< Mihej 5 >
1 Saberi se sada u èete, èetnice, opsjedi nas, neka biju prutom po obrazu sudiju Izrailjeva.
೧ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
2 A ti, Vitlejeme Efrato, ako i jesi najmanji meðu tisuæama Judinijem, iz tebe æe mi izaæi koji æe biti gospodar u Izrailju, kojemu su izlasci od poèetka, od vjeènijeh vremena.
೨ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
3 Zato æe ih ostaviti dokle ne rodi ona koja æe roditi; tada æe se ostatak braæe njegove vratiti sa sinovima Izrailjevijem.
೩ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು
4 I stajaæe i pašæe ih silom Gospodnjom, velièanstvom imena Gospoda Boga svojega; i oni æe nastavati, jer æe on tada biti velik do krajeva zemaljskih.
೪ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
5 I on æe biti mir; kad doðe Asirac u našu zemlju, i kad stupi u dvore naše, tada æemo podignuti na nj sedam pastira i osam knezova iz naroda.
೫ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
6 I oni æe opasti zemlju Asirsku maèem i zemlju Nevrodovu na vratima njegovijem; i on æe nas izbaviti od Asirca kad doðe u našu zemlju i kad stupi na meðu našu.
೬ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.
7 I ostatak æe Jakovljev biti usred mnogih naroda kao rosa od Gospoda i kao sitan dažd po travi, koja ne èeka èovjeka niti se uzda u sinove èovjeèije.
೭ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
8 I ostatak æe Jakovljev biti meðu narodima, usred mnogih naroda, kao lav meðu zvijerima šumskim, kao laviæ meðu stadima ovaca, koji kad ide tlaèi i rastrže i nema nikoga da izbavi.
೮ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.
9 Ruka æe ti se uzvisiti nad protivnicima tvojim, i svi æe se neprijatelji tvoji istrijebiti.
೯ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.
10 I u ono æu vrijeme, govori Gospod, istrijebiti konje isred tebe i potræu kola tvoja.
೧೦ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.
11 I zatræu gradove u tvojoj zemlji, i razvaliæu sva tvrda mjesta tvoja;
೧೧ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
12 I istrijebiæu vraèanje iz ruku tvojih, i neæeš imati gatara;
೧೨ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.
13 I istrijebiæu likove tvoje rezane i stupove tvoje isred tebe, i neæeš se više klanjati djelu ruku svojih;
೧೩ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.
14 I iskorijeniæu gajeve tvoje isred tebe, i raskopaæu gradove tvoje,
೧೪ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.
15 I izvršiæu osvetu s gnjevom i ljutinom na narodima koji ne slušaše.
೧೫ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”