< Psalmi 19 >
1 Nebesa kazuju slavu Božiju, i djela ruku njegovijeh glasi svod nebeski.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2 Dan danu dokazuje, i noæ noæi javlja.
೨ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
3 Nema jezika, niti ima govora, gdje se ne bi èuo glas njihov.
೩ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
4 Po svoj zemlji ide kazivanje njihovo i rijeèi njihove na kraj vasiljene. Suncu je postavio stan na njima;
೪ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
5 I ono izlazi kao ženik iz ložnice svoje, kao junak veselo teèe putem.
೫ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
6 Izlazak mu je nakraj neba, i hod mu do kraja njegova; i niko nije sakriven od toplote njegove.
೬ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7 Zakon je Gospodnji svršen, krijepi dušu; svjedoèanstvo je Gospodnje vjerno, daje mudrost nevještome.
೭ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
8 Naredbe su Gospodnje pravedne, vesele srce. Zapovijest je Gospodnja svijetla, prosvjetljuje oèi.
೮ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
9 Strah je Gospodnji èist, ostaje dovijeka. Sudovi su njegovi istini, pravedni svikoliki.
೯ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
10 Bolji su od zlata i dragog kamenja, slaði od meda koji teèe iz sata.
೧೦ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
11 I slugu tvojega oni su prosvijetlili; ko ih drži ima veliku platu.
೧೧ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
12 Ko æe znati sve svoje pogrješke? Oèisti me i od tajnijeh;
೧೨ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
13 I od voljnijeh saèuvaj slugu svojega, da ne obladaju mnome. Tada æu biti svršen i èist od velikoga prijestupa.
೧೩ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
14 Da su ti rijeèi usta mojih ugodne, i pomisao srca mojega pred tobom, Gospode, krjeposti moja i izbavitelju moj!
೧೪ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.