< 2 Kraljevima 20 >
1 U to vrijeme razbolje se Jezekija na smrt; i doðe k njemu prorok Isaija sin Amosov i reèe mu: ovako veli Gospod: naredi za kuæu svoju, jer æeš umrijeti i neæeš ostati živ.
೧ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.
2 A on se okrete licem k zidu, i pomoli se Gospodu govoreæi:
೨ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
3 Oh, Gospode, opomeni se da sam jednako hodio pred tobom vjerno i s cijelijem srcem, i tvorio što je tebi ugodno. I plaka Jezekija veoma.
೩“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
4 I Isaija još ne bješe otišao do polovine dvora, a doðe mu rijeè Gospodnja govoreæi:
೪ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.
5 Vrati se i reci Jezekiji, voðu naroda mojega: ovako veli Gospod Bog Davida oca tvojega: èuo sam molitvu tvoju, i vidio sam suze tvoje; evo iscijeliæu te, do tri dana iæi æeš u dom Gospodnji.
೫“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.
6 I dodaæu ti vijeku petnaest godina, i izbaviæu tebe i ovaj grad iz ruku cara Asirskoga, i braniæu ovaj grad sebe radi i radi Davida sluge svojega.
೬ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
7 Potom reèe Isaija: donesite grudu suhih smokava. I donesavši priviše mu na otok, i iscijeli se.
೭ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
8 A Jezekija reèe Isaiji: šta æe biti znak da æe me Gospod iscijeliti i da æu do tri dana otiæi u dom Gospodnji?
೮ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.
9 A Isaija reèe: ovo neka ti bude znak od Gospoda da æe uèiniti Gospod što je rekao: hoæeš li da otide sjen deset koljenaca naprijed ili da se vrati deset koljenaca natrag?
೯ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.
10 A Jezekija reèe: lako je da sjen otide naprijed deset koljenaca; nemoj, nego neka se vrati sjen deset koljenaca natrag.
೧೦ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.
11 I Isaija prorok zavapi ka Gospodu, i vrati Gospod sjen po koljencima po kojima bijaše otišao na sunèaniku Ahazovu natrag za deset koljenaca.
೧೧ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
12 U to vrijeme Verodah-Valadan, sin Valadanov, car Vavilonski posla knjigu s darom Jezekiji; jer bješe èuo da je bolestan Jezekija.
೧೨ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
13 I Jezekija saslušav poslanike pokaza im sve riznice svoje, srebro i zlato i mirise, i najbolje ulje, i kuæu gdje mu bješe oružje, i što se god nalažaše u riznicama njegovijem, ne osta ništa da im ne pokaza Jezekija u kuæi svojoj i u svemu gospodstvu svojem.
೧೩ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
14 Tada doðe prorok Isaija k caru Jezekiji i reèe mu: šta su govorili ti ljudi i odakle su došli k tebi? A Jezekija reèe: iz daljne zemlje došli su, iz Vavilona.
೧೪ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
15 A on reèe: šta su vidjeli u tvom dvoru? A Jezekija reèe: vidjeli su sve što ima u mom dvoru; nije ostalo ništa u riznicama mojim da im nijesam pokazao.
೧೫ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
16 Tada reèe Isaija Jezekiji: èuj rijeè Gospodnju.
೧೬ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,
17 Evo doæi æe vrijeme kad æe se odnijeti u Vavilon sve što ima u kuæi tvojoj, i što su sabirali oci tvoji do danas, neæe ostati ništa, veli Gospod.
೧೭‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
18 I sinove tvoje, koji æe izaæi od tebe, koje æeš roditi, uzeæe da budu dvorani u dvoru cara Vavilonskoga.
೧೮ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.
19 A Jezekija reèe Isaiji: dobra je rijeè Gospodnja, koju si rekao. Još reèe: je li? za mojega vijeka biæe mir i vjera?
೧೯ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.
20 A ostala djela Jezekijina i sva junaštva njegova, i kako je naèinio jezero, i vodu doveo u grad, nije li zapisano u dnevniku careva Judinijeh?
೨೦ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
21 I poèinu Jezekija kod otaca svojih, a na njegovo se mjesto zacari Manasija sin njegov.
೨೧ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.