< 2 Samuelova 24 >

1 A Gospod se opet razgnjevi na Izrailja, i nadraži Davida na njih govoreæi: hajde izbroj Izrailja i Judu.
ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
2 I reèe car Joavu, vojvodi svom: proði po svijem plemenima Izrailjevijem od Dana do Virsaveje, i izbrojte narod, da znam koliko ima naroda.
ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.
3 A Joav reèe caru: neka doda Gospod Bog tvoj k narodu koliko ga je sad još sto puta toliko, i da car gospodar moj vidi svojim oèima; ali zašto car gospodar moj hoæe to?
ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.
4 Ali rijeè careva bi jaèa od Joava i vojvoda; i otide Joav i vojvode od cara da prebroje narod Izrailjev.
ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
5 I prešavši preko Jordana stadoše u oko u Aroiru, s desne strane grada, koji je na sredini potoka Gadova, i kod Jazira.
ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,
6 Potom doðoše u Galad, i u donju zemlju Odsiju, a odatle otidoše u Dan-Jan i u okolinu Sidonsku.
ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
7 Potom doðoše do grada Tira i u sve gradove Jevejske i Hananejske; i otidoše na južnu stranu Judinu u Virsaveju.
ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
8 I obišavši svu zemlju vratiše se u Jerusalim poslije devet mjeseci i dvadeset dana.
ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.
9 I Joav dade caru broj prepisanoga naroda; i bješe od Izrailja osam stotina tisuæa ljudi za vojsku koji mahahu maèem, a ljudi od Jude pet stotina tisuæa.
ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.
10 Tada Davida taknu u srce, pošto prebroji narod, i reèe David Gospodu: sagriješih veoma što to uradih. Ali, Gospode, uzmi bezakonje sluge svojega, jer veoma ludo radih.
೧೦ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
11 A kad David usta ujutru, doðe rijeè Gospodnja Gadu proroku, koji bijaše Davidu vidjelac, i reèe:
೧೧ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,
12 Idi i kaži Davidu: ovako veli Gospod: troje ti dajem, izberi jedno da ti uèinim.
೧೨“ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು.
13 I doðe Gad k Davidu, i kaza mu govoreæi: hoæeš li da bude sedam gladnijeh godina u zemlji tvojoj, ili da bježiš tri mjeseca od neprijatelja svojih i oni da te gone, ili da bude tri dana pomor u tvojoj zemlji? Sad promisli i gledaj šta æu odgovoriti onome koji me je poslao.
೧೩ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
14 A David reèe Gadu: u tjeskobi sam ljutoj; ali neka zapadnemo Gospodu u ruke, jer je milost njegova velika; a ljudima da ne zapadnem u ruke.
೧೪ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
15 I tako pusti Gospod pomor na Izrailja od jutra do odreðenoga vremena, i pomrije naroda od Dana do Virsaveje sedamdeset tisuæa ljudi.
೧೫ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
16 A kad anðeo pruži ruku svoju na Jerusalim da ga ubija, sažali se Gospodu sa zla, i reèe anðelu koji ubijaše narod: dosta, spusti ruku. A anðeo Gospodnji bijaše kod gumna Orne Jevusejina.
೧೬ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
17 A David kad vidje anðela gdje bije narod, progovori i reèe Gospodu: evo, ja sam zgriješio, ja sam zlo uèinio, a te ovce što su uèinile? neka se ruka tvoja obrati na mene i na dom oca mojega.
೧೭ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
18 Potom opet doðe Gad k Davidu isti dan, i reèe mu: idi, naèini Gospodu oltar na gumnu Orne Jevusejina.
೧೮ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
19 I otide David po rijeèi Gadovoj, kako Gospod zapovjedi.
೧೯ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
20 Tada Orna obazrevši se ugleda cara i sluge njegove gdje idu k njemu; i otide Orna i pokloni se caru licem do zemlje,
೨೦ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.
21 I reèe: što je došao car gospodar moj sluzi svojemu? A David reèe: da kupim od tebe to gumno, da naèinim na njemu oltar Gospodu da bi prestao pomor u narodu.
೨೧ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.
22 A Orna reèe Davidu: neka uzme car gospodar moj i prinese na žrtvu što mu je volja; evo volova za žrtvu paljenicu, i kola i jarmova volujskih za drva.
೨೨ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
23 Sve to davaše caru Orna kao car, i reèe Orna caru: Gospod Bog tvoj neka te milostivo primi.
೨೩ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ” ಎಂದು ಹೇಳಿದನು.
24 A car reèe Orni: ne; nego æu kupiti od tebe po cijeni, niti æu prinijeti Gospodu Bogu svojemu žrtve paljenice poklonjene. I tako kupi David gumno i volove za pedeset sikala srebra.
೨೪ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.
25 I ondje naèini David oltar Gospodu, i prinese žrtve paljenice i žrtve zahvalne. I Gospod se umilostivi zemlji, i presta pomor u Izrailju.
೨೫ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.

< 2 Samuelova 24 >