< 2 Samuelova 8 >
1 Poslije toga razbi David Filisteje, i pokori ih, i uze David Meteg-Amu iz ruku Filistejskih.
೧ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2 Razbi i Moavce, i izmjeri ih užem povaljavši ih po zemlji, i izmjeri ih dva uža da se pogube a jedno uže da se ostave u životu. I Moavci postaše sluge Davidove, i plaæahu mu danak.
೨ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3 David razbi i Adad-Ezera sina Reovova cara Sovskoga, izašav da raširi vlast svoju do rijeke Efrata.
೩ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
4 I zarobi ih David tisuæu i sedam stotina konjanika i dvadeset tisuæa pješaka, i podreza David žile svijem konjma kolskim, samo ostavi za sto kola.
೪ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
5 I bijahu došli Sirci iz Damaska u pomoæ Adad-Ezeru caru Sovskom, i David pobi dvadeset i dvije tisuæe Siraca.
೫ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
6 I namjesti David vojsku u Siriji što je pod Damaskom, i Sirci postaše sluge Davidove plaæajuæi mu danak. I Gospod èuvaše Davida kuda god iðaše.
೬ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
7 I David uze zlatne štitove koje imahu sluge Adad-Ezerove, i donese ih u Jerusalim.
೭ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
8 I iz Vetaha i iz Virotaja gradova Adad-Ezerovijeh odnese car David silnu mjed.
೮ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
9 A kad èu Toja car Ematski da je David pobio svu vojsku Adad-Ezerovu,
೯ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10 Posla Toja Jorama sina svojega k caru Davidu da ga pozdravi i da mu èestita što je vojevao na Adad-Ezera i ubio ga, jer Toja imaše rat s Adad-Ezerom; i donese Joram zaklada zlatnijeh i srebrnijeh i mjedenijeh.
೧೦ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
11 Pa i to car David posveti Gospodu sa srebrom i zlatom što bješe posvetio od svijeh naroda koje pokori,
೧೧ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
12 Od Siraca i od Moavaca i od sinova Amonovijeh i od Filisteja i od Amalika, i od plijena Adad-Ezera sina Reovova cara Sovskoga.
೧೨ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
13 I David steèe ime kad se vrati pobiv Sirce, osamnaest tisuæa, u slanoj dolini.
೧೩ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
14 I namjesti vojsku po Idumeji, po svoj Idumeji namjesti vojsku, i svi Edomci postaše sluge Davidove. I Gospod èuvaše Davida kuda god iðaše.
೧೪ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
15 Tako carova David nad svijem Izrailjem, sudeæi i dajuæi pravdu svemu narodu svojemu.
೧೫ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
16 I Joav sin Serujin bješe nad vojskom; a Josafat sin Ahiludov pametar;
೧೬ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
17 A Sadok sin Ihitovov i Ahimeleh sin Avijatarov sveštenici; a Seraja pisar;
೧೭ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
18 A Venaja sin Jodajev bješe nad Heretejima i Feletejima; a sinovi Davidovi knezovi.
೧೮ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.