< Psalmi 67 >
1 Bože, budi nam milostiv i blagosiljaj nas, obasjavaj nas licem svojim,
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. (ಸೆಲಾ)
2 Da bi se znao na zemlji put tvoj, po svima narodima spasenje tvoje.
೨ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
3 Da te slave narodi, Bože, da te slave svi narodi!
೩ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
4 Da se vesele i raduju plemena; jer sudiš narodima pravo, i plemenima na zemlji upravljaš.
೪ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. (ಸೆಲಾ)
5 Da te slave narodi, Bože, da te slave svi narodi!
೫ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
6 Zemlja dade plod svoj. Da nas blagosilja Bog, Bog naš!
೬ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
7 Da nas blagosilja Bog, i da ga se boje svi krajevi zemaljski!
೭ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.