< 2 Коринћанима 9 >

1 Јер за такву порезу која се купи светима није ми потребно писати вам;
ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.
2 Јер познајем вашу добру вољу, за коју се о вама хвалим Македонцима да се Ахаја припреми од прошле године, и ваша ревност раздражи многе.
ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
3 А браћу послах да се хвала наша вама не испразни у овој ствари, него да будете приготовљени, као што сам говорио;
ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
4 Да се, ако дођу са мном Македонци и међу вас неприготовљене, не осрамотимо ми (да не кажем ви) у тој хвали.
ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
5 Тако нађох да је потребно умолити браћу да напред иду к вама, и да приправе овај напред обречени ваш благослов, да буде готов тако као благослов, а не као лакомство.
ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.
6 Ово пак велим: који с тврђом сеје, с тврђом ће и пожњети; а који благослов сеје, благослов ће и пожњети.
ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
7 Сваки по вољи свог срца, а не са жалошћу или од невоље; јер Бог љуби оног који драговољно даје.
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
8 А Бог је кадар учинити да је међу вама изобилна свака благодат, да у свему свагда свако довољство имајући изобилујете за свако добро дело;
ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
9 Као што је писано: Просу, даде сиромасима; правда његова остаје вавек. (aiōn g165)
“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” (aiōn g165)
10 А који даје семе сејачу, даће и хлеб за јело: и умножиће семе ваше, и даће да узрасту жита правде ваше;
೧೦ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
11 Да се у свему обогатите за сваку простоту која кроз нас чини хвалу Богу.
೧೧ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
12 Јер служба ове порезе не испуњује само недостатак светих, него чини те се и многе хвале дају Богу,
೧೨ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
13 Огледом порезе ове хвалећи Бога за ваше покорно признање јеванђеља Христовог, и за простоту поделе к њима и к свима,
೧೩ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.
14 И да се моле Богу за вас и да чезну за вама за премногу благодат Божју на вама.
೧೪ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.
15 А хвала Богу на Његовом неисказаном дару.
೧೫ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.

< 2 Коринћанима 9 >