< 1 Солуњанима 5 >

1 А за часе и времена, браћо, није вам потребно писати;
ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.
2 Јер сами знате јамачно да ће дан Господњи доћи као лупеж по ноћи.
ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
3 Јер кад кажу: Мир је, и нема се шта бојати, онда ће изненада напасти на њих погибао као бол на трудну жену, и неће утећи.
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
4 Али ви, браћо, нисте у тами да вас дан као лупеж застане.
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.
5 Јер сте ви сви синови видела и синови дана: нисмо ноћи нити таме.
ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
6 Тако дакле да не спавамо као и остали, него да пазимо и да будемо трезни.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
7 Јер који спавају, у ноћи спавају, и који се опијају, у ноћи се опијају.
ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
8 Али ми који смо синови дана да будемо трезни и обучени у оклоп вере и љубави, и с кацигом наде спасења;
ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
9 Јер нас Бог не постави за гнев, него да добијемо спасење кроз Господа свог Исуса Христа,
ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
10 Који умре за нас да ми, стражили или спавали, заједно с Њим живимо.
೧೦ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.
11 Тога ради утешавајте један другог, и поправљајте сваки ближњег, као што и чините.
೧೧ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
12 Молимо вас пак, браћо, препознајте оне који се труде међу вама, и настојнике своје у Господу и учитеље своје,
೧೨ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
13 И имајте их у изобилној љубави за дело њихово. Будите мирни међу собом.
೧೩ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
14 Молимо вас пак, браћо, поучавајте неуредне, утешавајте малодушне, браните слабе, сносите сваког.
೧೪ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
15 Гледајте да нико не враћа коме зла за зло;
೧೫ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
16 Него свагда идите за добрим, и међу собом, према свима.
೧೬ಯಾವಾಗಲೂ ಸಂತೋಷಿಸಿರಿ,
17 Радујте се свагда.
೧೭ಎಡೆಬಿಡದೆ ಪ್ರಾರ್ಥನೆಮಾಡಿರಿ,
18 Молите се Богу без престанка. На свачему захваљујте; јер је ово воља Божија у Христу Исусу од вас.
೧೮ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
19 Духа не гасите. Пророштва не презирите.
೧೯ಪವಿತ್ರಾತ್ಮನನ್ನು ನಂದಿಸಬೇಡಿ,
20 А све кушајући добро држите.
೨೦ಪ್ರವಾದನೆಗಳನ್ನು ಹಿನೈಸಬೇಡಿರಿ.
21 Уклањајте се од сваког зла.
೨೧ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
22 А сам Бог мира да посвети вас целе у свачему;
೨೨ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
23 И цео ваш дух и душа и тело да се сачува без кривице за долазак Господа нашег Исуса Христа.
೨೩ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
24 Веран је Онај који вас дозва, који ће и учинити.
೨೪ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
25 Браћо! Молите се Богу за нас.
೨೫ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
26 Поздравите браћу сву целивом светим.
೨೬ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.
27 Заклињем вас Господом да прочитате ову посланицу пред свом браћом светом.
೨೭ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.
28 Благодат Господа нашег Исуса Христа с вама. Амин.
೨೮ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

< 1 Солуњанима 5 >