< 2 Књига дневника 17 >

1 Тада се зацари Јосафат, син његов, на његово место, и укрепи се на Израиља.
ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.
2 И понамешта војску по свим тврдим градовима Јудиним, и понамешта страже по земљи Јудиној и по градовима Јефремовим, које задоби Аса, отац његов.
ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.
3 И беше Господ с Јосафатом, јер хођаше првим путевима Давида оца свог и не тражаше Вала.
ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
4 Него Бога оца свог тражаше и по заповестима Његовим хођаше, и не чињаше као синови Израиљеви.
ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.
5 Зато утврди Господ царство у руци његовој, и сав народ Јудин даваше даре Јосафату, те имаше велико благо и славу.
ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.
6 И срце се његово ослободи на путевима Господњим, те још обори висине и лугове у Јудеји.
ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.
7 И треће године свог царовања посла кнезове своје Вен-Аила и Овадију и Захарију и Натанаила и Михеју да уче по градовима Јудиним;
ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.
8 И с њима Левите: Семају и Натанију и Зевадију и Асаила и Семирамота и Јонатана и Адонију и Товију и Тов-Адонију, Левите, и с њима Елисаму и Јорама свештенике.
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,
9 И учаху по Јудеји имајући при себи књигу закона Господњег, и прохођаху све градове Јудине учећи народ.
ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.
10 И дође страх Господњи на сва царства по земљама око Јуде, те не војеваше на Јосафата.
೧೦ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.
11 И сами Филистеји доношаху Јосафату даре и данак у новцу; и Арапи догоњаху му стоку, по седам хиљада и седам стотина овнова и по седам хиљада и седам стотина јараца.
೧೧ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.
12 Тако напредоваше Јосафат и подиже се веома; и сазида у Јудеји куле и градове за житнице.
೧೨ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
13 И имаше много добра по градовима Јудиним, и војника, храбрих јунака у Јерусалиму.
೧೩ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.
14 А ово је број њихов по домовима отаца њихових; од Јуде хиљадници: Адна војвода, с којим беше три стотине хиљада храбрих јунака.
೧೪ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
15 А за њим Јоанам војвода, с којим беше двеста осамдесет хиљада;
೧೫ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;
16 А за њим Амасија син Зихријев, који се драговољно даде Господу, и с ким беше двеста хиљада храбрих јунака.
೧೬ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;
17 А од Венијамина: храбри јунак Елијада, с којим беше двеста хиљада наоружаних луком и штитом;
೧೭ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;
18 А за њим Јозавад, с којим беше сто и осамдесет хиљада наоружаних за бој.
೧೮ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು.
19 Ови служаху цару осим оних које понамешта цар по тврдим градовима у свој земљи Јудиној.
೧೯ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.

< 2 Књига дневника 17 >