjahu pšenicu u dolini, i podigavši oèi svoje vidješe kovèeg, i obradovaše se vidjevši ga.
೧೩ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.
14 I doðoše kola na njivu Isusa Vet-Semešanina, i stadoše ondje. A bijaše ondje velik kamen; i iscjepaše drva od kola, i prinesoše one krave na žrtvu paljenicu Gospodu.
೧೪ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
15 A Leviti snimivši kovèeg Gospodnji i kovèežiæ što bješe pokraj njega, u kojem bijahu zakladi zlatni, metnuše na onaj veliki kamen; a ljudi iz Vet-Semesa gotoviše žrtve paljenice i prinosiše žrtve Gospodu onaj dan.
೧೫ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.
16 A to vidjevši pet knezova Filistejskih vratiše se u Akaron isti dan.
೧೬ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
17 A ovo bjehu zlatni šuljevi koje dadoše Filisteji Gospodu za grijeh: za Azot jedan, za Gazu jedan, za Askalon jedan, za Gat jedan, za Akaron jedan.
೧೭ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ
18 I miši zlatni bjehu prema broju svijeh gradova Filistejskih, u pet kneževina, svijeh zidanijeh gradova i sela neograðenijeh do velikoga kamena, na koji metnuše kovèeg Gospodnji, i koji je i danas u polju Isusa Vet-Semešanina.
೧೮ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.
19 Ali pobi Gospod neke izmeðu Vet-Semešana koji zagledaše u kovèeg Gospodnji, i pobi iz naroda pedeset tisuæa i sedamdeset ljudi. I plaka narod što ga Gospod udari velikom pogiblju.
೧೯ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.
20 I ljudi iz Vet-Semesa rekoše: ko može ostati pred tijem Gospodom Bogom svetijem? i ka kome æe otiæi od nas?
೨೦ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು
21 I poslaše poslanike k stanovnicima Kirijat-Jarimskim govoreæi: donesoše natrag Filisteji kovèeg Gospodnji, hodite, odnesite ga k sebi.
೨೧ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.