< Jeremija 17 >
1 Grijeh je Judin zapisan gvozdenom pisaljkom i vrhom od dijamanta, urezan je na ploèi srca njihova i na rogovima oltara vaših,
೧ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
2 Da se sinovi njihovi sjeæaju oltara njihovijeh i lugova njihovijeh pod zelenijem drvetima, na visokim humovima.
೨ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
3 Goro s poljem, daæu imanje tvoje, sve blago tvoje daæu da se razgrabi, visine tvoje, za grijeh po svijem meðama tvojim.
೩ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
4 I ti æeš i koji su s tobom ostaviti našljedstvo svoje, koje sam ti dao, i uèiniæu da služiš neprijateljima svojim u zemlji koje ne poznaješ; jer ste raspalili oganj gnjeva mojega, koji æe gorjeti dovijeka.
೪ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
5 Ovako veli Gospod: da je proklet èovjek koji se uzda u èovjeka i koji stavlja tijelo sebi za mišicu, a od Gospoda otstupa srce njegovo.
೫ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
6 Jer æe biti kao vrijes u pustinji, koji ne osjeæa kad doðe dobro, nego stoji u pustinji, na suhim mjestima u zemlji slanoj i u kojoj se ne živi.
೬ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
7 Blago èovjeku koji se uzda u Gospoda i kome je Gospod uzdanica.
೭ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
8 Jer æe biti kao drvo usaðeno kraj vode i koje niz potok pušta žile svoje, koje ne osjeæa kad doðe pripeka, nego mu se list zeleni, i sušne godine ne brine se i ne prestaje raðati rod.
೮ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
9 Srce je prijevarno više svega i opako; ko æe ga poznati?
೯ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
10 Ja Gospod ispitujem srca i iskušavam bubrege, da bih dao svakome prema putovima njegovijem i po plodu djela njegovijeh.
೧೦ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
11 Kao što jarebica leži na jajima ali ne izleže, tako ko sabira bogatstvo ali s nepravdom, u polovini dana svojih ostaviæe ga i najposlije æe biti lud.
೧೧ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
12 Mjesto je svetinje naše prijesto slave, visoko mjesto od poèetka.
೧೨ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
13 Nade Izrailjev, Gospode! svi koji te ostavljaju neka se posrame; koji otstupaju od mene, neka se zapišu na zemlji, jer ostaviše izvor vode žive, Gospoda.
೧೩ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
14 Iscijeli me, Gospode, i biæu iscijeljen; izbavi me, i biæu izbavljen, jer si ti hvala moja.
೧೪ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
15 Gle, oni mi govore: gdje je rijeè Gospodnja? Neka doðe.
೧೫ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.
16 A ja se ne zatezah iæi za tobom kao pastir, i dana žalosnoga ne željeh, ti znaš; što je god izašlo iz usta mojih, pred tobom je.
೧೬ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
17 Ne budi mi strah, ti si utoèište moje u zlu.
೧೭ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
18 Neka se posrame koji me gone, a ja ne; neka se oni uplaše, a ja ne; pusti na njih zli dan, i dvostrukim polomom polomi ih.
೧೮ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
19 Ovako mi reèe Gospod: idi, i stani na vrata sinova narodnijeh, na koja ulaze carevi Judini i na koja izlaze, i na svaka vrata Jerusalimska.
೧೯ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
20 I reci im: èujte rijeè Gospodnju, carevi Judini i svi Judejci i svi Jerusalimljani, koji ulazite na ova vrata.
೨೦‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
21 Ovako veli Gospod: èuvajte se da ne nosite bremena u subotu i ne unosite na vrata Jerusalimska.
೨೧ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
22 I ne iznosite bremena iz kuæa svojih u subotu, i nikakoga posla ne radite, nego svetite subotu, kao što sam zapovjedio ocima vašim.
೨೨ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
23 Ali ne poslušaše niti prignuše uha svojega, nego otvrdnuše vratom svojim da ne poslušaju i ne prime nauke.
೨೩ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
24 Ako me poslušate, govori Gospod, da ne nosite bremena na vrata ovoga grada u subotu, nego svetite subotu ne radeæi u nju nikakoga posla,
೨೪ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
25 Tada æe ulaziti na vrata grada ovoga carevi i knezovi, koji sjede na prijestolu Davidovu, na kolima i na konjma, oni i knezovi njihovi, Judejci i Jerusalimljani, i stajaæe ovaj grad dovijeka.
೨೫ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
26 I dolaziæe iz gradova Judinijeh i iz okoline Jerusalimske, i iz zemlje Venijaminove, i iz ravnice i iz gora i s juga, i donosiæe žrtve paljenice i prinose s darom i kadom, i žrtve zahvalne donosiæe u dom Gospodnji.
೨೬ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
27 Ako li me ne poslušate da svetite subotu i ne nosite bremena ulazeæi na vrata Jerusalimska u subotu, onda æu raspaliti oganj na vratima njegovijem, koji æe upaliti dvorove Jerusalimske i neæe se ugasiti.
೨೭ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.