< Zaharija 2 >
1 Opet podigoh oèi svoje i vidjeh, i gle, èovjek, i u ruci mu uže mjeraèko.
೧ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
2 I rekoh: kuda ideš? A on mi reèe: da izmjerim Jerusalim da vidim kolika mu je širina i kolika mu je dužina.
೨ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು.
3 I gle, anðeo koji govoraše sa mnom izide, i drugi anðeo izide mu na susret.
೩ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
4 I reèe mu: trèi, govori onom mladiæu i reci: Jerusalimljani æe se naseliti po selima radi mnoštva ljudi i stoke što æe biti u njemu.
೪“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
5 I ja æu mu, govori Gospod, biti zid ognjen unaokolo i biæu za slavu usred njega.
೫ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.
6 Ej, ej, bježite iz zemlje sjeverne, govori Gospod, jer vas razasuh u èetiri vjetra nebeska, govori Gospod.
೬ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
7 Ej Sione, koji sjediš kod kæeri Vavilonske, izbavi se.
೭ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
8 Jer ovako veli Gospod nad vojskama: za slavom posla me k narodima, koji vas oplijeniše; jer ko tièe u vas, tièe u zjenicu oka njegova.
೮ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
9 Jer evo ja æu mahnuti rukom svojom na njih, i biæe plijen slugama svojim, i poznaæete da me je poslao Gospod nad vojskama.
೯“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.
10 Pjevaj i veseli se, kæeri Sionska, jer evo ja idem i nastavaæu usred tebe, govori Gospod.
೧೦ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.
11 I mnogi æe se narodi prilijepiti ka Gospodu u taj dan, i biæe mi narod, i ja æu nastavati usred tebe, i poznaæeš da me je poslao k tebi Gospod nad vojskama.
೧೧ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
12 I Gospod æe naslijediti Judu, svoj dio, u zemlji svetoj, i opet æe izabrati Jerusalim.
೧೨ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.
13 Neka muèi svako tijelo pred Gospodom, jer usta iz svetoga stana svojega.
೧೩ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.