< 2 Korinæanima 11 >
1 O da biste malo potrpljeli moje bezumlje! no i potrpite me.
೧ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.
2 Jer revnujem za vas Božijom revnosti, jer vas obrekoh mužu jednome, da djevojku èistu izvedem pred Hrista.
೨ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.
3 Ali se bojim da kako kao što zmija Evu prevari lukavstvom svojijem tako i razumi vaši da se ne odvrate od prostote koja je u Hristu.
೩ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
4 Jer ako onaj koji dolazi drugoga Isusa propovijeda kojega mi ne propovijedasmo, ili drugoga Duha primite kojega ne primiste, ili drugo jevanðelje koje ne primiste, dobro biste potrpljeli.
೪ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.
5 Jer mislim da ni u èemu nijesam manji od prevelikijeh apostola.
೫“ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ
6 Jer ako sam i prostak u rijeèi, ali u razumu nijesam. No u svemu smo poznati meðu vama.
೬ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.
7 Ili grijeh uèinih ponižujuæi sebe da se vi povisite? Jer vam zabadava Božije jevanðelje propovjedih.
೭ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?
8 Od drugijeh crkava oteh uzevši platu za služenje vama; i došavši k vama, i bivši u sirotinji, ne dosadih nikome.
೮ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.
9 Jer moju sirotinju potpuniše braæa koja doðoše iz Maæedonije, i u svemu bez dosade vama sebe držah i držaæu.
೯ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.
10 Kao što je istina Hristova u meni tako se hvala ova neæe uzeti od mene u Ahajskijem krajevima.
೧೦ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.
11 Zašto? Što vas ne ljubim? Bog zna. A što èinim i èiniæu,
೧೧ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.
12 Da otsijeèem uzrok onima koji traže uzrok, da bi u onome èim se hvale našli se kao i mi.
೧೨ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
13 Jer takovi lažni apostoli i prevarljivi poslenici pretvaraju se u apostole Hristove.
೧೩ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
14 I nije èudo, jer se sam sotona pretvara u anðela svijetla.
೧೪ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
15 Nije dakle ništa veliko ako se i sluge njegove pretvaraju kao sluge pravde, kojima æe svršetak biti po djelima njihovijem.
೧೫ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.
16 Opet velim da niko ne pomisli da sam ja bezuman; ako li ne, a ono barem kao bezumna primite me, da se i ja što pohvalim.
೧೬ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.
17 A što govorim ne govorim po Gospodu, nego kao u bezumlju, u ovoj struci hvale.
೧೭ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.
18 Buduæi da se mnogi hvale po tijelu, i ja æu da se hvalim.
೧೮ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
19 Jer ljubazno primate bezumne kad ste sami mudri.
೧೯ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ
20 Jer primate ako vas ko natjera da budete sluge, ako vas ko jede, ako ko uzme, ako vas ko po obrazu bije, ako se ko velièa.
೨೦ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.
21 Na sramotu govorim, jer kao da mi oslabismo. Na što je ko slobodan po bezumlju govorim i ja sam slobodan.
೨೧ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.
22 Jesu li Jevreji? i ja sam; jesu li Izrailjci? i ja sam; jesu li sjeme Avraamovo? i ja sam;
೨೨ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.
23 Jesu li sluge Hristove? ne govorim po mudrosti) ja sam još više. Više sam se trudio, više sam boja podnio, više puta sam bio u tamnici, mnogo puta sam dolazio do straha smrtnoga;
೨೩ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
24 Od Jevreja primio sam pet puta èetrdeset manje jedan udarac;
೨೪ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.
25 Triput sam bio šiban, jednom su kamenje bacali na me, tri puta se laða sa mnom razbijala, noæ i dan proveo sam u dubini morskoj.
೨೫ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
26 Mnogo puta sam putovao, bio sam u strahu na vodama, u strahu od hajduka, u strahu od rodbine, u strahu od neznabožaca, u strahu u gradovima, u strahu u pustinji, u strahu na moru, u strahu meðu lažnom braæom;
೨೬ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.
27 U trudu i poslu, u mnogom nespavanju, u gladovanju i žeði, u mnogom pošæenju, u zimi i golotinji;
೨೭ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
28 Osim što je spolja, navaljivanje ljudi svaki dan, i briga za sve crkve.
೨೮ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.
29 Ko oslabi, i ja da ne oslabim? Ko se sablazni, i ja da se ne raspalim?
೨೯ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?
30 Ako mi se valja hvaliti, svojom æu se slabošæu hvaliti.
೩೦ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.
31 Bog i otac Gospoda našega Isusa Hrista, koji je blagosloven vavijek, zna da ne lažem. (aiōn )
೩೧ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು. (aiōn )
32 U Damasku neznabožaèki knez cara Arete èuvaše grad Damask i šæaše da me uhvati;
೩೨ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು
33 i kroz prozor spustiše me u kotarici preko zida, i izbjegoh iz njegovijeh ruku.
೩೩ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.