< Jov 17 >
1 Duh se moj kvari, dana mojih nestaje; grobovi su moji.
೧“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.
2 Kod mene su rugaèi, i oko moje provodi noæi u jadu koji mi zadaju.
೨ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ.
3 Daj mi ko æe jamèiti kod tebe; ko je taj koji æe se rukovati sa mnom?
೩ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.
4 Jer si od njihova srca sakrio razum; zato ih neæeš uzvisiti.
೪ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.
5 Ko laska prijateljima, njegovijem æe sinovima oèi posahnuti.
೫ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.
6 Uèinio je od mene prièu narodima, i postao sam bubnjanje meðu njima.
೬ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.
7 Potamnjelo je oko moje od jada, i svi udi moji postaše kao sjen.
೭ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.
8 Zaèudiæe se tome pravi, i bezazleni æe ustati na licemjere.
೮ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
9 Ali æe se pravednik držati svojega puta, i ko je èistijeh ruku veæma æe ojaèati.
೯ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.
10 A vi vratite se svikoliki i hodite; neæu naæi mudra meðu vama.
೧೦ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು.
11 Dani moji proðoše, misli moje pokidaše se, što imah u srcu.
೧೧ನನ್ನ ದಿನಗಳು ಮುಗಿದುಹೋದವು. ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು.
12 Od noæi naèiniše dan, i svjetlost je blizu mraka.
೧೨ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.
13 Da bih se nadao, grob æe mi biti kuæa; u tami æu prostrijeti postelju sebi. (Sheol )
೧೩ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. (Sheol )
14 Grobu vièem: ti si otac moj; crvima: ti si mati moja, ti si sestra moja.
೧೪ಸಮಾಧಿಯನ್ನು, ‘ನೀನು, ನನ್ನ ತಂದೆ’ ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ,
15 I gdje je sada nadanje moje? moje nadanje ko æe vidjeti?
೧೫ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
16 U grob æe siæi, poèinuæe sa mnom u grobu. (Sheol )
೧೬ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” (Sheol )