< 1 Књига Самуилова 31 >

1 А Филистеји се побише с Израиљцима, и побегоше Израиљци испред Филистеја, и падаху мртви на гори Гелвуји.
ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
2 И стигоше Филистеји Саула и синове његове; и погубише Филистеји Јонатана и Авинадава и Мелхи-Сува, синове Саулове.
ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
3 И бој поста жешћи око Саула, и нађоше га стрелци, и он се врло уплаши од стрелаца.
ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.
4 И рече Саул момку који му ношаше оружје: Извади мач свој и прободи ме, да не дођу ти необрезани и прободу ме и наругају ми се. Али не хте момак што му ношаше оружје, јер га беше врло страх. Тада Саул узе мач, и баци се на њ.
ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.
5 А кад момак који ношаше оружје виде Саула мртвог, баци се и он на свој мач и умре с њим.
ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.
6 Тако погибе Саул и три сина његовог и момак који му ношаше оружје и сви људи његови заједно, оног дана.
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
7 А Израиљци који беху с ове стране потока и с ову страну Јордана кад видеше где Израиљци побегоше и где погибе Саул и његови синови, оставише градове и побегоше, те дођоше Филистеји и осташе у њима.
ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.
8 А сутрадан дођоше Филистеји да свлаче мртве; и нађоше Саула и три сина његовог где леже на гори Гелвуји.
ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
9 И одсекоше му главу, и скидоше оружје с њега, и послаше у земљу филистејску на све стране да се објави у кући његових лажних богова и по народу.
ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
10 И оставише оружје његово у кући Астаротиној, а тело његово обесише на зид вет-сански.
೧೦ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
11 А чуше становници у Јавису Галадовом шта учинише Филистеји од Саула.
೧೧ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
12 И подигоше се сви људи храбри, и ишавши сву ноћ скидоше тело Саулово и телеса синова његових са зида вет-санског, па се вратише у Јавис, и онде их спалише.
೧೨ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
13 И узеше кости њихове и погребоше их под дрветом у Јавису, и постише седам дана.
೧೩ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.

< 1 Књига Самуилова 31 >